ಆ್ಯಪ್ನಗರ

ಮಾದಕ ವಸ್ತುಗಳ ಸೇವನೆ: ಆರೋಗ್ಯದ ಮೇಲೆ ದುಷ್ಪರಿಣಾಮ

ಮಾದಕ ವಸ್ತುಗಳ ಸೇವನೆಗೊಮ್ಮೆ ಒಳಗಾದರೆ, ಅದರಿಂದ ಹೊರಬರುವುದು ಕಷ್ಟ. ಇದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯಕುಮಾರ್‌ ಹೇಳಿದ್ದಾರೆ.

Vijaya Karnataka 27 Jun 2019, 2:46 pm
ಕೋಲಾರ: ಮಾದಕ ವಸ್ತುಗಳ ಸೇವನೆಗೊಮ್ಮೆ ಒಳಗಾದರೆ, ಅದರಿಂದ ಹೊರಬರುವುದು ಕಷ್ಟ. ಇದು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯಕುಮಾರ್‌ ಹೇಳಿದ್ದಾರೆ.
Vijaya Karnataka Web drugs will affect health
ಮಾದಕ ವಸ್ತುಗಳ ಸೇವನೆ: ಆರೋಗ್ಯದ ಮೇಲೆ ದುಷ್ಪರಿಣಾಮ


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ಸಪ್ತಾಹ ಅಂಗವಾಗಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮದ್ಯಪಾನ, ಧೂಮಪಾನದಂತಹ ದುಶ್ಚ್ಚಟಗಳಿಗೆ ಹದಿಹರೆಯದ ವಯಸ್ಸಿನವರು ಒಳಗಾಗುತ್ತಾರೆ. ಒಮ್ಮೆ ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರಬರುವುದು ತುಂಬಾ ಕಷ್ಟ ಎಂಬುದನ್ನು ತಿಳಿಹೇಳಬೇಕಿದೆ ಎಂದರು.

ಆರೋಗ್ಯಾಧಿಕಾರಿ ಡಾ. ಎನ್‌.ಸಿ ನಾರಾಯಣಸ್ವಾಮಿ ಮಾತನಾಡಿ, ಮದ್ಯ, ತಂಬಾಕು,ಡ್ರಗ್ಸ್‌,ಗಾಂಜ,ಅಫೀಮು ಮತ್ತಿತರವು ಮಾದಕ ವಸ್ತುಗಳಾಗಿವೆ. ಇವುಗಳ ಸೇವನೆಯಿಂದ ಮೆದುಳಿನಲ್ಲಿ ಅಸ್ಪಷ್ಟತೆ ಉಂಟಾಗುತ್ತದೆ. ತನ್ನ ಮೇಲೆ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು.

1980ರಲ್ಲಿ 28-30 ವರ್ಷ ವಯೋಮಾನದ ಬಳಿಕ ಮದ್ಯಪಾನ, ಧೂಮಪಾನಕ್ಕೆ ಒಳಗಾಗುತ್ತಿದ್ದರು. ಆದರೆ, ಇತ್ತೀಚೆಗೆ 17-18 ವರ್ಷ ವಯೋಮಾನದವರು ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಇವರು ಸಾಮಾನ್ಯ ವ್ಯಕ್ತಿಗಿಂತ 3 ಪಟ್ಟು ಹೆಚ್ಚು ಕಾಯಿಲೆಗಳಿಗೆ ಒಳಗಾಗುತ್ತಾರೆ. ಸಾವು ಬೇಗ ಸಂಭವಿಸುತ್ತದೆ ಎಂದರು.

ಮಾನಸಿಕ ತಜ್ಞೆ ಡಾ.ಪಾವನಾ ಅವರು ಮಾತನಾಡಿ, ಭಾರತದಲ್ಲಿ 3 ಕೋಟಿ ಮಂದಿ ಮಾದಕ ವ್ಯಸನದಿಂದ ಹೊರ ಬರಲು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರಿಗೆ ವ್ಯಸನದಿಂದ ಹೊರ ಬರಲು ಚಿಕಿತ್ಸೆ ಪಡೆಯಬೇಕು ಎಂಬ ಅರಿವು ಇಲ್ಲ. 10 ವರ್ಷದಲ್ಲಿ ಶೇ.70 ಗಾಂಜ ಸೇವನೆ ಹೆಚ್ಚಾಗಿದೆ. ಈ ಮಾದಕ ವಸ್ತುಗಳ ಸೇವನೆಯಿಂದ ದೂರ ಉಳಿಯಬೇಕಿದೆ ಎಂದು ಹೇಳಿದರು.

ಜಿಲ್ಲಾ ಸರ್ವೇಕ್ಷ ಣಾಧಿಕಾರಿ ಡಾ.ಚಾರಣಿ, ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ.ಭಾರತಿ, ಡಾ.ರಮೇಶ್‌, ಪ್ರಾಂಶುಪಾಲ ಮಂಜುನಾಥ್‌ ಮತ್ತಿತರರು ಭಾಗವಹಿಸಿದ್ದರು. ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ಸಪ್ತಾಹ ಅಂಗವಾಗಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ ಚಾಲನೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ