ಆ್ಯಪ್ನಗರ

KH Muniyappa: ಸಿದ್ದರಾಮಯ್ಯ ಸಿಎಂ ಆದ್ರೆ, ನಾವೂ ಸಿಎಂ ಆದಂತೆ- ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ

KH Muniyappa: ಕಾಂಗ್ರೆಸ್‌ನ ಹಿರಿಯ ನಾಯಕ ಕೆ.ಎಚ್‌.ಮುನಿಯಪ್ಪ ಕೋಲಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ನನ್ನ ಹಿಂದಿನ ಚುನಾವಣೆಯ ಸೋಲಿಗೆ ಸಿದ್ದರಾಮಯ್ಯ ಕಾರಣವಲ್ಲ. ಸಿದ್ದರಾಮಯ್ಯರನ್ನು ಕೋಲಾರದಿಂದ ಗೆಲ್ಲಿಸಬೇಕು. ಅವರು ಮುಖ್ಯಮಂತ್ರಿಯಾದರೆ ನಾವೆಲ್ಲಾ ಮುಖ್ಯಮಂತ್ರಿಯಾದಂತೆ ಎಂದು ಹೇಳಿಕೆ ನೀಡಿದ್ದಾರೆ.

ಹೈಲೈಟ್ಸ್‌:

  • ಸಿದ್ದರಾಮಯ್ಯ ಮುಖ್ಯಮಂತ್ರಿ ಆದ್ರೆ, ನಾವೂ ಮುಖ್ಯಮಂತ್ರಿಯಾದಂತೆ. ಸಿದ್ದರಾಮಯ್ಯ ಅವರ ಯೋಜನೆಗಳನ್ನು ಮನೆ ಮನೆಗೂ ತಲುಪಿಸಲಾಗುವುದು ಎಂದ ಮುನಿಯಪ್ಪ.
  • ನಾನು ಕೋಲಾರದ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಇನ್ನೂ ಫೈನಲ್ ಆಗಿಲ್ಲ, ಹೈಕಮಾಂಡ್‌ ಸ್ಪರ್ಧಿಸಿ ಎಂದರೆ ಚುನಾವಣೆಗೆ ನಿಲ್ಲುತ್ತೇನೆ.
  • ಕಳೆದ ಲೋಕಸಭೆ ಚುನಾವಣೆಯಲ್ಲಿ ನನ್ನ ಸೋಲಿನಲ್ಲಿ ಸಿದ್ದರಾಮಯ್ಯನವರ ಪಾತ್ರ ಏನೂ ಇಲ್ಲ. ನಾವೆಲ್ಲರೂ ಸಿದ್ದರಾಮಯ್ಯ ಗೆಲುವಿಗೆ ಶ್ರಮಿಸುತ್ತೇವೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಕೆಎಚ್‌ ಮುನಿಯಪ್ಪ
ಕೆಎಚ್‌ ಮುನಿಯಪ್ಪ(ಸಂಗ್ರಹ ಚಿತ್ರ)
ಕೋಲಾರ: ಸಿದ್ದರಾಮಯ್ಯ ಮುಖ್ಯಮಂತ್ರಿ ಆದ್ರೆ, ನಾವೂ ಮುಖ್ಯಮಂತ್ರಿಯಾದಂತೆ. ಸಿದ್ದರಾಮಯ್ಯ ಅವರ ಯೋಜನೆಗಳನ್ನು ಮನೆ ಮನೆಗೂ ತಲುಪಿಸಲಾಗುವುದು ಎಂದು ಮಾಜಿ ಸಂಸದ, ಕಾಂಗ್ರೆಸ್‌ ಹಿರಿಯ ನಾಯಕ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ.
ಕೋಲಾರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಚ್ ಮುನಿಯಪ್ಪ, ಸಿದ್ದರಾಮಯ್ಯ ಸ್ಪರ್ಧೆಗೆ ಕೋಲಾರದಲ್ಲಿ ಉತ್ತಮ ವಾತಾವಣ ಇದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರನ್ನು ನಾವು ಗೆಲ್ಲಿಸಿ ಕಳಿಸುತ್ತೇವೆ. ಈ ಮೂಲಕ ಬಯಲು ಸೀಮೆಯನ್ನು ಮಲೆನಾಡು ಮಾಡುತ್ತೇವೆ. ಸಿದ್ದರಾಮಯ್ಯ ಸಿಎಂ ಆದರೆ, ನಾವೂ ಸಿಎಂ ಆದಂತೆ. ಸಿದ್ದರಾಮಯ್ಯ ಅವರ ಯೋಜನೆಗಳನ್ನು ಮನೆ ಮನೆಗೂ ತಲುಪಿಸುತ್ತೇವೆ ಎಂದು ಹೇಳಿದರು.

ನನ್ನ ನೋವನ್ನು ಮರೆತಿದ್ದೇನೆ, ಒಟ್ಟಿಗಿದ್ದೇವೆ

ನಾನು ಕೋಲಾರದ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಇನ್ನೂ ಫೈನಲ್ ಆಗಿಲ್ಲ, ರಾಜ್ಯಾದ್ಯಂತ ಪಕ್ಷದ ಪರ ಕೆಲಸ ಮಾಡಿ ಅಂದರೆ ಮಾಡುವೆ ಅಥವಾ ಹೈಕಮಾಂಡ್‌ ಸ್ಪರ್ಧಿಸಿ ಎಂದರೆ ಚುನಾವಣೆಗೆ ನಿಲ್ಲುತ್ತೇನೆ. ಈ ಹಿಂದಿನ ನನ್ನ ನೋವನ್ನು ಮರೆತಿದ್ದೇನೆ. ರಾಜ್ಯ, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಗೆಲ್ಲಬೇಕು, ಭಿನ್ನಾಭಿಪ್ರಾಯ ಮಾತುಗಳನ್ನು ಯಾರು ನಂಬಬೇಡಿ. ನಾನು, ಖರ್ಗೆ, ಮಹದೇವಪ್ಪ ಸೇರಿದಂತೆ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ ಎಂದರು.

ನನ್ನ ಸೋಲಿನಲ್ಲಿ ಸಿದ್ದರಾಮಯ್ಯ ಪಾತ್ರವಿಲ್ಲ

ಕಳೆದ ಲೋಕಸಭೆ ಚುನಾವಣೆಯಲ್ಲಿ ನನ್ನ ಸೋಲಿನಲ್ಲಿ ಸಿದ್ದರಾಮಯ್ಯನವರ ಪಾತ್ರ ಏನೂ ಇಲ್ಲ. ನಾವೆಲ್ಲರೂ ಸಿದ್ದರಾಮಯ್ಯ ಗೆಲುವಿಗೆ ಶ್ರಮಿಸುತ್ತೇವೆ. ಚುನಾವಣೆ ಮುಗಿದ ನಂತರ ಸಿದ್ದರಾಮಯ್ಯ ಅವರು ಕ್ಷೇತ್ರದ ಉಸ್ತುವಾರಿಗಾಗಿ ಒಬ್ಬರನ್ನು ನೇಮಿಸುತ್ತಾರೆ. ಅವರೇ ಕೋಲಾರ ಕ್ಷೇತ್ರದ ಜನರ ಕಷ್ಟಸುಖಗಳನ್ನು ನೋಡಿಕೊಳ್ಳುತ್ತಾರೆ. ಅಲ್ಪಸಂಖ್ಯಾತರ ಮತಗಳು ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Muniswamy: ಸಿದ್ದರಾಮಯ್ಯರನ್ನ ಸೋಲಿಸದಿದ್ದರೆ ನಾವು ಕೋಲಾರದ ಮಕ್ಕಳೇ ಅಲ್ಲ, ಬಿಜೆಪಿ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಸಂಸದ ಎಸ್‌.ಮುನಿಸ್ವಾಮಿ ಕಿಡಿ

ಧರ್ಮಗಳನ್ನು ಇಬ್ಭಾಗ

ಬಿಜೆಪಿ ಸರ್ಕಾರದಿಂದ ದೇಶ ಅಭಿವೃದ್ಧಿಯಾಗಿಲ್ಲ. ಭ್ರಷ್ಟಾಚಾರ ಹೆಚ್ಚಾಗಿದೆ. ಇದನ್ನು ಜನರಲ್ಲಿ ಮನವರಿಕೆ ಮಾಡುವಲ್ಲಿ ಸಿದ್ದರಾಮಯ್ಯ, ಡಿಕೆಶಿ ಪ್ರಯತ್ನ ಮಾಡುತ್ತಿದ್ದಾರೆ. ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲ, ಹಿಂದೂ, ಮುಸ್ಲಿಮರನ್ನು ಒಡೆದು ಕೋಮುದ್ವೇಶ ಹೆಚ್ಚಿಸುತ್ತಿದ್ದಾರೆ. ಧರ್ಮಗಳನ್ನು ಇಬ್ಭಾಗ ಎಷ್ಟು ದಿನ ರಾಜ್ಯಭಾರ ಮಾಡುತ್ತಾರೆ ಎಂದು ಮುನಿಯಪ್ಪ ವಾಗ್ದಾಳಿ ನಡೆಸಿದರು.

Kolar Assembly Constituency: ಯಾರಿಗೆ ಕೋಲಾರಮ್ಮನ ಆಶೀರ್ವಾದ? ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಮೂರೂ ರಾಜಕೀಯ ಪಕ್ಷಗಳು
ಕಾಂಗ್ರೆಸ್‌ಗೆ ರಾಜ್ಯದ ಜನ ಸ್ಪಂದನೆ
ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್, 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಆಶ್ವಾಸನೆ ನೀಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಎಲ್ಲಾ ಕಡೆ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಸ್ಪಂದನೆ ಸಿಗುತ್ತಿದೆ . ಸಿದ್ದರಾಮಯ್ಯ ಅವಧಿಯಲ್ಲಿ ಯಾವುದೇ ಹಗರಣ ನಡೆದಿಲ್ಲ ಯಾವುದೇ ವರ್ಗದ ಜನರಿಗೂ ಅನ್ಯಾಯವಾಗದಂತೆ ನೋಡಿಕೊಂಡಿದ್ದಾರೆ ಎಂದು ಹೇಳಿದರು.

ತಾಲೂಕುಮಟ್ಟದಲ್ಲಿ ಬಂದ್‌

ಬಿಜೆಪಿ ಶಾಸಕರ ಪುತ್ರನ ಲಂಚಾವತಾರ ಖಂಡಿಸಿ ಮಾರ್ಚ್‌ 9 ರಂದು ರಾಜ್ಯಾದ್ಯಂತ ತಾಲೂಕು ಮಟ್ಟದಲ್ಲಿ ಬಂದ್ ಆಚರಿಸಲಾಗುತ್ತಿದೆ. ಬೆಳಗ್ಗೆ 9 ರಿಂದ 11 ಗಂಟೆವರೆಗೂ ಕೋಲಾರದ ತಾಲೂಕುಗಳಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಮಾಹಿತಿ ನೀಡಿದರು.
ಲೇಖಕರ ಬಗ್ಗೆ
ಜಯಪ್ರಕಾಶ್‌ ಬಿರಾದಾರ್‌
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. ಚಿನ್ನದ ಪದಕದೊಂದಿಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಆರು ವರ್ಷಗಳಿಂದ ರಾಜ್ಯಮಟ್ಟದ ವಿವಿಧ ಪತ್ರಿಕೆಗಳಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ಆರೋಗ್ಯ, ಅರಣ್ಯ, ಸಾರಿಗೆ, ರಾಜಕೀಯ, ಕೊರೊನಾ, ಬೆಂಗಳೂರು ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯದ ಕುರಿತು ಒಂದು ಸಾವಿರಕ್ಕೂ ಅಧಿಕ ವಿಶೇಷ ವರದಿಗಳನ್ನು ಬರೆದಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೊಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ