ಆ್ಯಪ್ನಗರ

ಕಿಲಾರಿಪೇಟೆಯಲ್ಲಿಸಂಭ್ರಮದ ಶ್ರೀಕೃಷ್ಣಜನ್ಮಾಷ್ಟಾಮಿ ಆಚರಣೆ

ನಗರದ ಕಿಲಾರಿಪೇಟೆಯ ಶ್ರೀ ರುಕ್ಮಿಣಿ ಸತ್ಯಭಾಮ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ59ನೇ ವರ್ಷದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮಗಳನ್ನು ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಸಲಾಯಿತು.

Vijaya Karnataka 24 Aug 2019, 2:24 pm
ಕೋಲಾರ: ನಗರದ ಕಿಲಾರಿಪೇಟೆಯ ಶ್ರೀ ರುಕ್ಮಿಣಿ ಸತ್ಯಭಾಮ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ59ನೇ ವರ್ಷದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮಗಳನ್ನು ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಸಲಾಯಿತು.
Vijaya Karnataka Web janmastami celebrated in kolar
ಕಿಲಾರಿಪೇಟೆಯಲ್ಲಿಸಂಭ್ರಮದ ಶ್ರೀಕೃಷ್ಣಜನ್ಮಾಷ್ಟಾಮಿ ಆಚರಣೆ


ಮೂರು ದಿನಗಳಿಂದ ಮುತ್ತೈದೆಯರಿಗೆ ಬಳೆ ತೊಡಿಸುವುದು, ದೀಪೋತ್ಸವ ಸೇವೆ, ಶ್ರೀಕೃಷ್ಣಕೋಟಿ ಭಜನೆ ಸೇರಿದಂತೆ ವಿವಿಧ ಪೂಜಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬಂದಿರುವ ಕಿಲಾರಿಪೇಟೆ ಭಕ್ತಾಧಿಗಳು ಶುಕ್ರವಾರ ಅದ್ದೂರಿಯಾಗಿ ಕಲ್ಯಾಣೋತ್ಸವವನ್ನು ನಡೆಸಿದರು.

ನಗರಸಭೆ ಮಾಜಿ ಸದಸ್ಯ ಮೇಸ್ತ್ರಿ ನಾರಾಯಣಸ್ವಾಮಿ ತಮ್ಮ ಆರ್‌.ವೆಂಕಟೇಶ್‌ ಮತ್ತು ರುಕ್ಮಿಣಿಯಮ್ಮ ದಂಪತಿಗಳು ಮತ್ತು ಅವರ ಕುಟುಂಬದಿಂದ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಶುಕ್ರವಾರ ಮಧ್ಯಾಹ್ನ ದೇವಾಲಯದ ಮುಂಭಾಗ ನೂರಾರು ಭಕ್ತರ ಸಮ್ಮುಖದಲ್ಲಿಶಾಸ್ತೊ್ರೕಕ್ತವಾಗಿ ಮಂಗಳವಾದ್ಯ, ಮೇಳದೊಂದಿಗೆ ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿಶ್ರೀ ರುಕ್ಮಿಣಿ ಸತ್ಯಭಾಮಾ ಶ್ರೀವೇಣುಗೋಪಾಲಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಕಲ್ಯೋಣೋತ್ಸವದ ನಂತರ ನೆರೆದಿದ್ದ ನೂರಾರು ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಇಡೀ ದೇವಾಲಯವನ್ನು ಹೂಗಳಿಂದ ಅಲಂಕರಿಸಲಾಗಿದ್ದು, ನೂರಾರು ಮಂದಿ ಸ್ವಾಮಿಯ ದರ್ಶನ ಪಡೆದರು.

ಸಂಜೆ ಶ್ರೀಕೃಷ್ಣಜನ್ಮಾಷ್ಟಮಿ ಅಂಗವಾಗಿ ಆಯೋಜಿಸಲಾಗಿದ್ದ ದೇವರ ಪುಷ್ಪಪಲ್ಲಕ್ಕಿ ಮೆರವಣಿಗೆಯು ನಗರದ ರಾಜಬೀದಿಗಳಲ್ಲಿಸಂಚರಿಸಿದ್ದು, ಡೊಳ್ಳುಕುಣಿತ, ವೀರಗಾಸೆ, ತಮಟೆ ಮತ್ತಿತರ ಜಾನಪದ ಕಲಾಪ್ರಕಾರಗಳೊಂದಿಗೆ ಮನಸೂರೆಗೊಂಡಿತು.

ಕಾರ್ಯಕ್ರಮದಲ್ಲಿನಗರಸಭೆ ಮಾಜಿ ಸದಸ್ಯರಾದ ಮೇಸ್ತ್ರೀ ನಾರಾಯಣಸ್ವಾಮಿ, ಮುಕ್ಕಡ್‌ ವೆಂಕಟೇಶ್‌, ಗೋಕುಲ ವಿ.ನಾರಾಯಣಸ್ವಾಮಿ, ಶಬರೀಷ್‌, ರಮೇಶ್‌, ಚೌಡಪ್ಪ, ಮುನಿಸ್ವಾಮಪ್ಪ, ವೆಂಕಟಪ್ಪ, ಕೆ.ಎನ್‌.ವೆಂಕಟೇಶ್‌, ಮುನಿಕೃಷ್ಣ, ರಾಮಕೃಷ್ಣ, ರಮೇಶ್‌, ಮುನಿವೆಂಕಟಸ್ವಾಮಪ್ಪ, ಮುನಿರಾಜಪ್ಪ, ಗೋವಿಂದಪ್ಪ ಸೇರಿದಂತೆ ಕಿಲಾರಿಪೇಟೆಯ ಯಾದವ ಸಮುದಾಯದವರು ಸೇರಿದಂತೆ ಕೋಲಾರ ನಗರದ ಪ್ರಮುಖರು ಈ ಕಾರ್ಯಕ್ರಮಗಳಲ್ಲಿಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ