ಆ್ಯಪ್ನಗರ

ಕೋಲಾರಮ್ಮ ಕೆರೆಗೆ ಕೆಸಿ ವ್ಯಾಲಿ ನೀರು: ಸಚಿವ ಎಚ್‌.ನಾಗೇಶ್‌ ಭರವಸೆ

ಕೋಲಾರಮ್ಮ ಕೆರೆಗೆ ಮುಂದಿನ ಎರಡು ತಿಂಗಳಲ್ಲಿ ಕೆ.ಸಿ.ವ್ಯಾಲಿ ನೀರು ಹರಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಭರವಸೆ ನೀಡಿದ್ದಾರೆ.

Vijaya Karnataka Web 20 May 2020, 7:48 am
ಕೋಲಾರ: ಜಿಲ್ಲಾ ಕೇಂದ್ರದ ಕೋಲಾರಮ್ಮ ಕೆರೆಗೆ ಮುಂದಿನ ಎರಡು ತಿಂಗಳಲ್ಲಿ ಹಾಗೂ ಮುಳಬಾಗಿಲು ತಾಲೂಕು ಕೆರೆಗಳಿಗೆ ಮುಂದಿನ ಮೂರು ತಿಂಗಳಲ್ಲಿ ಕೆ.ಸಿ.ವ್ಯಾಲಿ ನೀರು ಹರಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಭರವಸೆ ನೀಡಿದರು. ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಕೆ.ಸಿ.ವ್ಯಾಲಿ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಣ್ಣ ನೀರಾವರಿ ಇಲಾಖೆ ತ್ವರಿತಗತಿಯಲ್ಲಿ ಕೆ.ಸಿ.ವ್ಯಾಲಿ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ನೀರಿನ ದುರ್ಬಳಕೆ ತಡೆದು ಜಿಲ್ಲೆಯ ಎಲ್ಲ ಕೆರೆಗಳಿಗೆ ನೀರು ಹರಿಸಬೇಕಿದೆ ಎಂದರು.
Vijaya Karnataka Web H. nagesh


ಕೆ.ಸಿ.ವ್ಯಾಲಿ ನೀರು ಹರಿಯುವ ಕಾಲುವೆ ಇಕ್ಕೆಲಗಳಲ್ಲಿ ಕೊಳವೆಬಾವಿ, ಕೃಷಿ ಹೊಂಡ ತೆರವಿನ ಜತೆಗೆ ಅಕ್ರಮ ನೀರಿನ ಸಂಪರ್ಕ ಪಡೆದುಕೊಂಡಿರುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ ಎಂದು ಹೇಳಿದರು. ಕೆ.ಸಿ.ವ್ಯಾಲಿ ನೀರು ಹರಿಯುವ ಮಾರ್ಗದಲ್ಲಿ ನಿರ್ಮಿಸಿರುವ ಚೆಕ್‌ಡ್ಯಾಂ ಎತ್ತರ ತಗ್ಗಿಸಿ, ಎರಡು ಅಡಿಗಳಷ್ಟು ನೀರನ್ನು ಚೆಕ್‌ಡ್ಯಾಂನಲ್ಲಿಯೇ ಉಳಿಸಲು ಸೂಚಿಸಲಾಗಿದೆ.

ಅಂತರ್ಜಲ ಮಟ್ಟ ಹೆಚ್ಚಳದ ಉದ್ದೇಶ ಇದರಿಂದ ಈಡೇರಿದಂತಾಗುತ್ತದೆ ಎಂದು ಸ್ಪಷ್ಟನೆ ನೀಡಿದರು. ಮಾವು ಬೆಳೆಗಾರರು ಮದ್ಯವರ್ತಿಗಳ ಮೇಲೆ ಅವಲಂಬನೆಯಾಗದಂತೆ ನೇರವಾಗಿ ಮಾರಾಟ ಮಾಡಲು ಮುಂದಾದರೆ, ಹೆಚ್ಚಿನ ಲಾಭ ದೊರೆಯುತ್ತದೆ. ಆ ನಿಟ್ಟಿನಲ್ಲಿ ಮಾವು ಬೆಳೆಗಾರರು ಯೋಜನೆ ಮಾಡಬೇಕು ಎಂದು ಸಲಹೆ ನೀಡಿದರು.

ಲಾಕ್‌ಡೌನ್‌ ಸಡಿಲಿಕೆಯ ನಂತರ ಅಂತರಾಜ್ಯ ಬಸ್‌ ಸಂಚಾರಕ್ಕೆ ಅವಕಾಶ ನೀಡಿಲ್ಲ. ಮೇ 31ರ ಬಳಿಕ ಅವಕಾಶ ಸಿಗುವ ಸಾಧ್ಯತೆಯಿದೆ. ಮುಂಬ ರುವ ಎರಡು ಭಾನುವಾರವನ್ನು ಸರಕಾರ ಸಂಪೂರ್ಣ ಲಾಕ್‌ಡೌನ್‌ ಘೋಷಿಸಿದ್ದು, ಮದ್ಯದಂಗಡಿ ಬಂದ್‌ ಮಾಡುವ ಬಗ್ಗೆ ಮುಖ್ಯ ಮಂತ್ರಿಗಳೊಂದಿಗೆ ಮಾತನಾಡಲಾಗುವುದು ಎಂದು ಹೇಳಿದರು.

ಮದ್ಯ ಮಾರಾಟ ಕಡಿಮೆ
ಲಾಕ್‌ಡೌನ್‌ ಸಡಲಿಕೆಯ ನಂತರದ ಮೊದಲ ದಿನ ಉತ್ತಮ ವಹಿವಾಟು ನಡೆದು ಹೆಚ್ಚಿನ ಆದಾಯ ಸಂಗ್ರಹವಾಗಿತ್ತು. ಇದೀಗ ದಿನದಿಂದ ದಿನಕ್ಕೆ ಮದ್ಯ ಮಾರಾಟ ಪ್ರಮಾಣ ಕಡಿಮೆಯಾಗುತ್ತಿದ್ದು, ಶೇ.40 ಮದ್ಯದ ಅಂಗಡಿಗಳು ಮಾತ್ರ ತೆರೆದಿವೆ ಎಂದು ನಾಗೇಶ್‌ ಮಾಹಿತಿ ನೀಡಿದರು.

ಸೋಂಕಿತರ ಸ್ಥಳಾಂತರದ ಬಗ್ಗೆ ಮಾಹಿತಿಯಿಲ್ಲ
ಜಾಲಪ್ಪ ಆಸ್ಪತ್ರೆಯಲ್ಲಿದ್ದ ಕೊರೊನಾ ಸೋಂಕಿ ತರನ್ನು ದಿಢೀರ್‌ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿರುವುದು ತಮ್ಮ ಗಮನಕ್ಕೆ ಬಂದಿರಲಿಲ್ಲ. ಸೋಂಕಿತರಿಗೆ ಚಿಕಿತ್ಸೆ ನೀಡಲು ಸರಕಾರಿ ಆಸ್ಪತ್ರೆ ಗಳನ್ನು ಆದ್ಯತೆಯಾಗಿ ತೆಗೆದುಕೊಳ್ಳ ಬೇಕೆಂದು ಆರೋಗ್ಯ ಇಲಾಖೆಯಿಂದ ನಿರ್ದೇಶನ ಬಂದಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವಿವರಿಸಿದರು. ಸಭೆಯಲ್ಲಿ ಶಾಸಕ ಕೆ.ಶ್ರೀನಿವಾಸಗೌಡ, ಜಿಪಂ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್‌, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿಪಂ ಸಿಇಒ ಎಚ್‌.ವಿ. ದರ್ಶನ್‌, ಎಇ ಸುರೇಶ್‌ ಬಾಬು, ಎಇಇ ಕೃಷ್ಣ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ