ಆ್ಯಪ್ನಗರ

ಕೆ.ಎಚ್‌ ಮುನಿಯಪ್ಪಗೆ ಜೆಡಿಎಸ್‌ ಬೆಂಬಲ ಇಲ್ಲ : ಮಂಜುನಾಥ್‌ಗೌಡ

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷ ದ ಅಭ್ಯರ್ಥಿಗಳ ಗೆಲುವಿಗೆ ಕೈ ಜೋಡಿಸದ ಕಾಂಗ್ರೆಸ್‌ ಮುಖಂಡರಿಗೆ ಜಿಲ್ಲೆಯಲ್ಲಿ ಜೆಡಿಎಸ್‌ ಬೆಂಬಲ ನೀಡುವುದಿಲ್ಲ. ಕಾರ್ಯಕರ್ತರ ಒಮ್ಮತದ ಮೆರೆಗೆ ನೈತಿಕವಾಗಿ ಒಳ್ಳೆಯ ಅಭ್ಯರ್ಥಿಯನ್ನು ಈ ಕ್ಷೇತ್ರದಿಂದ ಲೋಕಸಭೆಗೆ ಹಾರಿಸಿ ಕಳುಹಿಸೋಣ ಎಂದು ಮಾಜಿ ಶಾಸಕ ಕೆ.ಎಸ್‌. ಮಂಜುನಾಥಗೌಡ ಹೇಳಿದರು.

Vijaya Karnataka 20 Mar 2019, 9:32 pm
ಮಾಲೂರು: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷ ದ ಅಭ್ಯರ್ಥಿಗಳ ಗೆಲುವಿಗೆ ಕೈ ಜೋಡಿಸದ ಕಾಂಗ್ರೆಸ್‌ ಮುಖಂಡರಿಗೆ ಜಿಲ್ಲೆಯಲ್ಲಿ ಜೆಡಿಎಸ್‌ ಬೆಂಬಲ ನೀಡುವುದಿಲ್ಲ. ಕಾರ್ಯಕರ್ತರ ಒಮ್ಮತದ ಮೆರೆಗೆ ನೈತಿಕವಾಗಿ ಒಳ್ಳೆಯ ಅಭ್ಯರ್ಥಿಯನ್ನು ಈ ಕ್ಷೇತ್ರದಿಂದ ಲೋಕಸಭೆಗೆ ಹಾರಿಸಿ ಕಳುಹಿಸೋಣ ಎಂದು ಮಾಜಿ ಶಾಸಕ ಕೆ.ಎಸ್‌. ಮಂಜುನಾಥಗೌಡ ಹೇಳಿದರು.
Vijaya Karnataka Web kh muniyappa does not support jds manjunath gowda
ಕೆ.ಎಚ್‌ ಮುನಿಯಪ್ಪಗೆ ಜೆಡಿಎಸ್‌ ಬೆಂಬಲ ಇಲ್ಲ : ಮಂಜುನಾಥ್‌ಗೌಡ


ಪಟ್ಟಣದ ಅರಳೇರಿ ರಸ್ತೆಯಲ್ಲಿರುವ ಎಚ್‌ವಿಆರ್‌ ಕನ್ವೆಷನ್‌ ಸಭಾಂಗಣದಲ್ಲಿ ನಡೆದ ತಾಲೂಕು ಜೆಡಿಎಸ್‌ ಕಾರ್ಯಕರ್ತರ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 7 ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿರುವ ಕೆ.ಎಚ್‌. ಮುನಿಯಪ್ಪ ಅವರು ಜಿಲ್ಲೆಗೆ ನೀಡಿರುವ ಕೊಡುಗೆಯಾದರೂ ಏನು ? ಜಿಲ್ಲೆಯಲ್ಲಿ ಎಲ್ಲ ಸಮುದಾಯಗಳನ್ನು ತುಳಿಯುವುದರ ಮೂಲಕ ರಾಜಕಾರಣ ಮಾಡಿಕೊಂಡು ಆಡಳಿತ ನಡೆಸಿರುವುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಇದನ್ನು ತಡೆಗಟ್ಟುವಲ್ಲಿ ಸಂಸದರು ವಿಫಲರಾಗಿದ್ದಾರೆ. ತಮ್ಮ ಹಾಗೂ ತಮ್ಮ ಕುಟುಂಬದವರ ಹೆಸರಿನಲ್ಲಿ ನೂರಾರು ಎಕರೆ ಜಮೀನು ಮಾಡಿಕೊಂಡು ಅಭಿವೃದ್ಧಿ ಕಡೆಗಣಿಸಿರುವ ಕೆ.ಎಚ್‌.ಮುನಿಯಪ್ಪ ಅವರ ಪರವಾಗಿ ಯಾವ ಮುಖ ಇಟ್ಟುಕೊಂಡು ಮತಯಾಚನೆ ಮಾಡಬೇಕು ಎಂದು ಪ್ರಶ್ನಿಸಿದರು.

ಸಂಸದ ಕೆ.ಎಚ್‌.ಮುನಿಯಪ್ಪ ಅವರ ವಿರುದ್ಧ ಸ್ವಪಕ್ಷ ದವರಿಂದಲೇ ತೀವ್ರ ವಿರೋಧ ವ್ಯಕ್ತವಾಗುತ್ತಿರುವುದರಿಂದ ಈ ಭಾರಿ ಕೆ.ಎಚ್‌.ಮುನಿಯಪ್ಪ ಅವರಿಗೆ ಸೋಲು ಖಚಿತ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಜೆಡಿಎಸ್‌ ಪಕ್ಷ ದ ಎಲ್ಲ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರ ನೇತೃತ್ವದಲ್ಲಿ ತಾಲೂಕಿನ ಪ್ರತಿಯೊಂದು ಹಳ್ಳಿ ಹಳ್ಳಿಗೂ ತೆರಳಿ ಒಮ್ಮತದ ಅಭ್ಯರ್ಥಿ ಪರವಾಗಿ ಮತಯಾಚಿಸುತ್ತೇನೆ. ಯಾವುದೇ ಕಾರಣಕ್ಕೂ ಕೆ.ಎಚ್‌.ಮುನಿಯಪ್ಪ ಅವರಿಗೆ ತಮ್ಮ ಬೆಂಬಲ ಇಲ್ಲ ಎಂದು ಹೇಳಿದರು.

ಜಿ.ಪಂ. ಉಪಾಧ್ಯಕ್ಷೆ ಯಶೋಧಮ್ಮ, ಸದಸ್ಯರಾದ ಚಿನ್ನಸ್ವಾಮಿಗೌಡ, ಎಚ್‌.ವಿ. ಶ್ರೀನಿವಾಸ್‌, ಭಾಗ್ಯವತಿ ನಾರಾಯಣಪ್ಪ, ಮಾಜಿ ಸದಸ್ಯ ರಾಮಸ್ವಾಮಿ ರೆಡ್ಡಿ, ತಾ.ಜೆಡಿಎಸ್‌ ಅಧ್ಯಕ್ಷ ಚಂದ್ರಶೇಖರ್‌ ಗೌಡ, ನಗರಾಧ್ಯಕ್ಷ ಟಿ.ರಾಮಚಂದ್ರ, ಕೋಚಿಮುಲ್‌ ಮಾಜಿ ಅಧ್ಯಕ್ಷ ಡಾ.ಎ.ವಿ.ಪ್ರಸನ್ನ, ವಕೀಲರ ಸಂಘದ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ, ತಾ.ಪಂ. ಅಧ್ಯಕ್ಷೆ ತ್ರಿವರ್ಣ ರವಿ, ಉಪಾಧ್ಯಕ್ಷೆ ನಾಗವೇಣಿ, ಸ್ಥಾಯಿಸಮಿತಿ ಅಧ್ಯಕ್ಷ ವಿ.ನಾಗೇಶ್‌, ಸದಸ್ಯರಾದ ಶ್ರೀನಾಥ್‌, ಸದಾನಂದ, ಗೋವಿಂದರಾಜು, ಆರ್‌.ಎ.ಅಬ್ಬಯ್ಯ, ಸುಮಿತ್ರ ಮಲ್ಲಿಕಾರ್ಜುನ, ಎಪಿಎಂಸಿ ಸದಸ್ಯರಾದ ಚಂದ್ರಶೇಖರ್‌, ಬೆಳ್ಳಾವಿ ಸೋಮಣ್ಣ, ಪಟ್ಲಪ್ಪ, ಪುರಸಭಾ ಸದಸ್ಯ ಪಚ್ಚಪ್ಪ, ಮುಖಂಡರಾದ ಪಂಚೆನಂಜುಂಡಪ್ಪ, ದಿನೇಶ್‌ಗೌಡ, ಬಲ್ಲಹಳ್ಳಿ ನಾರಾಯಣಸ್ವಾಮಿ, ವಿಜಯಲಕ್ಷ್ಮಿ, ಟೇಕಲ್‌ ನಾರಾಯಣಸ್ವಾಮಿ, ಮುನಿಸ್ವಾಮಿಗೌಡ, ಮಾದನಹಟ್ಟಿ ರವಿ, ಕುಮಾರ್‌ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ