ಆ್ಯಪ್ನಗರ

ಹಾಲು ಉತ್ಪಾದಕ ಕೇಂದ್ರಗಳಲ್ಲಿ ಸೋಲಾರ್‌ ಅಳವಡಿಕೆ: ಕೋಚಿಮುಲ್‌ ಅಧ್ಯಕ್ಷ ಕೆ.ವೈ. ನಂಜೇಗೌಡ

ಹಾಲು ಉತ್ಪಾದಕ ಕೇಂದ್ರಗಳಲ್ಲಿ ಒಕ್ಕೂಟದ ವತಿಯಿಂದ ಸೋಲಾರ್‌ ಅಳವಡಿಸಿ, ವಿದ್ಯುತ್‌ ಸಮಸ್ಯೆ ನೀಗಿಸಲು ಕೋಚಿಮಲ್‌ ಮುಂದಾಗಿರುವುದಾಗಿ ಶಾಸಕ ಹಾಗೂ ಕೋಚಿಮುಲ್‌ ಅಧ್ಯಕ್ಷ ಕೆ.ವೈ.ನಂಜೇಗೌಡ ಹೇಳಿದರು.

Vijaya Karnataka 3 Nov 2021, 10:40 pm
ಮಾಲೂರು: ಎರಡು ಜಿಲ್ಲೆಗಳಲ್ಲಿ ಬಿಎಂಸಿ ಹೊಂದಿರುವ ಹಾಲು ಉತ್ಪಾದಕ ಕೇಂದ್ರಗಳಲ್ಲಿ ಒಕ್ಕೂಟದ ವತಿಯಿಂದ ಸೋಲಾರ್‌ ಅಳವಡಿಕೆಗೆ ಒಕ್ಕೂಟದ ನಿರ್ದೇಶಕ ಮಂಡಳಿ ಸಭೆಯಲ್ಲಿ ಚರ್ಚಿಸಿ ವಿದ್ಯುತ್‌ ಸಮಸ್ಯೆ ನೀಗಿಸಲು ಸೋಲಾರ್‌ ಅಳವಡಿಸಲು ಕೋಚಿಮಲ್‌ ಮುಂದಾಗಿರುವುದಾಗಿ ಶಾಸಕ ಹಾಗೂ ಕೋಚಿಮುಲ್‌ ಅಧ್ಯಕ್ಷ ಕೆ.ವೈ.ನಂಜೇಗೌಡ ಹೇಳಿದರು.
Vijaya Karnataka Web solar panels


ಪಟ್ಟಣದ ಕೋಚಿಮುಲ್‌ ಶಿಬಿರ ಕಚೇರಿ ಸಭಾಂಗಣದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಸಂಘಗಳ ಅಧ್ಯಕ್ಷರಿಗೆ ಮತ್ತು ಕಾರ್ಯದರ್ಶಿಗಳಿಗೆ ಶುದ್ಧ ಹಾಲು ಉತ್ಪಾದನೆ ಹಾಗೂ ರಾಸುಗಳ ಕಾಲುಬಾಯಿ ರೋಗದ ನಿರ್ವಹಣೆ ಕುರಿತು 1 ದಿನದ ವಿಶೇಷ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋಚಿಮುಲ್‌ ಪಾಲು ಕಿತ್ತುಕೊಂಡ ಸಚಿವ ರೇವಣ್ಣ

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಾಲು ಉತ್ಪಾದಕ ಸಹಕಾರ ಸಂಘಗಳಲ್ಲಿ ಅಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿರುವುದರಿಂದ ಗುಣಮಟ್ಟ ಹಾಗೂ ಹೆಚ್ಚುವರಿ ಹಾಲು ಸಂಗ್ರಹವಾಗುತ್ತಿದೆ. ಹಾಲು ಉತ್ಪಾದನೆಯನ್ನು ಹೆಚ್ಚಿಸಲು ಹಲವು ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ಹಾಲು ಉತ್ಪಾದಕ ಕೇಂದ್ರಗಳಲ್ಲಿ ರಾಜಕಾರಣ ಮಾಡಿದರೆ ಹಾಲು ಉತ್ಪಾದಕ ಸಹಕಾರ ಸಂಘಗಳು ಅಭಿವೃದ್ಧಿ ಹೊಂದುವುದಿಲ್ಲ. ಸಹಕಾರ ಸಂಘಗಳ ಅಧ್ಯಕ್ಷ ಕಾರ್ಯದರ್ಶಿಗಳು ಗುಣಮಟ್ಟದ ಹಾಲನ್ನು ಪಡೆಯಬೇಕು. ಅಲ್ಲದೆ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಹೇಳಿದರು.

ಹಾಲು ಉತ್ಪಾದನೆಯಲ್ಲಿ ಚನ್ನರಾಯಪಟ್ಟಣಕ್ಕೆ ಮೊದಲ ಸ್ಥಾನ: ಸಿ.ಎನ್‌. ಬಾಲಕೃಷ್ಣ!

ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಮಾಲೂರು ತಾಲೂಕಿನ ಹಾಲು ಉತ್ಪಾದಕ ಕೇಂದ್ರಗಳು ಶೇಕಡ 95ರಷ್ಟು ಗುಣಮಟ್ಟದ ಹಾಲನ್ನು ಸಂಗ್ರಹಿಸುತ್ತಿದೆ. ರಾಜ್ಯದಲ್ಲಿಯೇ ಗುಣಮಟ್ಟ ಹಾಗೂ ಹೆಚ್ಚಿನ ಹಾಲನ್ನು ಸಂಗ್ರಹಿಸುವ ಮೂಲಕ ಮಾದರಿಯಾಗಿರಬೇಕು. ಅಧ್ಯಕ್ಷ ಕಾರ್ಯದರ್ಶಿಗಳು ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಸಮಯಕ್ಕೆ ಸರಿಯಾಗಿ ಉತ್ಪಾದಕರಿಗೆ ಒಕ್ಕೂಟದಿಂದ ಬರುವ ಸವಲತ್ತುಗಳನ್ನು ಒದಗಿಸಬೇಕು. ಅಲ್ಲದೆ ಕಾಲಕಾಲಕ್ಕೆ ತಮ್ಮ ರಾಸುಗಳ ತಪಾಸಣೆ ಮಾಡಿಸಿಕೊಳ್ಳಬೇಕು. ಒಕ್ಕೂಟ ನೀಡುವ ವಿಮಾ ಪರಿಹಾರ ಕಂತಿನ ಜತೆಗೆ ತಾವು ತಮ್ಮ ಕಂತಿನ ಹಣದಿಂದ ಪ್ರತಿಯೊಬ್ಬರು ತಮ್ಮ ರಾಸುಗಳಿಗೆ ಜೀವವಿಮೆ ಮಾಡಿಸಬೇಕು ಎಂದರು.

ಲಾಕ್‌ಡೌನ್‌ನಲ್ಲಿ ಹೆಚ್ಚಿದ ಕ್ಷೀರೋತ್ಪಾದನೆ: ಆದರೆ, ಬೇಡಿಕೆ ಕುಗ್ಗಿ ಮಾರಾಟವಾಗದ ಹಾಲು!

ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಅ.ಮು. ಲಕ್ಷ್ಮೀ ನಾರಾಯಣ್‌, ಉಪಾಧ್ಯಕ್ಷ ಗೋವರ್ಧನ್‌ ರೆಡ್ಡಿ, ಕೋಚಿಮುಲ್‌ ನಿರ್ದೇಶಕಿ ಆರ್‌. ಕಾಂತಮ್ಮ ಅಂಜನಿ ಸೋಮಣ್ಣ, ನಿರ್ದೇಶಕ ಎಂ. ಶಂಕರ್‌ ನಾರಾಯಣಗೌಡ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಕೆ. ಎಚ್‌. ಚನ್ನರಾಯಪ್ಪ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ರಾಮಸ್ವಾಮಿ, ಸಹಕಾರ ಸಂಘಗಳ ಉಪನಿಬಂಧಕ ಎಂ. ವೆಂಕಟೇಶ್‌, ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಮಹೇಶ್‌, ವ್ಯವಸ್ಥಾಪಕ ಶ್ರೀನಿವಾಸಗೌಡ, ಡಾ.ಕೆಂಪರಾಜು, ಉಪ ವ್ಯವಸ್ಥಾಪಕ ಡಾ.ಚೇತನ್‌, ಸಂಘಗಳ ಹಿರಿಯ ನಿರೀಕ್ಷಕ ಎಂ.ಜಗದೀಶ್‌, ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ.ಭಾರತಿ, ಸಹಾಯಕ ವ್ಯವಸ್ಥಾಪಕರು ಹಾಗೂ ವಿಸ್ತರಣಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

3 ಮಾಲೂರು ಫೋಟೊ 1. ಮಾಲೂರಿನ ಕೋಚಿಮುಲ್‌ ಶಿಬಿರ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಾಮಂಡಳಿ ಜಿಲ್ಲಾ ಸಹಕಾರ ಒಕ್ಕೂಟ ಸಭೆಯಲ್ಲಿ ಶಾಸಕ ಹಾಗೂ ಕೋಚಿಮುಲ್‌ ಅಧ್ಯಕ್ಷ ಕೆ.ವೈ.ನಂಜೇಗೌಡ ಮಾತನಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ