ಆ್ಯಪ್ನಗರ

ಕೊಟ್ಟ ಮಾತಿನಂತೆ ಬಿಜೆಪಿ ನಡೆದುಕೊಳ್ಳಬೇಕು, 'ಅರ್ಹ' ಶಾಸಕರು ಒತ್ತಡ ಹಾಕೋದು ತಪ್ಪೇನಲ್ಲ: ಸಚಿವ ನಾಗೇಶ್

ಶಾಸಕರು ಬ್ಲಾಕ್‌ಮೇಲ್‌ ಮಾಡಿರುವುದು ಅವರ ವೈಯಕ್ತಿಕ ವಿಚಾರ ಎಂದ ಸಚಿವ ನಾಗೇಶ್, ಸಂಪುಟ ವಿಸ್ತರಣೆ ವಿಳಂಬ ಮಾಡಿರುವುದರಿಂದ ಮುಖ್ಯಮಂತ್ರಿ ಮೇಲೆ ಒತ್ತಡ ಹಾಕುವುದರಲ್ಲಿ ತಪ್ಪೇನಿಲ್ಲ ಎಂದು ಅಭಿಪ್ರಾಯಪಟ್ಟರು.

Vijaya Karnataka 3 Jan 2020, 5:06 pm
ಕೋಲಾರ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಧನುರ್ಮಾಸ, ಶೂನ್ಯ ಮಾಸ ಅಡ್ಡ ಬಂದಿದೆ. ಹೀಗಾಗಿ, ಸಂಕ್ರಾಂತಿ ಬಳಿಕ ವಿಸ್ತರಣೆ ಮಾಡಲಿದ್ದಾರೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ತಿಳಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಳಂಬದಿಂದ ಶಾಸಕರಲ್ಲಿ ಅಸಮಾಧಾನ ಆಗಿರಬಹುದು. ಹೀಗಾಗಿ ಬಿಜೆಪಿ ನಾಯಕರು ಮಾತು ಕೊಟ್ಟಿರುವಂತೆ ನಡೆದುಕೊಳ್ಳಬೇಕು ಎಂದು ನಾಗೇಶ್‌ ತಾಕೀತು ಮಾಡಿದರು.
Vijaya Karnataka Web nagesh
ಕೊಟ್ಟ ಮಾತಿನಂತೆ ಬಿಜೆಪಿ ನಡೆದುಕೊಳ್ಳಬೇಕು, 'ಅರ್ಹ' ಶಾಸಕರು ಒತ್ತಡ ಹಾಕೋದು ತಪ್ಪೇನಲ್ಲ: ಸಚಿವ ನಾಗೇಶ್


ಕೋಲಾರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂಗೆ ಪರಮಾಧಿಕಾರ ಇರುವುದರಿಂದ ಅವರೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು. ಶಾಸಕರ ನಿಯೋಗ ಹೋಗಿ ಬಂದಿರುವುದು ನನಗೆ ಗೊತ್ತಿದೆ ಎಂದ ನಾಗೇಶ್, ಬ್ಲಾಕ್‌ಮೇಲ್‌ ಮಾಡಿರುವುದು ಅವರ ವೈಯಕ್ತಿಕ ವಿಚಾರ ಎಂದರು. ಸಂಪುಟ ವಿಸ್ತರಣೆ ವಿಳಂಬ ಮಾಡಿರುವುದರಿಂದ ಮುಖ್ಯಮಂತ್ರಿ ಮೇಲೆ ಒತ್ತಡ ಹಾಕುವುದರಲ್ಲಿ ತಪ್ಪೇನಿಲ್ಲ ಎಂದು ನಾಗೇಶ್ ಅಭಿಪ್ರಾಯಪಟ್ಟರು.

15 ದಿನದಲ್ಲಿಆಸ್ಪತ್ರೆ ಕಟ್ಟಡ ಉದ್ಘಾಟನೆ: ನೀತಿಸಂಹಿತೆ ಕಾರಣದಿಂದಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ ವಿಳಂಬವಾಗಿದೆ ಎಂದು ಸ್ಪಷ್ಟನೆ ನೀಡಿದ ಸಚಿವ ನಾಗೇಶ್, 15 ದಿನಗಳ ಒಳಗಾಗಿ ಉದ್ಘಾಟನೆ ಮಾಡಲಿದ್ದೇವೆ ಎಂದರು. ಈ ಸಂಬಂಧ ಆರೋಗ್ಯ ಸಚಿವ ಶ್ರೀರಾಮುಲು ಅವರೊಂದಿಗೆ ಚರ್ಚಿಸಲಾಗಿದ್ದು, ದಿನಾಂಕ ನಿಗದಿಪಡಿಸಲಿದ್ದಾರೆ ಎಂದು ನಾಗೇಶ್ ಹೇಳಿದರು.

ಸಂಪುಟ ವಿಸ್ತರಣೆಯಲ್ಲಿ ಪಂಚಮಸಾಲಿ ಸಮುದಾಯದ ಕನಿಷ್ಠ ಇಬ್ಬರಿಗೆ ಸಚಿವ ಸ್ಥಾನ ನೀಡಲಿ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಇನ್ನು, ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ 20,950 ಕೋಟಿ ಸರಕಾರದ ಗುರಿಯಲ್ಲಿ ಈಗಾಗಲೇ 1650 ಕೋಟಿ ತಲುಪಿದ್ದು, ಮುಂದಿನ 3 ತಿಂಗಳಲ್ಲಿ ನಿಗದಿತ ಗುರಿ ಮುಟ್ಟುತ್ತೇವೆ ಎಂದು ನಾಗೇಶ್ ಹೇಳಿದ್ದಾರೆ. ಆನ್‌ಲೈನ್‌ ಮಾರಾಟ ವಿಚಾರವಾಗಿ ಮುಂದಿನ ದಿನಗಳಲ್ಲಿ ಚರ್ಚಿಸುವುದಾಗಿಯೂ ನಾಗೇಶ್ ತಿಳಿಸಿದರು.

ತುಮಕೂರಿನಲ್ಲಿ ಗುರುವಾರ ನಡೆದ ಪ್ರಧಾನಮಂತ್ರಿಯವರ ರೈತ ಸಮಾವೇಶಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಕಡಿಮೆ ಬೆಲೆಯಲ್ಲಿ ಹೆಚ್ಚಿನ ಬೆಳೆಗಳನ್ನು ಬೆಳೆಯುವ ಸೇರಿದಂತೆ ಮಾದರಿ ರೈತರನ್ನು ಪ್ರೋತ್ಸಾಹಿಸಲಾಯಿತು, ಕಾರ್ಯಕ್ರಮ ನಡೆಸಲು ಕರ್ನಾಟಕ ಅದರಲ್ಲಿಯೂ ತುಮಕೂರನ್ನು ಆಯ್ಕೆ ಮಾಡಿರುವುದು ಸಾಕಷ್ಟು ಸಂತಸ ತಂದಿದೆ ಎಂದು ಹೇಳಿದರು.

ಸಚಿವರಾಗುವವರ ಪಟ್ಟಿ ಕೋರ್‌ ಕಮಿಟಿ ಸಭೆಯಲ್ಲಿ ಫೈನಲ್‌; 11 ಹೊಸ ಶಾಸಕರಿಗೆ ಮಂತ್ರಿಗಿರಿ?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ