ಆ್ಯಪ್ನಗರ

ಯುವ ಸಮುದಾಯ ರಕ್ತದಾನಕ್ಕೆ ಮುಂದಾಗಲಿ

ರಕ್ತದಾನ ಮಾಡಿದರೆ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸ್ವಯಂಪ್ರೇರಿತವಾಗಿ ಯುವ ಸಮುದಾಯ ಮುಂದಾಗಬೇಕೆಂದು ಡಿಎಚ್‌ಒ ಡಾ.ಎಸ್‌.ಎನ್‌.ವಿಜಯ್‌ಕುಮಾರ್‌ ಮನವಿ ಮಾಡಿದರು.

Vijaya Karnataka 19 Jun 2019, 5:00 am
ಕೋಲಾರ : ರಕ್ತದಾನ ಮಾಡಿದರೆ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸ್ವಯಂಪ್ರೇರಿತವಾಗಿ ಯುವ ಸಮುದಾಯ ಮುಂದಾಗಬೇಕೆಂದು ಡಿಎಚ್‌ಒ ಡಾ.ಎಸ್‌.ಎನ್‌.ವಿಜಯ್‌ಕುಮಾರ್‌ ಮನವಿ ಮಾಡಿದರು.
Vijaya Karnataka Web let the youth community donate blood
ಯುವ ಸಮುದಾಯ ರಕ್ತದಾನಕ್ಕೆ ಮುಂದಾಗಲಿ


ನಗರದ ಚನ್ನೇಗೌಡ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಕ್ತದಾನಿಗಳನ್ನು ಸನ್ಮಾನಿಸಿ ಮಾತನಾಡಿದರು.

ಜಿಲ್ಲೆಯ ಜನಸಂಖ್ಯೆಯ ಶೇ.1ರಷ್ಟು ಅಂದರೆ ವಾರ್ಷಿಕ 16,000 ಯೂನಿಟ್‌ ರಕ್ತ ಬೇಕಾಗುತ್ತದೆ. ಪ್ರಸ್ತುತ ಇದಕ್ಕಿಂತ ಸ್ವಲ್ಪ ಕಡಿಮೆ ರಕ್ತ ಸಾಕು. ಅದಕ್ಕೂ ಕೊರತೆ ಇದೆ. ಹೀಗಾಗಿ ಯುವ ಸಮುದಾಯವು ಹೆಚ್ಚಿನ ಅರಿವು ಪಡೆದುಕೊಂಡು ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಮುಂದೆ ಬರುವುದರ ಜತೆಗೆ ನಿಮ್ಮ ಸ್ನೇಹಿತರನ್ನು ಕರೆತರಬೇಕು ಎಂದು ಹೇಳಿದರು.

ವರ್ಷಕ್ಕೆ 2 ಬಾರಿ ರಕ್ತದಾನ: ಹದಿನೆಂಟು ವರ್ಷ ಮೇಲ್ಪಟ್ಟ ಆರೋಗ್ಯವಂತರು ಕನಿಷ್ಠ ವರ್ಷಕ್ಕೆ ಎರಡು ಬಾರಿಯಾದರೂ ರಕ್ತದಾನ ಮಾಡಿದರೆ ರಕ್ತದ ಕೊರತೆ ನೀಗಿಸಬಹುದು. ಪ್ರಮುಖವಾಗಿ ಪಾಸಿಟಿವ್‌ ರಕ್ತದ ಗುಂಪುಗಳ ಅಭಾವ ಉಂಟಾಗುತ್ತಿದೆ. ಇಂತಹ ರಕ್ತದ ಗುಂಪುಗಳುಳ್ಳವರು ರಕ್ತನಿಧಿ ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಂಡರೆ ಅವಶ್ಯವಿದ್ದಾಗ ರಕ್ತವನ್ನು ಪಡೆಯಲು ನೆರವಾಗುತ್ತದೆ ಎಂದರು.

ಜಿಲ್ಲಾ ಔಷಧ ಮಾರಾಟಗಾರರ ಸಂಘದ ಅಧ್ಯಕ್ಷ ಬಿ.ಉಮೇಶ್‌ ಮಾತನಾಡಿ, 18 ವರ್ಷ ಮೇಲ್ಪಟ್ಟ ಆರೋಗ್ಯವಂತರು ಯಾರೊಬ್ಬರೂ ರಕ್ತದಾನಕ್ಕೆ ಭಯಪಡಬೇಕಿಲ್ಲ. ರಕ್ತದಾನಕ್ಕೆ ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿ ಮುಂದೆ ಬರಬೇಕು, ಜತೆಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತಾಗಬೇಕು ಎಂದು ಹೇಳಿದರು.

ಹೆಣ್ಣುಮಕ್ಕಳಲ್ಲಿ ರಕ್ತಹೀನತೆ ಪ್ರಮಾಣ ಹೆಚ್ಚಳ: ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ.ಎಂ..ಜಗದೀಶ್‌, ಹೆಣ್ಣುಮಕ್ಕಳಲ್ಲಿ ರಕ್ತಹೀನತೆ ಪ್ರಮಾಣ ಹೆಚ್ಚಿದೆ. ದೇಶದಲ್ಲಿ ಶೇ. 70ರಷ್ಟು ಮಹಿಳೆಯರ ರಕ್ತದಲ್ಲಿ ಹಿಮೋಗ್ಲೋಬಿನ್‌ ಅಂಶದ ಕೊರತೆಯಿದೆ. ಗರ್ಭಿಣಿಯರು ಹೆರಿಗೆ ಸಂದರ್ಭದಲ್ಲಿ ರಕ್ತಹೀನತೆಯ ಕೊರತೆ ಅನುಭವಿಸುವುದರಿಂದ ಉತ್ತಮ ಪೌಷ್ಟಿಕ ಆಹಾರ ಸೇವಿಸಬೇಕೆಂದು ನುಡಿದರು.

ಜಿಲ್ಲೆಗೆ ವಾರ್ಷಿಕ 16,000 ಯೂನಿಟ್‌ ರಕ್ತದ ಅವಶ್ಯಕತೆ ಬರಬಹುದು. ಕಳೆದ ಆರು ವರ್ಷಗಳಲ್ಲಿ ವಾರ್ಷಿಕ 10,900 ಯೂನಿಟ್‌ಗಿಂತ ಹೆಚ್ಚು ಸಂಗ್ರಹವಾಗಿಲ್ಲ. ಹೀಗಾಗಿ ರಕ್ತದ ಕೊರತೆ ನೀಗಿಸಲು ಸ್ವಯಂ ಪ್ರೇರಿತ ರಕ್ತದಾನವನ್ನು ಪ್ರೋತ್ಸಾಹಿಸಬೇಕು. ಎಚ್‌ಐವಿ, ಹೆಪಟೈಸಿಸ್‌, ಹೆಪಟೈಸಿಸ್‌-ಸಿ, ಮಲೇರಿಯಾ ಮುಕ್ತರಾಗಿರುವವರು 18ರಿಂದ 60 ವರ್ಷ ಮೇಲ್ಪಟ್ಟ, 50 ಕೆಜಿ ತೂಕವಿರುವವರು ಪ್ರತಿ ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದು ತಿಳಿಸಿದರು.

ಹೆಚ್ಚು ಬಾರಿ ರಕ್ತದಾನ ಮಾಡಿದ ರಘುವಂಶಿ, ಟಿ.ಎಂ. ಶಂಕರ್‌, ಲೋಕೇಶ್‌,ಬಿ.ಉಮೇಶ್‌,ರಾಜೇಶ್‌ ಅವರನ್ನು ಸನ್ಮಾನಿಸಲಾಯಿತು. ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪವನ್‌ ನರ್ಸಿಂಗ್‌ ಕಾಲೇಜಿನ ಅರ್ಚಿತಾ (ಪ್ರಥಮ), ಎಸ್ಸೆನ್ನಾರ್‌ ಪ್ಯಾರಾ ಮೆಡಿಕಲ್‌ ವಿಭಾಗದ ಗಾಯತ್ರಿ (ದ್ವಿತೀಯ) ಹಾಗೂ ಚನ್ನೇಗೌಡ ನರ್ಸಿಂಗ್‌ ಕಾಲೇಜಿನ ಮಂಜಿ ಮನೋಜ್‌ (ತೃತೀತ) ಬಹುಮಾನ ವಿತರಿಸಲಾಯಿತು.

ವೇದಿಕೆ ಕಾರ್ಯಕ್ರಮದಲ್ಲಿ ಚನ್ನೇಗೌಡ ನರ್ಸಿಂಗ್‌ ಕಾಲೇಜಿನ ಪ್ರಾಂಶುಪಾಲೆ ಭಾರತಿ, ಕೋಲಾರದ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ರೇವತಿ, ಜಿಲ್ಲಾ ಏಡ್ಸ್‌ ನಿಯಂತ್ರಣ ಘಟಕದ ಮೇಲ್ವಿಚಾರಕಿ ಹೇಮಲತಾ, ಆರೋಗ್ಯ ಶಿಕ್ಷ ಣಾಧಿಕಾರಿ ಗೀತಾ ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ