ಆ್ಯಪ್ನಗರ

ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ: ಒಬ್ಬ ಸಾವು

ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ವೀರಾಪುರ ಗೇಟ್‌ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.

Vijaya Karnataka 3 Feb 2019, 5:00 am
ಕೋಲಾರ : ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ವೀರಾಪುರ ಗೇಟ್‌ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
Vijaya Karnataka Web lorry collides with tractor one death
ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ: ಒಬ್ಬ ಸಾವು


ತಾಲೂಕಿನ ಶಿಳ್ಳಂಗೆರೆ ಗ್ರಾಮದ ಶಂಕರ್‌ (33) ಮೃತಪಟ್ಟ ಟ್ರ್ಯಾಕ್ಟರ್‌ ಚಾಲಕ. ಶ್ರೀನಿವಾಸಪುರ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಲಾರಿ ಬಂದ ಲಾರಿಯ ಟೈರ್‌ ಸಿಡಿದು, ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್‌ನಲ್ಲಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ