ಆ್ಯಪ್ನಗರ

ಚಿಂತಾಮಣಿಯಲ್ಲಿ ರಸ್ತೆ ಅಪಘಾತಕ್ಕೆ ಮೂವರ ಬಲಿ

ಆಂಧ್ರಪ್ರದೇಶದ ರಾಯಚೂಟಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರಿಗೆ ಚಿಂತಾಮಣಿಯಲ್ಲಿ ಕ್ಯಾಂಟರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟಿದ್ದಾರೆ.

Vijaya Karnataka Web 25 Aug 2018, 9:52 am
ಚಿಂತಾಮಣಿ: ಆಂಧ್ರಪ್ರದೇಶದ ರಾಯಚೂಟಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರಿಗೆ ಚಿಂತಾಮಣಿಯಲ್ಲಿ ಕ್ಯಾಂಟರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟಿದ್ದಾರೆ.
Vijaya Karnataka Web people death by road accident
ಚಿಂತಾಮಣಿಯಲ್ಲಿ ರಸ್ತೆ ಅಪಘಾತಕ್ಕೆ ಮೂವರ ಬಲಿ


ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಹೊಸಕೋಟೆ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಕಾರಿಗೆ ಡಿಕ್ಕಿ ಹೊಡೆದಿದೆ. ಮೃತರಲ್ಲಿ ಒಬ್ಬರು ಕ್ಯಾಂಟರ್‌ನಲ್ಲಿದ್ದವರು, ಇಬ್ಬರು ಕಾರಿನಲ್ಲಿದ್ದವರು.


ಕಾರು ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದ್ದು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಂತಾಮಣಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ