ಆ್ಯಪ್ನಗರ

ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿಗೆ ಮನವಿ

ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ತ್ರಿಚಕ್ರ ವಾಹನ ಚಾಲಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

Vijaya Karnataka 10 Jan 2019, 5:00 am
ಕೋಲಾರ : ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ತ್ರಿಚಕ್ರ ವಾಹನ ಚಾಲಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
Vijaya Karnataka Web request dc to demand the fulfillment of my demands
ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿಗೆ ಮನವಿ


ಕೇಂದ್ರ ಸರಕಾರದ ಅವೈಜ್ಞಾನಿಕ ವ್ಯಾಪಾರ-ವಾಣಿಜ್ಯ ನೀತಿ-ಅಸಂವಿಧಾನಾತ್ಮಕ ಸಾರಿಗೆ ನೀತಿ-ಅಮಾನುಷ ಕಾರ್ಮಿಕ ನೀತಿ-ಅನೈತಿಕ ಬಂಡವಾಳಶಾಯಿ ನೀತಿಯಿಂದಾಗಿ ದೇಶದ ಜನತೆಯ ಮೇಲೆ ವಿಶೇಷವಾಗಿ ಶೋಷಿತ ವರ್ಗದ ಕಾರ್ಮಿಕರ ಮೇಲೆ ತೆರಿಗೆಯನ್ನು ಹೊರೆಸಿ, ಬಂಡವಾಳಶಾಯಿ ಕಾರ್ಪೊರೇಟ್‌ ಕಂಪನಿಗಳ ಜೋಳಿಗೆಯನ್ನು ತುಂಬಿಸುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಯೋಗದಲ್ಲಿ ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕ ಪರಿಷತ್‌ನ ರಾಜ್ಯ ಕಾರ್ಯಾಧ್ಯಕ್ಷ ಕೆ.ವಿ.ಸುರೇಶ್‌ಕುಮಾರ್‌, ತ್ರಿಚಕ್ರ ವಾಹನ ಚಾಲಕರ ಸಂಘದ ತಾಲೂಕು ಅಧ್ಯಕ್ಷ ಕೆ.ನಾರಾಯಣಸ್ವಾಮಿ, ಜಿಲ್ಲೆ ಡ್ರೈವಿಂಗ್‌ ಸ್ಕೂಲ್‌ ಮಾಲೀಕರ ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ಆರ್‌.ಗೋಪಾಲ್‌, ತ್ರಿಚಕ್ರ ವಾಹನ ಚಾಲಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಮಂಜುನಾಥ್‌(ಬುಜ್ಜಿ), ಹಿರಿಯ ಆಟೊ ಚಾಲಕ ವೇಣುಗೋಪಾಲ್‌, ಸಹ ಕಾರ್ಯದರ್ಶಿ ಜೆ.ಮಂಜುನಾಥ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ