ಆ್ಯಪ್ನಗರ

ಹೆಣ್ಣುಮಕ್ಕಳ ಶಿಕ್ಷಣಕ್ಕೆ ಸರಕಾರದಿಂದ ವಿಶೇಷ ಯೋಜನೆ

ಸರಕಾರ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷ ಣ ನೀಡುವುದರ ಜತೆಗೆ ಅವರು ಸ್ವಾಲಂಬಿಗಳಾಗಿ ಜೀವನ ನಡೆಸಲು ಸರಕಾರ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದ್ದು ಇದರ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಂಡು ಉತ್ತಮ ಬದುಕು ನಡೆಸುವಂತೆ ಪದವಿಪೂರ್ವ ಶಿಕ್ಷ ಣ ಇಲಾಖೆಯ ಉಪನಿರ್ದೇಶಕ ಎಸ್‌.ವೆಂಕಟಸ್ವಾಮಿ ತಿಳಿಸಿದರು.

Vijaya Karnataka 21 Jan 2019, 5:00 am
ಮುಳಬಾಗಲು: ಸರಕಾರ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷ ಣ ನೀಡುವುದರ ಜತೆಗೆ ಅವರು ಸ್ವಾಲಂಬಿಗಳಾಗಿ ಜೀವನ ನಡೆಸಲು ಸರಕಾರ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದ್ದು ಇದರ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಂಡು ಉತ್ತಮ ಬದುಕು ನಡೆಸುವಂತೆ ಪದವಿಪೂರ್ವ ಶಿಕ್ಷ ಣ ಇಲಾಖೆಯ ಉಪನಿರ್ದೇಶಕ ಎಸ್‌.ವೆಂಕಟಸ್ವಾಮಿ ತಿಳಿಸಿದರು.
Vijaya Karnataka Web special scheme for girl child education
ಹೆಣ್ಣುಮಕ್ಕಳ ಶಿಕ್ಷಣಕ್ಕೆ ಸರಕಾರದಿಂದ ವಿಶೇಷ ಯೋಜನೆ


ನಗರದ ಮುತ್ಯಾಲಪೇಟೆಯಲ್ಲಿರುವ ಶಾರದ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಣ್ಣು ಮಕ್ಕಳು ಉನ್ನತ ಶಿಕ್ಷ ಣದ ಜತೆಗೆ ವೃತ್ತಿ ಶಿಕ್ಷ ಣವನ್ನು ಪಡೆದಾಗ ಮಾತ್ರ ಉನ್ನತ ಉದ್ಯೋಗವನ್ನು ಪಡೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು ಶ್ರದ್ಧೆಯಿಂದ ಅಭ್ಯಾಸ ಮಾಡಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ 25 ವರ್ಷ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದರೆ ಭವಿಷ್ಯದಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಶಾರದ ಮಹಿಳಾ ಕಾಲೇಜು ತನ್ನದೇ ಆದ ವಿಶೇಷತೆಯನ್ನು ಹೊಂದಿದ್ದು, ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ಗುಣಮಟ್ಟದ ಶಿಕ್ಷ ಣ ನೀಡುವುದರ ಜತೆಗೆ ಶಿಸ್ತು, ಸಂಯಮ, ಸಂಸ್ಕಾರವನ್ನು ತಿಳಿಸಿಕೊಡುತ್ತದೆ. ಪ್ರಸುತ್ತ ಜಿಲ್ಲೆಯಲ್ಲಿ ಮಾದರಿ ಕಾಲೇಜು ಆಗಿ ರೂಪುಗೊಂಡಿದೆ ಎಂದು ತಿಳಿಸಿದರು.

ರಾರ‍ಯಂಕ್‌: ಈ ಸಾಲಿನಲ್ಲಿ ಬೆಂಗಳೂರು ವಿಶ್ವ ವಿದ್ಯಾಲಯ ಬಿಡುಗಡೆ ಮಾಡಿರುವ ಪದವಿ ರಾರ‍ಯಂಕ್‌ ಪಟ್ಟಿಯಲ್ಲಿ ಎ.ಜಿ.ಚೈತ್ರ ಮೊದಲನೇ ರಾರ‍ಯಂಕ್‌, ಜಿ.ನಂದಿನಿ 5ನೇ ರಾರ‍ಯಂಕ್‌ ಪಡೆದಿರುವುದು ಶ್ಲಾಘನೀಯ ವಿಷಯವಾಗಿದೆ ಎಂದು ತಿಳಿಸಿದರು.

ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಂ.ಸಿ. ದೇವರಾಜ್‌ ಮಾತನಾಡಿ, ಹೆಣ್ಣು ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಉತ್ತಮ ಬದುಕನ್ನು ನಡೆಸಲು ಸಾಧ್ಯವಾಗುತ್ತದೆ. ಗುರು ಹಿರಿಯರ ಹಾಗೂ ಪೋಷಕರ ಮಾರ್ಗದರ್ಶನದಂತೆ ಅಭ್ಯಾಸ ಮಾಡಬೇಕೆಂದು ತಿಳಿಸಿದರು.

ವಿದ್ಯಾಸಂಸ್ಥೆಯ ಕಾರ್ಯದರ್ಶಿ ಟಿ.ಎಸ್‌ ರಮೇಶ್‌ ಮಾತನಾಡಿ, ಸಮಾಜದಲ್ಲಿ ಉನ್ನತ ಸ್ಥಾನಮಾನ ಗಳಿಸಲು ಶಿಕ್ಷ ಣ ಪ್ರಮುಖ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಕಾಳಜಿ ವಹಿಸಿ ವಿದ್ಯಾಭ್ಯಾಸ ಮಾಡಬೇಕಾಗಿದೆ. ಓದಿನ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಜ್ಞಾನ ಪಡೆಯುವ ಮೂಲಕ ಬಹುಮುಖ ಪ್ರತಿಭಾವಂತರಾಗಬೇಕೆಂದು ತಿಳಿಸಿದರು.

ಪ್ರಾಂಶುಪಾಲರ ಸಂಘದ ರಾಜ್ಯ ಪ್ರತಿನಿಧಿ ಲಕ್ಷ್ಮಿನಾರಾಯಣಮೂರ್ತಿ ಮಾತನಾಡಿ, ಹೆಣ್ಣು ಮಕ್ಕಳು ವಿದ್ಯೆ ಕಲಿತರೆ ಆರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಶಾರದ ಕಾಲೇಜಿನಲ್ಲಿ ವ್ಯಾಸಂಗ ಮಾಡಿದವರು ಐಎಎಸ್‌ ಹಾಗೂ ಇತರೆ ಇಲಾಖೆಗಳಲ್ಲಿ ಉನ್ನತ ಅಧಿಕಾರವನ್ನು ಪಡೆದಿದ್ದಾರೆ ಎಂದು ತಿಳಿಸಿದರು.

ಬಹುಮಾನ ವಿತರಣೆ: ಪ್ರತಿಭಾವಂತ ಹಾಗೂ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮನಗಳನ್ನು ವಿತರಿಸಲಾಯಿತು ವಿದ್ಯಾರ್ಥಿನಿಯರಿಂದ ನಾನಾ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು.

ಸಂಸ್ಥೆಯ ನಿರ್ದೇಶಕರಾದ ಗೋವಿಂದರಾಮ್‌, ಬಿ.ಇಡಿ. ಕಾಲೇಜಿನ ಪ್ರಾಂಶುಪಾಲ ಎಂ.ಮಹದೇವಸ್ವಾಮಿ, ಪದವಿ ಕಾಲೇಜಿನ ಪ್ರಾಂಶುಪಾಲ ಕೆ.ವಿ.ನಾಗರಾಜ್‌, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜೆ.ಪ್ರಕಾಶ್‌,ಅಧ್ಯಾಪಕ ಕಾರ್ಯದರ್ಶಿ ಪಿ.ಸುಬ್ರಮಣ್ಯಂ ಸೇರಿದಂತೆ ಬೋದಕ, ಬೋದಕೇತರ ಸಿಬ್ಬಂದಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ