Please enable javascript.ತರಬೇತುದಾರರ ಸಮಸ್ಯೆ ಪರಿಹಾರಕ್ಕೆ ಮನವಿ - sport - Vijay Karnataka

ತರಬೇತುದಾರರ ಸಮಸ್ಯೆ ಪರಿಹಾರಕ್ಕೆ ಮನವಿ

ವಿಕ ಸುದ್ದಿಲೋಕ 4 Sep 2015, 9:38 pm
Subscribe

ಕ್ರೀಡಾಂಗಣಗಳ ಅಭಿವೃದ್ಧಿಗೆ ಸರಕಾರ ಸೌಕರ್ಯ ಕಲ್ಪಿಸುತ್ತಿದ್ದು, ಕ್ರೀಡಾ ತರಬೇತು ದಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಸರಕಾರ, ಮುಖ್ಯಮಂತ್ರಿಗಳನ್ನು ಕೋರಲಾಗಿದೆ ಎಂದು ರಾಜ್ಯ ಕ್ರೀಡಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಶೇಖರ

news/kolar/sport
ತರಬೇತುದಾರರ ಸಮಸ್ಯೆ ಪರಿಹಾರಕ್ಕೆ ಮನವಿ
ಕೋಲಾರ: ಕ್ರೀಡಾಂಗಣಗಳ ಅಭಿವೃದ್ಧಿಗೆ ಸರಕಾರ ಸೌಕರ್ಯ ಕಲ್ಪಿಸುತ್ತಿದ್ದು, ಕ್ರೀಡಾ ತರಬೇತು ದಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಸರಕಾರ, ಮುಖ್ಯಮಂತ್ರಿಗಳನ್ನು ಕೋರಲಾಗಿದೆ ಎಂದು ರಾಜ್ಯ ಕ್ರೀಡಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಶೇಖರ ಹೇಳಿದರು.

ಪತ್ರಕರ್ತರ ಭವನದಲ್ಲಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್‌ನಿಂದ ಗುರುವಾರ ಆಯೋಜಿಸಿದ್ದ 13ನೇ ರಾಷ್ಟ್ರೀಯ ಕಿರಿಯರ ಕ್ರೀಡಾಕೂಟದ ಪಟುಗಳಿಗೆ ಬೀಳ್ಕೊಡುಗೆ ಹಾಗೂ ಹಿರಿಯ ಕ್ರೀಡಾಪಟುಗಳ ಅಭಿನಂದನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಕಳೆದ ಹತ್ತು ದಿನಗಳಿಂದ ಕ್ರೀಡಾತರಬೇತುದಾರರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 20 ವರ್ಷಗಳಿಂದ ಕ್ರೀಡಾ ತರಬೇತುದಾರರನ್ನು ಕಾಯಂಗೊಳಿಸಿಲ್ಲ. ಕೆಲವರು ನಿವೃತ್ತಿ ಅಂಚಿನಲ್ಲಿದ್ದಾರೆ. ಈ ಎಲ್ಲ ಸಮಸ್ಯೆಗಳ ಬಗ್ಗೆ ಇಲಾಖೆಯ ಪ್ರಧಾನ ಕಾರ್ಯ ದರ್ಶಿಗಳು, ನಿರ್ದೇಶರ ಜತೆ ಚರ್ಚಿಸಿದ್ದು, ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳಿಗೂ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಆಂಧ್ರದ ವಿಶಾಖಪಟ್ಟಣಂ ನಲ್ಲಿ ಸೆ. 5ರಿಂದ 7ರವರೆಗೆ ನಡೆಯಲಿರುವ 13ನೇ ರಾಷ್ಟ್ರೀಯ ಕಿರಿಯರ ಕ್ರೀಡಾಕೂಟ ಸರಕಾರದಿಂದಲೇ ಎಲ್ಲ ಸೌಲಭ್ಯಗಳನ್ನು ಕಲ್ಪಿಸುವುದು ಸಾಧ್ಯವಾಗದಿರಬಹುದು. ಸರಕಾರದ ಅನುದಾನವನ್ನು ಕ್ರೀಡೆ ಹಾಗೂ ಯುವ ಸಬಲೀಕರಣ ಚಟುವಟಿಕೆಗೆ ಬಳಸ ಬೇಕಿರುವು ದರಿಂದ ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳು ಕ್ರೀಡೆಗೆ ಉತ್ತೇಜನ ನೀಡುವ ಕೆಲಸ ಮಾಡಿದರೆ ಸಹಾಯವಾಗುತ್ತದೆ ಎಂದು ತಿಳಿಸಿದರು. ರಾಜ್ಯದ ಏಳೆಂಟು ತಾಲೂಕುಗಳಿಂದ ಸಿಂಥೆೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಪ್ರಸ್ತಾವನೆ ಬಂದಿದೆ. ಕೋಲಾರ ಹಾಗೂ ಮಂಡ್ಯ ಜಿಲ್ಲೆಗೆ ಆದ್ಯತೆ ನೀಡಲು ಪ್ರಾಧಿಕಾರದ ಹಿಂದಿನ ಸಭೆಯಲ್ಲೇ ತೀರ್ಮಾನಿಸಲಾಗಿತ್ತು. ಜಿಲ್ಲಾ ಕ್ರೀಡಾಂಗಣಕ್ಕೆ ಸಿಂಥೆಟಿಕ್ ಟ್ರ್ಯಾಕ್ ಅಳವಡಿಸುವ ಸಂಬಂಧ ಸರ್ವಾನುಮತದ ನಿರ್ಣಯ ಅಂಗೀಕರಿಸಿ ಸಲ್ಲಿಸಿದರೆ ಮುಂದಿನ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟು ಮಂಜೂರು ಮಾಡಿಸಲಾಗುವುದು ಎಂದು ಭರವಸೆ ನೀಡಿದರು. ನಗರಸಭೆ ಅಧ್ಯಕ್ಷ ಬಿ.ಎಂ.ಮುಬಾರಕ್ ಮಾತನಾಡಿ, ಕೋಲಾರದಲ್ಲಿ ಚಿನ್ನದ ಗಣಿ ಮುಚ್ಚಿರಬಹುದು. ಆದರೆ ಚಿನ್ನದ ಪದಕ ಪಡೆಯುವ ಕ್ರೀಡಾಪಟುಗಳಿಗೆ ಕೊರತೆ ಇಲ್ಲ. ಜಿಲ್ಲೆಯ ಕ್ರೀಡಾಪಟುಗಳು ಬಾಸ್ಕೆಟ್ ಬಾಲ್, ದೇಹದಾರ್ಢ್ಯ ಇನ್ನಿತರೆ ಕ್ರೀಡೆಗಳಲ್ಲಿ ರಾಷ್ಟ್ರ ಮಟ್ಟದ ಸಾಧನೆ ಮಾಡಿದ್ದಾರೆ ಎಂದರು. ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಗರಸಭೆಯಿಂದ 8 ಲಕ್ಷ ರೂ. ವೆೆಚ್ಚದಲ್ಲಿ ಬಾಸ್ಕೆಟ್ ಬಾಲ್ ಅಂಕಣ ನಿರ್ಮಿಸಲಾಗಿದೆ. ಸಚಿವರಿಂದ ದಿನಾಂಕ ಪಡೆದು ಶೀಘ್ರವೇ ಉದ್ಘಾಟನೆ ನೆರವೇರಿಸಲಾಗುವುದು. ಶೌಚಾ ಲಯ ನಿರ್ಮಾಣಕ್ಕೆ 5 ಲಕ್ಷ ರೂ. ಮೀಸಲಿ ಡಲಾಗಿದೆ. ಆಧುನಿಕ ಶೌಚಾಲಯ ನಿರ್ಮಾಣಕ್ಕೆ ಖಾಸಗಿ ಕಂಪನಿಗಳ ಸಹಕಾರ ಪಡೆದು ಅನುದಾನ ಹೊಂದಿಸುವ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ಹೇಳಿದರು. ನಗರಸಭೆಯಿಂದ 14ನೇ ಹಣಕಾಸು ಯೋಜನೆಯಡಿ ನಗರದ ಕನಕ ಬಾಸ್ಕೆಟ್ ಬಾಲ್ ಕ್ಲಬ್‌ನ ಅಂಕಣದಲ್ಲಿ ಪೆವಿಲಿಯನ್ ಹಾಗೂ ದೀಪದ ವ್ಯವಸ್ಥೆ ಕಲ್ಪಿಸಲು ಕ್ರಿಯಾಯೋಜನೆ ರೂಪಿಸಿ ಅನುಮೋದನೆಗೆ ಸಲ್ಲಿಸಲಾಗಿದೆ. ಎರಡು ವಾರದೊಳಗೆ ಅನುಮೋದನೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕ್ರೀಡಾ ಪ್ರೋತ್ಸಾಹಕ ಪಲ್ಲವಿ ಮಣಿ ಕ್ರೀಡಾಪಟುಗಳಿಗೆ ಶುಭಕೋರಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಹಿಲೋರಿ, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಜಗನ್ನಾಥ್, ರಾಜ್ಯ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಪಿಳ್ಳಪ್ಪ, ಭಾರತ ಸೇವಾದಳದ ಗಣೇಶ್, ಮುಖಂಡರಾದ ಆಂಜನಪ್ಪ, ಅಸೋಸಿ ಯೇಷನ್‌ನ ಜಯದೇವ್, ಹಿರಿಯ ಕ್ರೀಡಾಪಟು ಮಹಮದ್ ಗೌಸ್ ಇತರರು ಹಾಜರಿದ್ದರು. ಹಿರಿಯ ಕ್ರೀಡಾಪಟು ಮೂರಾಂಡಹಳ್ಳಿ ವಿ. ಮಾರಪ್ಪ , ಅಂಚೆ ಅಶ್ವಥ್ ಸೇರಿದಂತೆ ಹಿರಿಯ ಕ್ರೀಡಾಪಟುಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸೆ.5ರಿಂದ ಆಂಧ್ರದಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಪಾಲ್ಗೊಳ್ಳಲಿರುವ ಕ್ರೀಡಾ ಪಟುಗಳಾದ ರಾಜೇಶ್, ಕಿರಣ್ ಕುಮಾರ್, ಸೌಜನ್ಯ, ನಂದಿನಿ, ಪ್ರಜ್ಞಾ ನಾಯಕ್, ಶಿವಕುಮಾರ್, ಭಾವನಾ, ವೌನಿಕ ಇತರರಿಗೆ ಸಮವಸ್ತ್ರ ವಿತರಿಸಿ ಬೀಳ್ಕೊಡಲಾಯಿತು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ