ಆ್ಯಪ್ನಗರ

ನಾಯಕತ್ವದ ಗುಣ ಬೆಳೆಸಿಕೊಳ್ಳಲು ಕ್ರೀಡೆ ಸಹಕಾರಿ

ಪಠ್ಯದ ಜತೆಗೆ ಕ್ರೀಡೆಗಳಲ್ಲಿಭಾಗವಹಿಸುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗುವ ಜತೆಗೆ, ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗಲಿದೆ ಎಂದು ನಿವೃತ್ತ ಮುಖ್ಯಶಿಕ್ಷಕ ವೆಂಕಟಗಿರಿಯಪ್ಪ ಹೇಳಿದರು.

Vijaya Karnataka 30 Aug 2019, 3:44 pm
ಲಕ್ಕೂರು: ಪಠ್ಯದ ಜತೆಗೆ ಕ್ರೀಡೆಗಳಲ್ಲಿಭಾಗವಹಿಸುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗುವ ಜತೆಗೆ, ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗಲಿದೆ ಎಂದು ನಿವೃತ್ತ ಮುಖ್ಯಶಿಕ್ಷಕ ವೆಂಕಟಗಿರಿಯಪ್ಪ ಹೇಳಿದರು.
Vijaya Karnataka Web sports helpful for building leadership
ನಾಯಕತ್ವದ ಗುಣ ಬೆಳೆಸಿಕೊಳ್ಳಲು ಕ್ರೀಡೆ ಸಹಕಾರಿ


ತಾಲೂಕು ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿಭಾಗವಹಿಸಿ, ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಆಲಂಬಾಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಿ ಪ್ರಶಸ್ತಿ ಪತ್ರ ಹಾಗೂ ಪದಕ ವಿತರಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡೆಗಳಲ್ಲಿಭಾಗವಹಿಸುವುದರಿಂದ ನಾಯಕತ್ವದ ಗುಣ ಬೆಳೆಯಲು ಎಂದು ತಿಳಿಸಿದ ಅವರು, ಇತ್ತೀಚೆಗೆ ವಿದ್ಯಾರ್ಥಿಗಳು ಕ್ರೀಡೆಗಿಂತ ತಂತ್ರಜ್ಞಾನದೊಂದಿಗೆ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಮೊಬೈಲ್‌, ಕಂಪ್ಯೂಟರ್‌ ಮೂಲಕವೇ ವಿವಿಧ ರೀತಿಯ ಆಟಗಳನ್ನು ಆಡುತ್ತಿದ್ದಾರೆ. ಆದರೆ ಇಧಿದು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಪೂರಕವಾಗಿಲ್ಲ. ವಿದ್ಯಾರ್ಥಿಗಳನ್ನು ತಂತ್ರಜ್ಞಾನದ ಆಟದಿಂದ ದೂರ ಮಾಡಬೇಕಿದೆ ಎಂದರು.

ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಎಸ್‌.ತೇಜಸ್ವಿನಿ, ಎ.ಅನಿತಾದೇವಿ, ಎನ್‌.ಮಾನಸ, ಎಂ.ಗಂಗೋತ್ರಿ, ಎಲ್‌.ರಕ್ಷಿತಾ, ಎನ್‌.ಬಿಂದು, ವೈ.ನಂದಿನಿ, ಎನ್‌.ಸೌಮ್ಯ, ಸಿ.ಸ್ಪಂದನ ಅವರನ್ನು ಅಭಿನಂದಿಸಲಾಯಿತು.

ಮುಖ್ಯಶಿಕ್ಷಕಿ ಎಂ.ವಿಜಯಲಕ್ಷಿತ್ರ್ಮ, ಎಚ್‌.ಪದ್ಮಮ್ಮ, ಎನ್‌.ರೇಣುಕಮ್ಮ ಸಹಶಿಕ್ಷಕರಾದ ಕೆ.ವೇದೇಶ್‌, ಮುರಗೇಶ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ