ಆ್ಯಪ್ನಗರ

ಕಾರ್ಮಿಕರ ಮುಷ್ಕರಕ್ಕೆ ಬೆಂಬಲ

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಕಾರ್ಮಿಕ ಪರ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳು ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರಕಾರದ ವಿರುದ್ಧ ಜ.8, 9ರಂದು 2 ದಿನಗಳ ಕಾಲ ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದೆ.

Vijaya Karnataka 5 Jan 2019, 5:00 am
ಕೋಲಾರ: ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಕಾರ್ಮಿಕ ಪರ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳು ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರಕಾರದ ವಿರುದ್ಧ ಜ.8, 9ರಂದು 2 ದಿನಗಳ ಕಾಲ ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದೆ.
Vijaya Karnataka Web support for workers strike
ಕಾರ್ಮಿಕರ ಮುಷ್ಕರಕ್ಕೆ ಬೆಂಬಲ


ಕೋಲಾರದಲ್ಲಿ ಇಂಡಿಯನ್‌ ನ್ಯಾಷನಲ್‌ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌ ಸಂಘಟನೆಯ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಮುಷ್ಕರಕ್ಕೆ ಜೆಸಿಟಿಯು, ಎಐಸಿಸಿಟಿಯು, ಎಐಟಿಸಿಯು, ಸಿಐಟಿಯು, ಟಿಯುಸಿಸಿ, ಎಐಸಿಸಿಟಿಯು, ಕೆಡ್ಲ್ಯೂಯು, ಕೆಜೆಡ್ಲ್ಯೂ,ಯು, ಬ್ಯಾಂಕ್‌, ಎಚ್‌ಎಂಎಸ್‌, ಇನ್‌ಶ್ಯೂರೆನ್ಸ್‌, ಜೆಎಎಫ್‌ ಮತ್ತು ಇತರೆ ಸ್ವತಂತ್ರ್ಯ ಸಂಘಟನೆಗಳು ಮುಷ್ಕರದಲ್ಲಿ ಭಾಗವಹಿಸಿ ಬೆಂಬಲಿಸಲಿವೆ.

ಕೋಲಾರ ಜಿಲ್ಲೆಯಾದ್ಯಂತ ವಿವಿಧ ಎಲ್ಲಾ ದಲಿತಪರ, ಪ್ರಗತಿಪರ, ವಿದ್ಯಾರ್ಥಿ ಸಂಘಟನೆಗಳು, ರೈತ ಸಂಘಟನೆಗಳು, ಮಹಿಳಾ ಸಂಘಟನೆಗಳು, ವರ್ತಕರ, ಸಂಘ, ಚಾಲಕರ ಸಂಘ, ಆಟೋ ಚಾಲಕರ ಸಂಘಟನೆಗಳು, ಕೆಎಸ್ಸಾರ್ಟಿಸಿ ಯೂನಿಯನ್‌ ಸೇರಿದಂತೆ ಎಲ್ಲಾ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಿ ಯಶಸ್ವಿಗೊಳಿಸುವಂತೆ ಐಎನ್‌ಟಿಯುಸಿ ಜಿಲ್ಲಾಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ, ಎಐಸಿಸಿಟಿಯು ಜಿಲ್ಲಾ ಕಾರ್ಯದರ್ಶಿ ಪ್ರಭಾಕರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ