ಆ್ಯಪ್ನಗರ

ವರ್ತೂರು ಪ್ರಕಾಶ್‌ ಕಿಡ್ನಾಪ್ ಪ್ರಕರಣ, ತಪ್ಪಿಸಿಕೊಂಡಿದ್ದ ಪ್ರಮುಖ ಆರೋಪಿ ಅರೆಸ್ಟ್

ಮಾಜಿ ಸಚಿವ ವರ್ತೂರು ಪ್ರಕಾಶ್‌ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಪ್ರಮುಖ ಆರೋಪಿ ರೋಹಿತ್ ಎಂಬಾತನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

Vijaya Karnataka Web 25 Jan 2021, 1:55 pm
ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್‌ ಅಪಹರಣ ಪ್ರಕರಣದಲ್ಲಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಮತ್ತೋರ್ವ ಪ್ರಮುಖ ಆರೋಪಿಯ ಬಂಧನವಾಗಿದೆ. ಬಂಧಿತನನ್ನು ರೋಹಿತ್ ಎಂದು ಗುರುತಿಸಲಾಗಿದೆ.
Vijaya Karnataka Web Varthur Prakash


ಪೊಲೀಸರಿಂದ ತಪ್ಪಿಸಿಕೊಂಡಿದ್ದ ಈತ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದಾನೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರಿಂದ ಬೆಂಗಳೂರಿನಲ್ಲಿ ಆರೋಪಿಯ ಬಂಧನವಾಗಿದೆ. ಪ್ರಖರಣದ ಎ1 ಆರೋಪಿ ಕವಿರಾಜ್‌ (45) ಎಂಬಾತನನ್ನು ಕೋಲಾರ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದರು. ಕವಿರಾಜ್‌ ಪತ್ತೆಗಾಗಿ ಪೊಲೀಸರು ತಮ್ಮ ಜತೆ ಚೆನ್ನೈಗೆ ಕರೆದುಕೊಂಡು ಹೋಗಿದ್ದ ವೇಳೆ ರೋಹಿತ್ ತಪ್ಪಿಸಿಕೊಂಡಿದ್ದನು. ಅಂದು ತಪ್ಪಿಸಿಕೊಂಡಿದ್ದವ ಇಂದು ಪೊಲೀಸರ ಅತಿಥಿಯಾಗಿದ್ದಾನೆ. ನವೆಂಬರ್‌ 25ರಂದು ಕೋಲಾರ ಬೆಗ್ಲಿ ಹೊಸಹಳ್ಳಿ ತೋಟದ ಮನೆಯ ಬಳಿಯಿಂದ ವರ್ತೂರು ಪ್ರಕಾಶ್‌ ಅಪಹರಣ ನಡೆದಿತ್ತು.

ಡಿಸೆಂಬರ್-3 ರಂದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಆರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಣಕ್ಕಾಗಿ ಈ ಅಪಹರಣ ನಡೆಸಿದ್ದ ಬೆಂಗಳೂರು ಮೂಲದ ಗ್ಯಾಂಗ್‌, ಹಣ ಪಡೆದ ಬಳಿಕ ಪೊಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಹಣ ಹಂಚಿಕೊಂಡು ಪ್ರವಾಸಕ್ಕೆ ತೆರಳಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ