ಆ್ಯಪ್ನಗರ

ನೀರಿನ ಪೈಪ್‌ಲೈನ್ ದುರಸ್ತಿ

ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿ ನಿರ್ವಹಿಸುವ ಸಂದರ್ಭದಲ್ಲಿ ಶುದ್ಧ ನೀರಿನ ಘಟಕಕ್ಕೆ ಸಂಪರ್ಕ ಹೊಂದಿರುವ ಕುಡಿವ ನೀರಿನ ಪೈಪ್‌ಲೈನ್ ಒಡೆದಿದ್ದರಿಂದ ಬುಧವಾರ ದುರಸ್ತಿಗೊಳಿಸಲಾಯಿತು.

ವಿಕ ಸುದ್ದಿಲೋಕ 25 Feb 2016, 5:15 am
ಹನುಮಸಾಗರ; ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿ ನಿರ್ವಹಿಸುವ ಸಂದರ್ಭದಲ್ಲಿ ಶುದ್ಧ ನೀರಿನ ಘಟಕಕ್ಕೆ ಸಂಪರ್ಕ ಹೊಂದಿರುವ ಕುಡಿವ ನೀರಿನ ಪೈಪ್‌ಲೈನ್ ಒಡೆದಿದ್ದರಿಂದ ಬುಧವಾರ ದುರಸ್ತಿಗೊಳಿಸಲಾಯಿತು.
Vijaya Karnataka Web
ನೀರಿನ ಪೈಪ್‌ಲೈನ್ ದುರಸ್ತಿ


ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಶುದ್ಧ ಕುಡಿವ ನೀರಿನ ಅಭಾವ ಸೃಷ್ಟಿಯಾಗಿದೆ. ಇದರಿಂದ ಸಾರ್ವಜನಿಕರು ಪರಿತಪಿಸುವಂತಾಗಿದೆ. ಗ್ರಾಮದಲ್ಲಿ ಫ್ಲೋರೈಡ್‌ಯುಕ್ತ ನೀರು ಹೆಚ್ಚಾಗಿದ್ದು, ಅನಾರೋಗ್ಯಕ್ಕೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ವಾಟರ್‌ಲೈಫ್ ಕೇರ್ ಸಂಸ್ಥೆ ಶುದ್ಧ ಕುಡಿವ ನೀರಿನ ಘಟಕ ನಿರ್ಮಿಸಿದೆ. ಗ್ರಾ.ಪಂ. ಅದಕ್ಕೆ ಪ್ರತ್ಯೇಕವಾದ ಕೊಳವೆ ಬಾವಿ ಹಾಕಿಸಿ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ. ಕಳೆದ ಮೂರು ದಿನಗಳಿಂದ ಗ್ರಾಮದಲ್ಲಿ ನಡೆಯುತ್ತಿರುವ ಡಬಲ್ ಸಿಸಿ ರಸ್ತೆಯ ಕಾಮಗಾರಿಯಿಂದಾಗಿ ಪೈಪ್‌ಲೈನ್ ಒಡೆದಿದ್ದು, ಗ್ರಾ.ಪಂ.ಆಡಳಿತ ಮಂಡಳಿ ನಿರ್ಲಕ್ಷ್ಯವಹಿಸಿದ ಹಿನ್ನೆಲೆಯಲ್ಲಿ ನೀರಿನ ಘಟಕದ ಸಿಬ್ಬಂದಿ ಪೈಪ್‌ಲೈನ್ ದುರಸ್ತಿಗೊಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ