ಆ್ಯಪ್ನಗರ

ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ

ನಗರದಲ್ಲಿ ಸ್ವಚ್ಛತೆ ಕಾಪಾಡಬೇಕು, ಶೌಚಾಲಯ ನಿರ್ಮಿಸಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸಲು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ನಗರಸಭೆ ಎದುರು ಇತ್ತೀಚೆಗೆ ಪ್ರತಿಭಟನೆ ನಡೆಸಿದರು.

ವಿಕ ಸುದ್ದಿಲೋಕ 2 Jun 2016, 7:26 am
ಗಂಗಾವತಿ; ನಗರದಲ್ಲಿ ಸ್ವಚ್ಛತೆ ಕಾಪಾಡಬೇಕು, ಶೌಚಾಲಯ ನಿರ್ಮಿಸಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸಲು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ನಗರಸಭೆ ಎದುರು ಇತ್ತೀಚೆಗೆ ಪ್ರತಿಭಟನೆ ನಡೆಸಿದರು.
Vijaya Karnataka Web
ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ


ಸಂಘಟನೆಯ ಜಿಲ್ಲಾಧ್ಯಕ್ಷ ರಾಮಣ್ಣ ಬಳ್ಳಾರಿ ಮಾತನಾಡಿ, ನಗರದಲ್ಲಿರುವ ಉದ್ಯಾನಗಳ ಜಾಗವನ್ನು ಅತಿಕ್ರಮಣಮಾಡಿಕೊಂಡಿರುವುದನ್ನು ತೆರವುಗೊಳಿಸಿ ಸಾರ್ವಜನಿಕರ ವಾಯುವಿವಾರಕ್ಕೆ ಅನುಕೂಲ ಮಾಡಿಕೊಡಬೇಕು. ಮಹಿಳೆಯರಿಗೆ, ವಯಸ್ಕರಿಗೆ ಅನುಕೂಲವಾಗುವಂತೆ ನಗರದ ಅಲ್ಲಲ್ಲಿ ಸುಲಭ ಶೌಚಾಲಯಗಳನ್ನು ನಿರ್ಮಿಸಬೇಕು. ಸ್ವಚ್ಛತೆಯ ದೃಷ್ಟಿಯಿಂದ ಅಂಡರ್ ಪಾಸ್ ಡ್ರೈನೇಜ್ ನಿರ್ಮಿಸಬೇಕು. 24*7 ಕುಡಿವ ನೀರಿನ ಯೋಜನೆಯನ್ನು ವೇಗವಾಗಿ ಪೂರ್ಣಗೊಳಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸರಕಾರಿ ಸೌಲಭ್ಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು. ಜಯಣ್ಣ, ಪ್ರಕಾಶ, ದೇವದಾಸ, ಆನಂದ, ಕುರುಪಣ್ಣ, ಯೋಹಾನ, ದೇವಪ್ಪ, ಆನಂದ, ಹನುಮಂತಪ್ಪ , ಅಬ್ದುಲ್ ಖುದೂಸ್ ಹಾಗೂ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ