ಆ್ಯಪ್ನಗರ

‘ಹುಲಿಕೆರೆ ಅಭಿವೃದ್ಧಿಗೆ ಸಹಕಾರ ಅಗತ್ಯ’

ಐತಿಹಾಸಿಕ ಹಾಗೂ ನೈಸರ್ಗಿಕವಾಗಿ ಸೃಷ್ಟಿಯಾದ ಹುಲಿಕೆರೆ ಸುಮಾರು 120 ಎಕರೆ ಪ್ರದೇಶ ಹೊಂದಿದ್ದು, ಕೆರೆಯ ಹೂಳು ತೆಗೆಯುವ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.

ವಿಕ ಸುದ್ದಿಲೋಕ 9 Aug 2017, 7:49 am
ಕೊಪ್ಪಳ: ಐತಿಹಾಸಿಕ ಹಾಗೂ ನೈಸರ್ಗಿಕವಾಗಿ ಸೃಷ್ಟಿಯಾದ ಹುಲಿಕೆರೆ ಸುಮಾರು 120 ಎಕರೆ ಪ್ರದೇಶ ಹೊಂದಿದ್ದು, ಕೆರೆಯ ಹೂಳು ತೆಗೆಯುವ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
Vijaya Karnataka Web
‘ಹುಲಿಕೆರೆ ಅಭಿವೃದ್ಧಿಗೆ ಸಹಕಾರ ಅಗತ್ಯ’


ನಗರದ ಹುಲಿಕೇರಿಯಲ್ಲಿ ಹೂಳು ತೆಗೆಯುವ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿ ಮಾತನಾಡಿದರು. ಕಳೆದ ಎರಡು ವರ್ಷಗಳಿಂದ ಬರ ಆವರಿಸಿದ್ದು, ಇದುವರೆಗೂ ನಿರೀಕ್ಷೆಯಂತೆ ಮಳೆ ಬರುತ್ತಿಲ್ಲ. ಇದರಿಂದ ಮುಂದಿನ ದಿನದ ಬೇಸಿಗೆ ಸಂದರ್ಭದಲ್ಲಿ ಕುಡಿವ ನೀರಿನ ತೊಂದರೆ ಉಂಟಾಗಬಾರದು ಎನ್ನುವ ದೃಷ್ಟಿಯಿಂದ ಕೆರೆಯ ಹೂಳು ತೆಗೆದು, ತುಂಗಭದ್ರಾ ನದಿ ಮೂಲಕ ನೀರು ತುಂಬಿಸುವ ಕಾರ್ಯ ಮಾಡಲಾಗುತ್ತಿದೆ. ಇದಕ್ಕಾಗಿ ನಗರಸಭೆಯಿಂದ 20 ಲಕ್ಷ ರೂ. ವ್ಯಯಿಸಲಾಗಿದೆ. ಇದರಿಂದ ಕುಡಿವ ನೀರಿನ ಅಭಾವ ನೀಗಿಸಬಹುದಾಗಿದೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ.ರಾಜಶೇಖರ್ ಹಿಟ್ನಾಳ್ ಹುಲಿಕೆರೆ ಭೇಟಿ ನೀಡಿ ಪರಿಶೀಲಿಸಿದರು.

ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ.ಅಧ್ಯಕ್ಷ ಬಾಲಚಂದ್ರನ್, ಸದಸ್ಯ ಮುತ್ತುರಾಜ ಕುಷ್ಟಗಿ, ರಾಮಣ್ಣ ಹಂದಿನ್, ಮುಖಂಡ ಸುರೇಶ್ ಭೂಮರೆಡ್ಡಿ, ಬಸವರೆಡ್ಡಪ್ಪ ಹಳ್ಳಿಕೆರಿ, ಅಕ್ಬರ್ ಪಾಷಾ ಪಲ್ಟನ್ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ