Please enable javascript.‘ಜನಹಿತ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲ’ - ‘ಜನಹಿತ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲ’ - Vijay Karnataka

‘ಜನಹಿತ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲ’

Vijaya Karnataka Web 15 Jan 2014, 4:00 am
Subscribe

ರಾಜ್ಯ ಸರಕಾರ ಜನ ಸಾಮಾನ್ಯರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಗಣ್ಣ ಕರಡಿ ಹೇಳಿದರು.

‘ಜನಹಿತ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲ’
ಯಲಬುರ್ಗಾ; ರಾಜ್ಯ ಸರಕಾರ ಜನ ಸಾಮಾನ್ಯರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಗಣ್ಣ ಕರಡಿ ಹೇಳಿದರು.

ಪಟ್ಟಣದ ಬಂಡಿ ರಸ್ತೆಯಲ್ಲಿರುವ ಶಾದಿಮಹಲ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸಿ ಆರು ತಿಂಗಳು ಗತಿಸಿದೆ. ಆದರೂ ಯಾವುದೇ ಜನಪರ ಯೋಜನೆ ಜಾರಿ ಮಾಡಿಲ್ಲ. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೊಳಿಸಿದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.

ಎಂಎಲ್ಸಿ ಹಾಲಪ್ಪ ಆಚಾರ್ ಮಾತನಾಡಿ, ಹೆ.ಕ. ಅಭಿವದ್ಧಿಗೆ ಪೂರಕವಾದ 371 ಜೆ ವಿಧಿ ಸಮಪರ್ಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಕಾಯಿದೆ ವಿರೋಧಿಸಿ ನಾನಾ ಇಲಾಖೆ ಹಾಗೂ ವಿವಿಗಳಲ್ಲಿ ನೇಮಕ ಪ್ರಕ್ರಿಯೆ ನಡೆದಿದೆ. ಇದರ ವಿರುದ್ಧ ಎಲ್ಲರೂ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಶಂಕರಪ್ಪ ಬಳೂಟಗಿ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ವಕ್ತಾರ ವೀರಣ್ಣ ಹುಬ್ಬಳ್ಳಿ, ಮುಖಂಡರಾದ ಸಿದ್ದಪ್ಪ ಕಟ್ಟಿಮನಿ, ಪ್ರಧಾನ ಕಾರ್ಯದರ್ಶಿ ಪ್ರಭುರಾಜ ಕಲಬುರ್ಗಿ, ಮಲ್ಲಣ್ಣ ನರೇಗಲ್, ಪಟ್ಟಣ ಪಂಚಾಯಿತಿ ಸದಸ್ಯ ಸಿದ್ದರಾಮೇಶ ಬೇಲೇರಿ, ಶಿವಕುಮಾರ ನಾಗಲಾಪುರಮಠ, ಶಂಭು ಜೋಳದ, ಶಿವಣ್ಣ ಮುತ್ತಾಳ, ರವಿ ಜಕ್ಕಾ ಹಾಗೂ ಇತರರು ಇದ್ದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ