ಆ್ಯಪ್ನಗರ

16 ವಿದ್ಯಾರ್ಥಿನಿಯರು ಅಸ್ವಸ್ಥ

ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಯ 16 ವಿದ್ಯಾರ್ಥಿನಿಯರು ವಿಷ ಪೂರಿತ ಊಟ ಸೇವಿಸಿ ಅಸ್ವಸ್ಥಗೊಂಡು ಶನಿವಾರ ಸಂಜೆ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Vijaya Karnataka 30 Jul 2018, 5:00 am
ತಾವರಗೇರಾ : ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಯ 16 ವಿದ್ಯಾರ್ಥಿನಿಯರು ವಿಷ ಪೂರಿತ ಊಟ ಸೇವಿಸಿ ಅಸ್ವಸ್ಥಗೊಂಡು ಶನಿವಾರ ಸಂಜೆ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Vijaya Karnataka Web KPL-KPL 29 TVG P03


ಎಂದಿನಂತೆ ಬಾಲಕಿಯರು ಊಟ ಮಾಡಿದ್ದಾರೆ. ಆದರೆ ಬೆಳಗ್ಗೆ ಎದ್ದ ಮೇಲೆ ವಾಂತಿ ಭೇದಿಯಿಂದ ಬಳಲಿ ನಿತ್ರಾಣಗೊಂಡಿದ್ದಾರೆ. ನಂತರ ಕೂಡಲೇ ವಿದ್ಯಾರ್ಥಿನಿಯರನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ಶಿಕ್ಷ ಕರು ದಾಖಲಿಸಿದ್ದಾರೆ.

ವೈದ್ಯಾಧಿಕಾರಿ ಡಾ.ಕಾವೇರಿ ಶ್ಯಾವಿ ಮತ್ತು ಡಾ. ಪ್ರಶಾಂತ ತಾಳಿಕೋಟಿ, ತುರ್ತು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ನಂತರ ವಿಷಯ ತಿಳಿದ ಶಾಸಕ ಅಮರೇಗೌಡ ಪಾಟೀಲ್‌ ಬಯ್ಯಾಪುರ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು. ಎಲ್ಲ ವಿದ್ಯಾರ್ಥಿಗಳು ಆರೋಗ್ಯದಿಂದ ಇದ್ದಾರೆ ಎಂದು ಪ್ರಾಚಾರ್ಯ ನಾಗರಾಜ ಸಂಗನಾಳ ತಿಳಿಸಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ