ಆ್ಯಪ್ನಗರ

ಟಿಕೆಟ್‌ಗಾಗಿ ದೇಗುಲ ದ್ವಾರಕ್ಕೆ ಬ್ಯಾನರ್‌: ಕೇಸ್‌ ದಾಖಲು

ನಗರದ ಕೋಟೆ ಏರಿಯಾದ ಶ್ರೀ ಆಂಜನೇಯ ದೇವಾಲಯದ ಪ್ರವೇಶ ದ್ವಾರಕ್ಕೆ ಬ್ಯಾನರ್‌ ಕಟ್ಟಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ರಾಜ್ಯ ಕಾಂಗ್ರೆಸ್‌ ಕಾರ್ಮಿಕ ಘಟಕದ ಕಾರ್ಯದರ್ಶಿ ಹಾಗೂ ದೇವಾಲಯ ಪೂಜಾರಿ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ.

Vijaya Karnataka 19 Mar 2019, 5:00 am
ಕೊಪ್ಪಳ : ನಗರದ ಕೋಟೆ ಏರಿಯಾದ ಶ್ರೀ ಆಂಜನೇಯ ದೇವಾಲಯದ ಪ್ರವೇಶ ದ್ವಾರಕ್ಕೆ ಬ್ಯಾನರ್‌ ಕಟ್ಟಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ರಾಜ್ಯ ಕಾಂಗ್ರೆಸ್‌ ಕಾರ್ಮಿಕ ಘಟಕದ ಕಾರ್ಯದರ್ಶಿ ಹಾಗೂ ದೇವಾಲಯ ಪೂಜಾರಿ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ.
Vijaya Karnataka Web KPL-KPL18PHOTO01


ಕೋಟೆ ಆಂಜನೇಯ ದೇವಸ್ಥಾನದ ಪ್ರವೇಶ ದ್ವಾರದ ಬಾಗಿಲಿಗೆ ಬ್ಯಾನರ್‌ ಕಟ್ಟಲಾಗಿತ್ತು. ಕೊಪ್ಪಳ ಲೋಕ ಸಭಾ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ, ಜಿಲ್ಲಾ ಪಂಚಾಯತ್‌ ಸದಸ್ಯ ರಾಜಶೇಖರ್‌ ಹಿಟ್ನಾಳ್‌ ಅವರ ಫೋಟೊ ಇದೆ. ರಾಜಣ್ಣನಿಗೆ ಟಿಕೆಟ್‌ ನೀಡಿ, ಯುವ ಜನರ ಆಶಾಕಿರಣ ಎಂದು ಬರೆಯಲಾಗಿತ್ತು. ದೇವಾಲಯದಲ್ಲಿ ಕಾಂಗ್ರೆಸ್‌ ಪಕ್ಷ ದ ಕಾರ್ಮಿಕ ಘಟಕ ರಾಜ್ಯ ಕಾರ್ಯದರ್ಶಿ ಮಂಜುನಾಥ ಗೊಂಡಬಾಳ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕಾಂಗ್ರೆಸ್‌ ಪಕ್ಷ ದ ಪರವಾಗಿ ಸಾರ್ವಜನಿಕ ಸ್ಥಳದಲ್ಲಿ ಬ್ಯಾನರ್‌ ಕಟ್ಟಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದು ಕಂಡು ಬಂದಿದೆ. ಸ್ಥಳಕ್ಕೆ ಎಂಸಿಸಿ ಫೈ್ಲಯಿಂಗ್‌ ಸ್ಕ್ವಾಡ್‌ ಭೇಟಿ ನೀಡಿ ಬ್ಯಾನರ್‌ ವಶಕ್ಕೆ ಪಡೆದಿದೆ. ದೇವಸ್ಥಾನದ ಪೂಜಾರಿ ಹಾಗೂ ಮಂಜುನಾಥ ಗೊಂಡಬಾಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೊಪ್ಪಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಕೊಪಳ ಲೋಕಸಭಾಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್‌ ಅವರು ತಿಳಿಸಿದ್ದಾರೆ.




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ