ಆ್ಯಪ್ನಗರ

ಬರ ಅಧ್ಯಯನಕ್ಕೆ ಪ್ರವಾಸ: ಸಚಿವ ಕಾಗೋಡು

ರಾಜ್ಯದ ಭೀಕರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನಜೀವನ ಹಾಗೂ ಬರ ಪರಿಹಾರ ಕಾಮಗಾರಿ ಪರಿಶೀಲಿಸಲು ಪ್ರವಾಸ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ವಿಕ ಸುದ್ದಿಲೋಕ 3 Apr 2017, 8:00 am
ಕೊಪ್ಪಳ: ರಾಜ್ಯದ ಭೀಕರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನಜೀವನ ಹಾಗೂ ಬರ ಪರಿಹಾರ ಕಾಮಗಾರಿ ಪರಿಶೀಲಿಸಲು ಪ್ರವಾಸ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
Vijaya Karnataka Web drought study tour minister kagodu
ಬರ ಅಧ್ಯಯನಕ್ಕೆ ಪ್ರವಾಸ: ಸಚಿವ ಕಾಗೋಡು


ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ಸಚಿವ ಸಂಪುಟದ ಕೆಲವರು, ಉಪ ಚುನಾವಣೆ ಪ್ರಚಾರಕ್ಕೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ನನಗೆ ಬರ ಅಧ್ಯಯನ ಪ್ರವಾಸ ಜವಾಬ್ದಾರಿ ನೀಡಿದ್ದಾರೆ. ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’’ ಎಂದರು.

‘‘ಕಾಂಗ್ರೆಸ್ ಮುಖಂಡ ಜಾಫರ್ ಶರೀಫ್ ಅವರು ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ರಾಷ್ಟ್ರಪತಿ ಪದವಿಗೆ ಪರಿಗಣಿಸುವಂತೆ ಬರೆದ ಪತ್ರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ’’ ಎಂದ ಅವರು, ‘‘ರಾಜ್ಯದಲ್ಲಿ ಸೂರು ಇಲ್ಲದವರಿಗೆ ಸೂರು ನೀಡುವುದು ಸರಕಾರದ ಕರ್ತವ್ಯವಾಗಿದ್ದು, ಗಾಂವಠಾಣ ಜಾಗ ಗುರುತಿಸಲು ಆದೇಶಿಸಲಾಗಿದೆ’’ ಎಂದರು.

ಈ ಸಂದರ್ಭದಲ್ಲಿ ಜಿ.ಪಂ. ಅಧ್ಯಕ್ಷ ಎಸ್.ಬಿ.ನಾಗರಳ್ಳಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಬಸವರಾಜ ಹಿಟ್ನಾಳ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಜುಲ್ಲುಖಾದ್ರಿಸೇರಿ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ