ಆ್ಯಪ್ನಗರ

ಬಿಯರ್ ಬಾಟಲಿಯಿಂದ ಹಲ್ಲೆ: ಮುಖ್ಯ ಶಿಕ್ಷಕ ಅರೆಸ್ಟ್

ಕುಷ್ಟಗಿ ತಾಲೂಕಿನ ಕಂದಕೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಿಂಗಪ್ಪ ಗುನ್ನಾಳ ಬಂಧಿತ ಆರೋಪಿ.

Vijaya Karnataka Web 23 Nov 2018, 12:37 pm
ಕೊಪ್ಪಳ: ಯುವಕನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಪಾನ ಮತ್ತ ಮುಖ್ಯ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ.
Vijaya Karnataka Web arrest


ಕುಷ್ಟಗಿ ತಾಲೂಕಿನ ಕಂದಕೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಿಂಗಪ್ಪ ಗುನ್ನಾಳ ಬಂಧಿತ ಆರೋಪಿ.

ಏನಿದು ಘಟನೆ?

ಶಾಲೆಯ ಅವ್ಯವಹಾರ ಬಗ್ಗೆ ಮಾರುತಿ ಹಲಗಿ ಪ್ರಶ್ನಿಸಿದ್ದರು ಎನ್ನಲಾಗಿದೆ.ನಿಂಗಪ್ಪ ಗುನ್ನಾಳ ಅವರು ಕುಷ್ಟಗಿಯ ಮಲ್ಲಯ್ಯ ವೃತ್ತದಲ್ಲಿ ಪಾನಮತ್ತರಾಗಿ ಆಗಮಿಸಿದ್ದ ಸಂದರ್ಭದಲ್ಲಿ ಎದುರಾದ ಮಾರುತಿ ಹಲಗಿ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ.

ತೀವ್ರ ಗಾಯಗೊಂಡಿದ್ದ ಮಾರುತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ