ಆ್ಯಪ್ನಗರ

ಜನಸಂಪರ್ಕ ಸಭೆಯಲ್ಲಿ ಶಾಸಕ ಅಭಿಮತ

ತಾಲೂಕಿನ ಸಮಗ್ರ ಹಳ್ಳಿಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಶಾಸಕ ಹಾಲಪ್ಪ ಆಚಾರ್‌ ಹೇಳಿದರು. ತಾಲೂಕಿನ ತೊಂಡಿಹಾಳ ಗ್ರಾಮದಲ್ಲಿ ಭಾನುವಾರ ನಡೆದ ಜನ ಸಂಪರ್ಕ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

Vijaya Karnataka 4 Jun 2018, 5:00 am
ಯಲಬುರ್ಗಾ : ತಾಲೂಕಿನ ಸಮಗ್ರ ಹಳ್ಳಿಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಶಾಸಕ ಹಾಲಪ್ಪ ಆಚಾರ್‌ ಹೇಳಿದರು. ತಾಲೂಕಿನ ತೊಂಡಿಹಾಳ ಗ್ರಾಮದಲ್ಲಿ ಭಾನುವಾರ ನಡೆದ ಜನ ಸಂಪರ್ಕ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕ್ಷೇತ್ರ ಮೂಲ ಸೌಕರ್ಯದಿಂದ ವಂಚಿತಗೊಂಡಿದೆ. ತಾಲೂಕಿನ ಬಹುತೇಕ ಕಡೆ ರಸ್ತೆ ಸರಿಯಾಗಿಲ್ಲದ ಕಾರಣ ವಾಹನ ಓಡಾಟಕ್ಕೆ ಅಡಚಣೆಯಾಗಿದೆ. ಬಹುತೇಕ ಗ್ರಾಮಗಳಲ್ಲಿ ಕುಡಿವ ನೀರಿನ ತೊಂದರೆಯಿಂದ ಸಾರ್ವಜನಿಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಗ್ರಾಮ ವ್ಯಾಪ್ತಿಯಲ್ಲಿ ಜನರನ್ನು ಕಾಡುತ್ತಿರುವ ಮೂಲ ಸೌಕರ್ಯಗಳ ಕೊರತೆ ಪಟ್ಟಿ ತಯಾರಿಸಿ ಸಕಾಲಕ್ಕೆ ಸ್ಪಂದಿಸಲಾಗುವುದು. ಖುಷ್ಕಿ ಪ್ರದೇಶದ ಭಾಗಕ್ಕೆ ನೀರಾವರಿ ಯೋಜನೆ ಅನುಷ್ಠಾನ ಗೊಳಿಸಲು ಪ್ರಯತ್ನಿಸಲಾಗುವುದು. ಗ್ರಾಮಗಳಲ್ಲಿನ ಕೆರೆ ಹೂಳೆತ್ತುವ ಮೂಲಕ ಜನರ ಕುಂದು-ಕೊರತೆ ಬಗೆಹರಿಸಲಾಗವುದು ಎಂದರು. ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ರತನ್‌ ದೇಸಾಯಿ, ವಕ್ತರಾರ ವೀರಣ್ಣ ಹುಬ್ಬಳ್ಳಿ, ಜಿ.ಪಂ.ಮಾಜಿ ಸದಸ್ಯರಾದ ಸಿ.ಎಚ್‌.ಪಾಟೀಲ್‌, ಶಕುಂತಲಾದೇವಿ ಪಾಟೀಲ್‌, ಹಿರಿಯ ಮುಖಂಡರಾದ ಬಸವಲಿಂಗಪ್ಪ ಭೂತೆ,ಎ.ಜಿ.ಬಾವಿಮನಿ, ಶರಣಪ್ಪ,ವಸಂತ, ಶರಣಬಸಪ್ಪ ಇತರರು ಇದ್ದರು.
Vijaya Karnataka Web KPL-03YLB03
ಯಲಬುರ್ಗಾ ತಾಲೂಕಿನ ತೊಂಡಿಹಾಳ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಹಾಲಪ್ಪ ಆಚಾರ್‌ ಮಾತನಾಡಿದರು.



ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ