ಆ್ಯಪ್ನಗರ

ಪ್ರತಿಭಟನಾ ಸ್ಥಳಕ್ಕೆ ಶಾಸಕ ಭೇಟಿ

ನಗರಸಭೆ ಎದುರು ಪೌರಕಾರ್ಮಿಕರು ಬಾಕಿ ವೇತನ ನೀಡಬೇಕೆಂದು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಶಾಸಕ ಪರಣ್ಣ ಮುನವಳ್ಳಿ ಮಂಗಳವಾರ ಭೇಟಿ ನೀಡಿದರು.

Vijaya Karnataka 26 Sep 2018, 5:00 am
ಗಂಗಾವತಿ ; ನಗರಸಭೆ ಎದುರು ಪೌರಕಾರ್ಮಿಕರು ಬಾಕಿ ವೇತನ ನೀಡಬೇಕೆಂದು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಶಾಸಕ ಪರಣ್ಣ ಮುನವಳ್ಳಿ ಮಂಗಳವಾರ ಭೇಟಿ ನೀಡಿದರು.
Vijaya Karnataka Web KPL-KPL25CM04


ನಗರಸಭೆಯಲ್ಲಿ ಸುಮಾರು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಕಳೆದ 9 ತಿಂಗಳಿಂದ ವೇತನ ನೀಡದೇ ಇರುವುದನ್ನು ಖಂಡಿಸಿ ಪೌರಕಾರ್ಮಿಕರು ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ, ಪೌರಾಯುಕ್ತರೊಂದಿಗೆ ಮಾತುಕತೆ ನಡೆಸಿದರು. ಇದೇ ತಿಂಗಳು 30ನೇ ತಾರೀಖಿನ ಒಳಗಾಗಿ ಪೌರಕಾರ್ಮಿಕರಿಗೆ ನೀಡಬೇಕಾದ ಬಾಕಿ ವೇತನವನ್ನು ಪಾವತಿಸಲಾಗುವುದು ಎಂದು ಭರವಸೆ ನೀಡಿದರು. ಪ್ರತಿಭಟನೆಯನ್ನು ಕೈಬಿಡಬೇಕು ಎಂದು ಹೇಳಿದರು. ಕಾರ್ಮಿಕ ಮುಖಂಡ ಭಾರದ್ವಾಜ್‌ ಮಾತನಾಡಿ, ಶಾಸಕರು ನೀಡಿದ ಭರವಸೆ ಮೇರೆಗೆ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಳ್ಳಲಾಗುವುದು. ಒಂದು ವೇಳೆ ವೇತನ ಪಾವತಿಸದಿದ್ದರೆ ಪುನಃ ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಲಾಗುವುದು ಎಂದರು. ನಗರಸಭೆ ಪೌರಾಯುಕ್ತೆ ಕೆ.ಶ್ರುತಿ, ನಗರಸಭೆ ನೂತನ ಸದಸ್ಯರಾದ ಪರಶುರಾಮ ಮಡ್ಡೇರ, ನವೀನ, ರಾಚಪ್ಪ ಸಿದ್ದಪೂರ ಹಾಗೂ ಪೌರಕಾರ್ಮಿಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ