ಆ್ಯಪ್ನಗರ

ವಿರುಪಾಪುರಗಡ್ಡಿಯಲ್ಲಿ ಸಿಲುಕಿರುವ 19 ವಿದೇಶಿಯರು ಸೇರಿದಂತೆ 300 ಜನರ ರಕ್ಷಣೆಗೆ NDRF

ವಿರುಪಾಪುರಗಡ್ಡಿಯಲ್ಲಿ ಸಿಲುಕಿರುವ 19 ಜನ ವಿದೇಶಿ ಪ್ರವಾಸಿಗರು ಸೇರಿದಂತೆ ಸುಮಾರು 300 ಕ್ಕೂ ಅಧಿಕ ಪ್ರವಾಸಿಗರ ರಕ್ಷಣೆಗೆ ಎನ್‌ಡಿಆರ್‌ಎಫ್ ತಂಡ ಜಿಲ್ಲೆಗೆ ಆಗಮಿಸಿದೆ.

Vijaya Karnataka Web 12 Aug 2019, 9:53 am
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡಿಯಲ್ಲಿ ಸಿಲುಕಿರುವ 19 ಜನ ವಿದೇಶಿ ಪ್ರವಾಸಿಗರು ಸೇರಿದಂತೆ ಸುಮಾರು 300 ಕ್ಕೂ ಅಧಿಕ ಪ್ರವಾಸಿಗರ ರಕ್ಷಣೆಗೆ ಎನ್‌ಡಿಆರ್‌ಎಫ್ ತಂಡ ಆಗಮಿಸಿದೆ.
Vijaya Karnataka Web koppala


ಜರ್ಮನಿಯ 11, ಫ್ರಾನ್ಸ್‌ 5, ಸ್ವಿಟ್ಜರ್ಲೆಂಡ್‌‌, ಯುಎಸ್‌ಎ ಸೇರಿದಂತೆ ದೇಶದ ವಿವಿಧ ರಾಜ್ಯದಿಂದ ಪ್ರವಾಸಿಗರು ಆಗಮಿಸಿದ್ದಾರೆ. ಸುಮಾರು 300 ಕ್ಕೂ ಅಧಿಕ ಪ್ರವಾಸಿಗರು ಪ್ರವಾಹದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಪ್ರವಾಸಿಗರನ್ನು ರಕ್ಷಿಸಲು ಎನ್‌ಡಿಆರ್ ಎಫ್‌ ತಂಡ ವಿರುಪಾಪುರ ಗಡ್ಡಿಗೆ ಆಗಮಿಸಿದ್ದು, ಸೂಕ್ತ ಸ್ಥಳ‌ ಪರಿಶೀಲನೆಗೆ ನಡೆಸುತ್ತಿದೆ. ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.


ಕಳೆದೊಂದು ವಾರದಿಂದ ಸುರಿಯುತ್ತಿರುವ ಭೀಕರ ಮಳೆಯಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಸ ಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ