ಆ್ಯಪ್ನಗರ

ಬಾಲ್ಯವಿವಾಹ: ಜೈಲುಪಾಲಾದ ಪೋಷಕರು, ಪತಿ

ಬಾಲ್ಯವಿವಾಹ ನಿಷೇಧ ಕಾಯಿದೆ- 2006ರ ಪ್ರಕಾರ ಪ್ರಕರಣ ದಾಖಲಾಗಿತ್ತು. ಬೇವೂರು ಠಾಣೆಯ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Vijaya Karnataka 3 Feb 2019, 8:16 am
ಕೊಪ್ಪಳ: ಬಾಲ್ಯವಿವಾಹ ನಡೆಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಾಲಕಿಯನ್ನು ವಿವಾಹವಾದವನಿಗೆ ಮತ್ತು ಪೋಷಕರಿಗೆ 6 ತಿಂಗಳ ಕಠಿಣ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಯಲಬುರ್ಗಾ ಜೆಎಂ‌ ಎಫ್‌ಸಿ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.
Vijaya Karnataka Web COURT


ಬಾಲಕಿಯ ತಂದೆ ಮತ್ತು ಪತಿಯ ತಾಯಿ ಶಿಕ್ಷೆಗೆ ಗುರಿಯಾಗಿದ್ದಾರೆ. 2013 ಜನವರಿ 4 ರಂದು ಯಲಬುರ್ಗಾ ತಾಲೂಕಿನ ಬೇವೂರು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ವಿವಾಹ ನಡೆಯುತ್ತಿದ್ದ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಮಕ್ಕಳ ವಿಶೇಷ ಪೊಲೀಸ್ ಘಟಕದ ಸಿಬ್ಬಂದಿ ಅಧಿಕಾರಿಗಳು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದರು.

ಬಾಲ್ಯವಿವಾಹ ನಿಷೇಧ ಕಾಯಿದೆ- 2006ರ ಪ್ರಕಾರ ಪ್ರಕರಣ ದಾಖಲಾಗಿತ್ತು. ಬೇವೂರು ಠಾಣೆಯ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ