ಆ್ಯಪ್ನಗರ

ಐದನೇ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಅನಿರ್ಧಿಷ್ಠ ಧರಣಿ

ನಗರಸಭೆ ವತಿಯಿಂದ ಪೌರಕಾರ್ಮಿಕರಿಗೆ ಬಾಕಿ ವೇತನ ಪಾವತಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ನಗರಸಭೆ ಕಚೇರಿ ಎದುರು ಪೌರ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸೋಮವಾರ ಐದನೇ ದಿನ ಪೂರೈಸಿತು.

Vijaya Karnataka 12 Jun 2018, 5:00 am
ಗಂಗಾವತಿ : ನಗರಸಭೆ ವತಿಯಿಂದ ಪೌರಕಾರ್ಮಿಕರಿಗೆ ಬಾಕಿ ವೇತನ ಪಾವತಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ನಗರಸಭೆ ಕಚೇರಿ ಎದುರು ಪೌರ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸೋಮವಾರ ಐದನೇ ದಿನ ಪೂರೈಸಿತು.
Vijaya Karnataka Web KPL-KPL11CM04


ಕಾರ್ಮಿಕರ ಮುಖಂಡ ಜೆ.ಭಾರಧ್ವಾಜ್‌ ಮಾತನಾಡಿ, ಗುತ್ತಿಗೆ ಆಧಾರದ ಮೇಲೆ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ನಗರಸಭೆಯು ಕಳೆದ 9 ತಿಂಗಳಿಂದ ಬಾಕಿ ಇರುವ ವೇತನವನ್ನು ಪಾವತಿ ಮಾಡಿಲ್ಲ. ಇದರಿಂದ ಪೌರಕಾರ್ಮಿಕರು ಸಂಕಷ್ಟ ಎದುರಿಸುವಂತಾಗಿದೆ. ಮಕ್ಕಳ ಶಾಲಾ ಶುಲ್ಕವನ್ನು ಭರಿಸಲು, ಅನಾರೋಗ್ಯದಿಂದ ಬಳಲುತ್ತಿರುವ ಕಾರ್ಮಿಕರಿಗೆ ಚಿಕಿತ್ಸೆ ವೆಚ್ಚ ಭರಿಸಲು ಹಣವಿಲ್ಲದಂತಾಗಿದೆ. ಪೌರ ಕಾರ್ಮಿಕರಿಗೆ ನೀಡಬೇಕಾದ ಬಾಕಿ ವೇತನವನ್ನು ಪಾವತಿಸಬೇಕು ಎಂದು ಪೌರಾಯುಕ್ತರಿಗೆ ಸುಮಾರು ಬಾರಿ ಮನವಿ ಮಾಡಿಕೊಂಡರೂ ವಿಳಂಬ ಮಾಡುತ್ತಿದ್ದಾರೆ. ಹಾಗಾಗಿ ಬಾಕಿ ಇರುವ ವೇತನ ಪಾವತಿಯಾಗುವವರೆಗೂ ಧರಣಿಯನ್ನು ಕೈಬಿಡುವುದಿಲ್ಲ ಎಂದರು.

ಪೌರಕಾರ್ಮಿಕರಾದ ಪರಶುರಾಮ, ಬುಡ್ಡಪ್ಪ, ಬಸವರಾಜ ಸುಳೇಕಲ್‌, ಯಂಕೋಬಿ, ಯಮನಮ್ಮ, ದುರುಗೇಶ, ಪಕೀರಪ್ಪ, ಮಾರೆಮ್ಮ ಹಾಗೂ ಇತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ