ಆ್ಯಪ್ನಗರ

ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಹೋದ ಕಿರಿಯ ಭೂ ವಿಜ್ಞಾನಿ ದಿನೇಶ್ ಗೌಡ ಸಾವು

ಅಕ್ರಮ ಗಣಿಗಾರಿಕೆ ತಡೆಯಲು ಹೋಗಿದ್ದ ವೇಳೆ ಡೀಸೆಲ್ ಬ್ಯಾರೆಲ್‌ ಸ್ಫೋಟದಿಂದ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಾವು

Vijaya Karnataka Web 15 Oct 2018, 9:28 am
ಕೊಪ್ಪಳ: ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಹೋದ ವೇಳೆ ಡೀಸೆಲ್ ಬ್ಯಾರೆಲ್ ಬ್ಲಾಸ್ಟ್‌ನಿಂದ ಗಾಯಗೊಂಡಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಿರಿಯ ಭೂ ವಿಜ್ಞಾನಿ ದಿನೇಶ್ ಗೌಡ ಸಾವನ್ನಪ್ಪಿದ್ದಾರೆ.
Vijaya Karnataka Web Dinesh Gowda


ಯಲಬುರ್ಗಾ ತಾಲೂಕಿನ ಲಿಂಗನಬಂಡಿ ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ಅ.6 ರಂದು ಮೂವರು ಅಧಿಕಾರಿಗಳು ದಾಳಿ ನಡೆಸಿದ ವೇಳೆ ಡೀಸೆಲ್ ಬ್ಯಾರೆಲ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯಗಳಾಗಿತ್ತು.

ಮೂವರಿಗೆ ಕುಷ್ಟಗಿ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಕಿರಿಯ ಭೂ ವಿಜ್ಞಾನಿ‌ ದಿನೇಶ್ ಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ