ಆ್ಯಪ್ನಗರ

ಸಾರಿಗೆ ಬಸ್‌ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಮನವಿ

ತಾಲೂಕಿನ ಹಳೆ ಜಿರ್ಹಾಳ ಕಲ್ಗುಡಿ ಗ್ರಾಮಕ್ಕೆ ಸಾರಿಗೆ ಇಲಾಖೆಯಿಂದ ನಿಗದಿತ ಸಮಯಕ್ಕೆ ಬಸ್‌ ಸಂಚಾರ ಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ, ಜಿರ್ಹಾಳ ಕಲ್ಗುಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ನಗರದ ಬಸ್‌ ಡಿಪೋಗೆ ಸೋಮವಾರ ಭೇಟಿ ನೀಡಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

Vijaya Karnataka 10 Jul 2018, 5:00 am
ಗಂಗಾವತಿ ; ತಾಲೂಕಿನ ಹಳೆ ಜಿರ್ಹಾಳ ಕಲ್ಗುಡಿ ಗ್ರಾಮಕ್ಕೆ ಸಾರಿಗೆ ಇಲಾಖೆಯಿಂದ ನಿಗದಿತ ಸಮಯಕ್ಕೆ ಬಸ್‌ ಸಂಚಾರ ಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ, ಜಿರ್ಹಾಳ ಕಲ್ಗುಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ನಗರದ ಬಸ್‌ ಡಿಪೋಗೆ ಸೋಮವಾರ ಭೇಟಿ ನೀಡಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
Vijaya Karnataka Web KPL-KPL09CM02


ಗಂಗಾವತಿಯಿಂದ 12ಕಿ.ಮೀ. ಅಂತರದಲ್ಲಿರುವ ಗ್ರಾಮಕ್ಕೆ ನಗರದಿಂದ ನೇರವಾಗಿ ಸಾರಿಗೆ ಬಸ್‌ ಸೌಕರ್ಯವಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ನಗರಕ್ಕೆ ಹೋಗಲು 2ಕಿ.ಮೀ. ದೂರವಿರುವ ಹೊಸ ಜಿರ್ಹಾಳ ಕಲ್ಗುಡಿ ಗ್ರಾಮದವರೆಗೆ ನಡೆದುಕೊಂಡು ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್‌ ಪಾಸ್‌ ಇದ್ದರೂ ವಿದ್ಯಾರ್ಥಿಗಳು ಖಾಸಗಿ ವಾಹನಗಳಿಗೆ ಮೊರೆ ಹೋಗುವಂತಾಗಿದೆ. ಈಗಾಗಲೇ ಹಲವು ವರ್ಷಗಳಿಂದ ಗ್ರಾಮಕ್ಕೆ ಸಾರಿಗೆ ಬಸ್‌ ಸಂಪರ್ಕ ಕಲ್ಪಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗಮನ ಸೆಳೆದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಮಂಜುನಾಥ, ರಾಘವೇಂದ್ರ, ವೀರೇಶ, ಹನುಮಂತಪ್ಪ, ಹರೀಶ, ನಾಗರಾಜ ಸೇರಿದಂತೆ ಗ್ರಾಮಸ್ಥರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ