ಆ್ಯಪ್ನಗರ

ಕೃಷ್ಣ ರಾಜೀನಾಮೆಯಿಂದ ಪಕ್ಷಕ್ಕೆ ಹಾನಿ: ಪರಮೇಶ್ವರ್‌

ಎಸ್. ಎಂ. ಕೃಷ್ಣ ಅವರು ರಾಜೀನಾಮೆ ನೀಡಿದ್ದರಿಂದ ಪಕ್ಷಕ್ಕೆ ಹಾನಿಯಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ಹೇಳಿದರು.

ವಿಕ ಸುದ್ದಿಲೋಕ 1 Feb 2017, 12:09 pm
ಕೊಪ್ಪಳ: ಎಸ್. ಎಂ. ಕೃಷ್ಣ ಅವರು ರಾಜೀನಾಮೆ ನೀಡಿದ್ದರಿಂದ ಪಕ್ಷಕ್ಕೆ ಹಾನಿಯಾಗಿದೆ. ಆದರೆ ಮುಂಬರುವ ದಿನಗಳಲ್ಲಿ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ಹೇಳಿದರು.
Vijaya Karnataka Web sm krishna resignation damage to party parameshwar
ಕೃಷ್ಣ ರಾಜೀನಾಮೆಯಿಂದ ಪಕ್ಷಕ್ಕೆ ಹಾನಿ: ಪರಮೇಶ್ವರ್‌


ಖಾಸಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಇನ್ನೂ ಕಾಲಾವಕಾಶವಿದೆ. ಬರುವ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಬಲಗೊಳಿಸುತ್ತೇವೆ.
ಒಳಮೀಸಲಿನಲ್ಲಿ ಮಾದಿಗ ಹಾಗೂ ಛಲವಾದಿ ಸಮುದಾಯಗಳನ್ನು ಒಳಪಡಿಸುವ ನಿಟ್ಟಿನಲ್ಲಿ ಸರಕಾರ ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಸಾಮೂಹಿಕ ನಾಯಕತ್ವದಲ್ಲಿ ಮುಂದಿನಚುನಾವಣೆ ಎದುರಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದರು.

ಜೆಡಿಎಸ್ ನಿಂದ ಉಚ್ಛಾಟಿರಾಗಿರುವ ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿಲ್ಲ. ಕಾಂಗ್ರೆಸ್‌ನ ಹಿರಿಯ ನಾಯಕರ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ರಾಜ್ಯದಲ್ಲಿ ಕುರುಬರ ಆಡಳಿತವಿದೆ ಎಂಬಜಾಫರ ಷರೀಫ್ ಅವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಎಸ್ ಎಂ ಕೃಷ್ಣ ಬಿಜೆಪಿಗೆ ಸೇರುವ ಬಗ್ಗೆ ಮಾಹಿತಿ ಇಲ್ಲ.
ಹೈ ಕ ಭಾಗದಲ್ಲಿ ಪೊಲೀಸ ನೇಮಕಾತಿ ಹಾಗೂ ಬಡ್ತಿಯಲ್ಲಿ ಯಾವುದೇ ಅನ್ಯಾಯವಾಗಿಲ್ಲ ಎಂದು ಪರಮೇಶ್ವರ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ