ಆ್ಯಪ್ನಗರ

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ತಂದೆ, ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಮಗ

ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಗ, ಕ್ಷುಲ್ಲಕ ಕಾರಣಕ್ಕೆ ತನ್ನ ಪೋಷಕರನ್ನೇ ಕೊಲೆ ಮಾಡಿದ ಘಟನೆ ನಡೆದಿದೆ.

Vijaya Karnataka Web 2 Jun 2020, 9:34 am
ಕೊಪ್ಪಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಪುತ್ರನೊಬ್ಬ ಹೆತ್ತವರನ್ನೇ ಕೊಲೆ ಮಾಡಿರುವ ಘಟನೆ ಕನಕಗಿರಿ ಪಟ್ಟಣದಲ್ಲಿ ನಡೆದಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ತಾಯಿ ಅಕ್ಕಮ್ಮ ಮಡಿವಾಳರ (55) ತಂದೆ ಗಿರಿಯಪ್ಪರನ್ನು (60) ಮಗ ರಮೇಶ್ ಕೊಲೆ ಮಾಡಿದ್ದಾನೆ.

ರಮೇಶ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಕ್ಷುಲ್ಲಕ ಕಾರಣಕ್ಕೆ ತಂದೆ-ತಾಯಿಯೊಡನೆ ಜಗಳ ತೆಗೆದಿದ್ದಾನೆ. ಮನೆಯಲ್ಲಿದ್ದ ಹಾರಿಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.

ತಾಯಿ ಅಕ್ಕಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಗಿರಿಯಪ್ಪ ತೀವ್ರಗಾಯಗೊಂಡಿದ್ದು ಗಂಗಾವತಿಯ ಸರಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕನಕಗಿರಿ ಪೊಲೀಸರು ರಮೇಶನನ್ನು ವಶಕ್ಕೆ ಪಡೆದು ವಿಚಾರಣೆ‌ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ