ಆ್ಯಪ್ನಗರ

ಕೊಪ್ಪಳ: ಮತ್ತೆ ಇಬ್ಬರು ಕೊರೊನಾ ಸೋಂಕಿಗೆ ಬಲಿ!

ಶುಕ್ರವಾರ ಕೊಪ್ಪಳದಲ್ಲಿ ಮತ್ತೆ ಇಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತ ಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಕೊರೊನಾ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿ ಕೇಸ್‌ಗಳು ಏರಿಕೆಯಾಗುತ್ತಿದ್ದರು ಸದ್ಯ ನಿಯಂತ್ರಣದಲ್ಲಿದೆ.

Vijaya Karnataka Web 31 Jul 2020, 4:05 pm
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ - 19 ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು ಶುಕ್ರವಾರ ಮತ್ತೆ ಇಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತ ಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
Vijaya Karnataka Web 18


ಯಲಬುರ್ಗಾ ತಾಲೂಕಿನ ಆಡೂರು ಗ್ರಾಮದ 62 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು ಸರಕಾರದ ನಿಯಮಾವಳಿಯನ್ವಯ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆಯ 62 ವರ್ಷ ದ ವ್ಯಕ್ತಿಯೊಬ್ಬರು ಕೋವಿಡ್ -19 ಸೋಂಕು ದೃಢವಾಗಿದ್ದು ಇಲ್ಲಿನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ. ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ

ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದರು ನಿಯಂತ್ರಣದಲ್ಲಿದೆ. ಸದ್ಯ ಜಿಲ್ಲೆಯಲ್ಲಿ ಈವರೆಗೆ 1,096 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ 689 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ತೆರಳಿದ್ದಾರೆ. ಸದ್ಯ ಇರುವ ರೋಗಿಗಳಿಗೆ ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಪ್ಪಳ ಜಿಲ್ಲೆಯಲ್ಲಿ ಮತ್ತೆ ಇಬ್ಬರು ಕೊರೊನಾದಿಂದ ಸಾವು..!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ