ಆ್ಯಪ್ನಗರ

ಮಂಡ್ಯದಲ್ಲಿ ಹಲ್ಲಿ ಬಿದ್ದ ಆಹಾರ ಸೇವಿಸಿ 10 ಪುಟಾಣಿ ಮಕ್ಕಳು ಅಸ್ವಸ್ಥ

ಒಟ್ಟು ಹತ್ತು ಪುಟಾಣಿ ಮಕ್ಕಳು ಅಸ್ವಸ್ಥರಾಗಿದ್ದು ಮಂಡ್ಯದ ವಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡ್ಯ ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Vijaya Karnataka Web 4 Sep 2019, 5:03 pm
ಮಂಡ್ಯ: ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ ಪುಟಾಣಿ ಮಕ್ಕಳು ಅಸ್ವಸ್ಥವಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
Vijaya Karnataka Web Mandya


ಇಲ್ಲಿನ ಗಾಂಧಿನಗರದ ಅಂಗನವಾಡಿಯಲ್ಲಿ ತಯಾರಿಸಿದ ಆಹಾರದಲ್ಲಿ ಹಲ್ಲಿ ಬಿದ್ದಿತ್ತು. ಆದರೆ ಹಲ್ಲಿ ಬಿದ್ದಿದ್ದು ಗೊತ್ತಿಲ್ಲದೆ ಪುಟಾಣಿ ಮಕ್ಕಳು ಆಹಾರ ಸೇವಿಸಿದ್ದರು. ಆಹಾರ ಸೇವಿಸಿದ ನಂತರ ಮಕ್ಕಳು ಒಬ್ಬೊಬ್ಬರೇ ಅಸ್ವಸ್ಥರಾಗಲು ಆರಂಭಿಸಿದರು.

ನಂತರ ಪರಿಶೀಲನೆ ನಡೆಸಿದಾಗ ಪಾತ್ರೆಯಲ್ಲಿ ಹಲ್ಲಿ ಪತ್ತೆಯಾಗಿದೆ. ಇದರಿಂದ ಮಕ್ಕಳು ಅಸ್ವಸ್ಥರಾಗಲು ಆಹಾರದಲ್ಲಿ ಹಲ್ಲಿ ಬಿದ್ದಿದ್ದೇ ಕಾರಣ ಎಂದು ಗೊತ್ತಾಗಿದೆ. ವಿಷಯ ತಿಳಿಯುತ್ತಿದ್ದಂತೆ ಆಹಾರ ಸೇವಿಸಿ ಅಸ್ವಸ್ಥರಾದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಟ್ಟು ಹತ್ತು ಪುಟಾಣಿ ಮಕ್ಕಳು ಅಸ್ವಸ್ಥರಾಗಿದ್ದು ಮಂಡ್ಯದ ವಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡ್ಯ ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ