ಆ್ಯಪ್ನಗರ

ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿ: ಸಚಿವ ಪುಟ್ಟರಾಜು

ನಮ್ಮೊಂದಿಗೂ ಸಹ ಬಿಜೆಪಿಯ 10 ಮಂದಿ ಶಾಸಕರು ಸಂಪರ್ಕದಲ್ಲಿದ್ದು, ಮುಂದಿನ ದಿನಗಳಲ್ಲಿ ಪಕ್ಷಾಂತರ ಪರ್ವ ಆರಂಭವಾಗಲಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌. ಪುಟ್ಟರಾಜು ಹೇಳಿದರು.

Vijaya Karnataka 20 Jan 2019, 5:00 am
ಪಾಂಡವಪುರ: ನಮ್ಮೊಂದಿಗೂ ಸಹ ಬಿಜೆಪಿಯ 10 ಮಂದಿ ಶಾಸಕರು ಸಂಪರ್ಕದಲ್ಲಿದ್ದು, ಮುಂದಿನ ದಿನಗಳಲ್ಲಿ ಪಕ್ಷಾಂತರ ಪರ್ವ ಆರಂಭವಾಗಲಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌. ಪುಟ್ಟರಾಜು ಹೇಳಿದರು.
Vijaya Karnataka Web 10 mlas of the bjp in our contact minister puttaraju
ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿ: ಸಚಿವ ಪುಟ್ಟರಾಜು


ತಾಲೂಕಿನ ಬನ್ನಂಗಾಡಿ ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಜೆಡಿಎಸ್‌ನಿಂದ ಮುಂದಿನ ದಿನಗಳಲ್ಲಿ 'ಆಪರೇಷನ್‌ ಜೆಡಿಎಸ್‌' ಮಾಡುತ್ತೇವೋ ಬಿಡುತ್ತೇವೋ ಅದು ಮುಂದೆ ಗೊತ್ತಾಗಲಿದೆ,''ಎಂದು ಹೇಳಿದರು.

''ಬಿಜೆಪಿಯ ಆಪರೇಷನ್‌ ಕಮಲ ವಿಫಲವಾಗಿದ್ದು, ರಾಜ್ಯದ ಸಮ್ಮಿಶ್ರ ಸರಕಾರ ಸುಭದ್ರವಾಗಿದೆ. ಐದು ವರ್ಷಗಳ ಕಾಲ ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ಅಧಿಕಾರ ಪೂರೈಸಲಿದೆ. ಆಪರೇಷನ್‌ ಕಮಲ ವಿಫಲವಾದ ಬಳಿಕ ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಾನು ಯಾವುದೇ ಕಾರಣಕ್ಕೂ ಸರಕಾರವನ್ನು ಅಭದ್ರಗೊಳಿಸೋದಿಲ್ಲ ಎಂಬುದಾಗಿ ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ನಮ್ಮ ಸರಕಾರ ಸುಭದ್ರವಾಗಿದೆ,''ಎಂದರು.

''ಬಿಜೆಪಿ ಶಾಸಕರು ಹರಿಯಾಣದ ಗುರುಗ್ರಾಮ ರೆಸಾರ್ಟ್‌ನಲ್ಲಿ ಮೋಜು ಮಸ್ತಿ ಮಾಡುವುದಕ್ಕಾಗಿ ಹೋಗಿದ್ದಾರೆ,''ಎಂದು ದೂರಿದ ಸಚಿವರು, ''ಕಾಂಗ್ರೆಸ್‌ನವರು ತಮ್ಮ ಪಕ್ಷ ದ ಶಾಸಕರನ್ನು ರಕ್ಷ ಣೆ ಮಾಡಿಕೊಳ್ಳುವುದಕ್ಕೆ ರೆಸಾರ್ಟ್‌ಗೆ ಹೋದರೆ ಏನು ತಪ್ಪು,''ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ