ಆ್ಯಪ್ನಗರ

ಪಿಯುಸಿ ಪರೀಕ್ಷೆ: ಮೊದಲ ದಿನ ಸುಸೂತ್ರ

(ಪೋಟೋ ಇದೆ) ವಿಕ ಸುದ್ದಿಲೋಕ ಮಂಡ್ಯ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆ ಶುಕ್ರವಾರದಿಂದ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಯಾವುದೇ ...

Vijaya Karnataka 2 Mar 2019, 5:00 am
ಮಂಡ್ಯ: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆ ಶುಕ್ರವಾರದಿಂದ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಯಾವುದೇ ಗೊಂದಲಗಳಿಲ್ಲದೇ ಸುಸೂತ್ರವಾಗಿ ನಡೆಯಿತು.
Vijaya Karnataka Web 2nd puc exam first done smoothly in mandya district
ಪಿಯುಸಿ ಪರೀಕ್ಷೆ: ಮೊದಲ ದಿನ ಸುಸೂತ್ರ


ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ 2019ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೊದಲ ದಿನ ಜಿಲ್ಲೆಯ ಒಟ್ಟು 26 ಪರೀಕ್ಷಾ ಕೇಂದ್ರಗಳಲ್ಲಿ ಭೌತಶಾಸ್ತ್ರ ಹಾಗೂ ಅರ್ಥಶಾಸ್ತ್ರ ವಿಷಯದ ಪರೀಕ್ಷೆಗಳನ್ನು ಜರುಗಿತು. ಭೌತಶಾಸ್ತ್ರ ವಿಷಯದಲ್ಲಿ 4565 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಅವರಲ್ಲಿ 113 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದು, ಒಟ್ಟು 4452 ಮಂದಿ ಪರೀಕ್ಷೆ ಎದುರಿಸಿದ್ದಾರೆ. ಅರ್ಥಶಾಸ್ತ್ರ ವಿಷಯದಲ್ಲಿ 9538 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಅದರಲ್ಲಿ 543 ಮಂದಿ ಗೈರಾಗಿದ್ದರೆ, 2945 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪುನರಾವರ್ತಿತ 475 ಅಭ್ಯರ್ಥಿಗಳು ನೋಂದಣಿಯಾಗಿದ್ದರು. ಅದರಲ್ಲಿ 92 ಮಂದಿ ಗೈರು ಹಾಜರಾಗಿದ್ದರೆ, 384 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ, ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಕೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪೊಲೀಸ್‌ ಬಿಗಿಬಂದೋಬಸ್ತ್‌ ಮಾಡಲಾಗಿದೆ. 144 ಸೆಕ್ಷನ್‌ ಜಾರಿ ಸೇರಿದಂತೆ ಇತರೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಹಿನ್ನಲೆ ಪರೀಕ್ಷೆ ಸುಗಮವಾಗಿ ನಡೆದಿದ್ದು, ಎಲ್ಲಿಯೂ ವಿದ್ಯಾರ್ಥಿಗಳು ನಕಲು, ಡಿಬಾರ್‌ ಆಗಿರುವ ಪ್ರಕರಣ ಕಂಡು ಬಂದಿಲ್ಲ ಎಂದು ಪಿಯು ಬೋರ್ಡ್‌ನ ಉಪನಿರ್ದೇಶಕಿ ಗೀತಾ ತಿಳಿಸಿದರು.

ಸರಕಾರ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣದ ವ್ಯವಸ್ಥೆ ಮಾಡಿತ್ತು. ಖಾಸಗಿ ಬಸ್‌ಗಳು ಕೂಡ ಪರೀಕ್ಷಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿಕೊಟ್ಟರು. ನಗರದ ಪರೀಕ್ಷಾ ಕೇಂದ್ರಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆ ತಂದು ಬಿಡುತ್ತಿದ್ದ ದೃಶ್ಯಗಳು ಕಂಡು ಬಂದವು. ಆತಂಕವನ್ನು ದೂರ ಮಾಡಿ, ಯಶಸ್ವಿಯಾಗಿ ಪರೀಕ್ಷೆ ಬರೆ ಎಂದು ಪೋಷಕರು ಸಲಹೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ