ಆ್ಯಪ್ನಗರ

​ ಸರಕಾರಿ ಸೌಲಭ್ಯಕ್ಕೆ ಆಧಾರ್ ಕಡ್ಡಾಯ

ಸರಕಾರದಿಂದ ಸಿಗುವ ಸೌಲಭ್ಯಗಳಿಗೆ ಹಾಗೂ ಬ್ಯಾಂಕ್ ವ್ಯವಹಾರಗಳಿಗೆ ಆಧಾರ್ ನೋಂದಣಿ ಕಡ್ಡಾಯವಾಗಿದ್ದು, ಪ್ರತಿಯೊಬ್ಬರು ಆಧಾರ್ ಕಾರ್ಡ್ ಮಾಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ ತಿಳಿಸಿದರು.

ವಿಕ ಸುದ್ದಿಲೋಕ 25 Jun 2017, 5:15 am
ಮಂಡ್ಯ: ಸರಕಾರದಿಂದ ಸಿಗುವ ಸೌಲಭ್ಯಗಳಿಗೆ ಹಾಗೂ ಬ್ಯಾಂಕ್ ವ್ಯವಹಾರಗಳಿಗೆ ಆಧಾರ್ ನೋಂದಣಿ ಕಡ್ಡಾಯವಾಗಿದ್ದು, ಪ್ರತಿಯೊಬ್ಬರು ಆಧಾರ್ ಕಾರ್ಡ್ ಮಾಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ ತಿಳಿಸಿದರು.
Vijaya Karnataka Web aadhaar is mandatory for government facility
​ ಸರಕಾರಿ ಸೌಲಭ್ಯಕ್ಕೆ ಆಧಾರ್ ಕಡ್ಡಾಯ


ಜಿಲ್ಲಾಕಾರಿಗಳ ಕಚೇರಿಯಲ್ಲಿ ಈ ಆಡಳಿತ ಕೇಂದ್ರ, ಬೆಂಗಳೂರು, ಹಾಗೂ ಜಿಲ್ಲಾಡಳಿತ ಮಂಡ್ಯ ಇವರ ಸಹ ಯೋಗದಲ್ಲಿ ಶನಿವಾರ ಸಾರ್ವಜನಿಕರಿಗೆ ಆಧಾರ್ ಸೇವೆಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಒಂದು ದಿನದ ಕಾರ‌್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಸರಕಾರದ ಪ್ರತಿಯೊಂದು ಸೇವಾ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಪ್ರತಿಯೊಬ್ಬರು ಆಧಾರ್ ನೋಂದಣಿ ಒಳಪಡಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಆಧಾರ್ ನೋಂದಣಿ ಕೇಂದ್ರಗಳನ್ನು ಆರಂಭಿಸ ಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಂಡು ಆಧಾರ್ ನೋಂದಣಿಗೆ ಮುಂದಾಗ ಬೇಕು ಎಂದು ತಿಳಿಸಿದರು.

ಆಧಾರ್ ಕಾರ್ಡ್‌ನ್ನು ಇನ್ನು ಮುಂದೆ ವಿಶಿಷ್ಟ ಗುರುತಿನಿ ಚೀಟಿ ಎಂದು ಪರಿಗಣಿಸಲು ಚಿಂತನೆ ನಡೆಸುತ್ತಿದೆ. ಹೀಗಾಗಿ ಪ್ರತಿಯೊಬ್ಬರೂ ಆಧಾರ್ ನೋಂದಾಣಿ ಕಡ್ಡಾಯವಾಗಿ ಮಾಡಿಸಿ ಕೊಳ್ಳಬೇಕು. ಸರಕಾರದ ಸೇವೆಗಳನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಒದಗಿಸುವ ಸಲುವಾಗಿ ಆಧಾರ್ ಸೇವೆಗಳ ಕುರಿತು ಅರಿವು ಮೂಡಿಸಲು ಕಾರ‌್ಯಾಗಾರವನ್ನು ಏರ್ಪಡಿಸಲಾಗಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ದಿವಾಕಾರ್, ಮಳವಳ್ಳಿ ತಹಸೀಲ್ದಾರ್ ದಿನೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಾ ಸುಲೋಚನಾ ಇತರೆ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ