ಆ್ಯಪ್ನಗರ

ವಾಹನ ದಟ್ಟಣೆ ನಿಯಂತ್ರಣಕ್ಕೆ ಸಿಗ್ನಲ್ ಅಳವಡಿಕೆ

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು ಶ್ರೀರಂಗಪಟ್ಟಣ ಮುಖ್ಯ ವತ್ತದಲ್ಲಿ ಶೀಘ್ರ ಸಿಗ್ನಲ್ ಲೈಟ್ ಅಳವಡಿಸಲಾಗುವುದು ಎಂದು ಡಿವೈಎಸ್‌ಪಿ ವಿಶ್ವನಾಥ್ ಭರವಸೆ ನೀಡಿದರು.

Vijaya Karnataka Web 20 Jun 2016, 5:16 am
ಶ್ರೀರಂಗಪಟ್ಟಣ: ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು ಶ್ರೀರಂಗಪಟ್ಟಣ ಮುಖ್ಯ ವತ್ತದಲ್ಲಿ ಶೀಘ್ರ ಸಿಗ್ನಲ್ ಲೈಟ್ ಅಳವಡಿಸಲಾಗುವುದು ಎಂದು ಡಿವೈಎಸ್‌ಪಿ ವಿಶ್ವನಾಥ್ ಭರವಸೆ ನೀಡಿದರು.
Vijaya Karnataka Web applying the traffic control signal
ವಾಹನ ದಟ್ಟಣೆ ನಿಯಂತ್ರಣಕ್ಕೆ ಸಿಗ್ನಲ್ ಅಳವಡಿಕೆ


ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಇಲಾಖೆ ಶನಿವಾರ ಸಂಜೆ ಏರ್ಪಡಿಸಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ನಿತ್ಯ ಶ್ರೀರಂಗಪಟ್ಟಣಕ್ಕೆ ಬರುವವರು ಮುಖ್ಯವತ್ತದಲ್ಲಿ ಗಂಟೆಗಟ್ಟಲೆ ನಿಲ್ಲಬೇಕು. ಶಾಲಾ, ಕಾಲೇಜು ಅವಧಿಯಲ್ಲಿ ವಿದ್ಯಾರ್ಥಿಗಳು ರಸ್ತೆ ದಾಟಲು ಪರದಾಡುತ್ತಾರೆ. ಟ್ರಾಫಿಕ್ ನಿಯಂತ್ರಣಕ್ಕೆ ಎಲ್ಲಾ ಸಮಯದಲ್ಲೂ ಸಿಬ್ಬಂದಿ ನಿಯೋಜಿಸಿರುವುದಿಲ್ಲ ಎಂಬ ಮಾತುಗಳು ಕೇಳಿ ಬಂದವು.

ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಜಾಮೀಯ ಮಸೀದಿ ರಸ್ತೆಯಲ್ಲಿ ಶನಿವಾರ ಸಂತೆ ನಡೆಯುತ್ತದೆ. ಆ ವೇಳೆ ರಸ್ತೆಯಲ್ಲಿ ವ್ಯಾಪಾರಿಗಳು ತರಕಾರಿ ಸೊಪ್ಪು ಮಾರಾಟ ಮಾಡುತ್ತಾರೆ. ವಾಹನ ಸವಾರರು ಕೋಟೆ ರಸ್ತೆಯಲ್ಲಿ ಒಳಗೆ, ಹೊರಗೆ ಹೋಗಲು ತೊಂದರೆಯಾಗಿದೆ ಎಂದು ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಚಂದಗಾಲು ಶಂಕರ್ ಇತರರು ದೂರಿದರು.

ಅಹವಾಲು ಆಲಿಸಿದ ಡಿವೈಎಸ್‌ಪಿ ವಿಶ್ವನಾಥ್ ಮಾತನಾಡಿ, ಪುರಸಭೆಯೊಂದಿಗೆ ಚರ್ಚಿಸಿ ಶೀಘ್ರ ಸಿಗ್ನಲ್ ಲೈಟ್ ಅಳವಡಿಸಲಾಗುವುದು. ಪುರಸಭೆ ವತ್ತದವರೆಗೆ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗುವುದು. ಸರಗಳ್ಳತನ, ದರೋಡೆ ಇನ್ನಿತರ ಕತ್ಯಗಳನ್ನು ತಡೆಗಟ್ಟುವ ಉದ್ದೇಶದಿಂದ ಆಯಾಕಟ್ಟಿನ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುವುದು ಎಂದು ಭರವಸೆ ನೀಡಿದರು. ಪಿಎಸ್‌ಐ ಮಹೇಶ್ ಮಾತನಾಡಿದರು.

ಪುರಸಭೆ ಸದಸ್ಯರಾದ ಎಂ.ಎಲ್ ದಿನೇಶ್, ನಂದೀಶ್, ವೆಂಕೇಟೇಶ್, ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ, ಶೀಲಾನಂಜುಂಡಯ್ಯ, ಶೇಷಪ್ಪ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ