ಆ್ಯಪ್ನಗರ

ಬಿಜೆಪಿಯಿಂದ ದಲಿತರಿಗೆ ದ್ರೋಹ; ಖರ್ಗೆ

ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಹೇಳಿಕೆ ಕೊಟ್ಟಿರುವ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಸ್ಸಿ, ಎಸ್ಟಿ ಸಮುದಾಯಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.

Vijaya Karnataka Web 24 Mar 2018, 10:11 pm
ಮಂಡ್ಯ: ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಹೇಳಿಕೆ ಕೊಟ್ಟಿರುವ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಸ್ಸಿ, ಎಸ್ಟಿ ಸಮುದಾಯಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.
Vijaya Karnataka Web mallikarjun-kharge-01.


ಬಿಜೆಪಿ ಸರಕಾರ ಕೇವಲ 9 ಸಾವಿರ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಿದೆ. ಕಾಂಗ್ರೆಸ್ ಸರಕಾರ ಇದ್ದಾಗ 90 ಸಾವಿರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಅಲ್ಪಸಂಖ್ಯಾತರು, ದಲಿತರ ಮೇಲೆ ಹಲ್ಲೆಗಳಾಗುತ್ತಿವೆ.

ಪ್ರಜಾಪ್ರಭುತ್ವ ಉಳಿಯಬೇಕಂದ್ರೆ ಬಿಜೆಪಿ ಸೋಲಿಸಬೇಕು ಎಂದು ಕರೆ ನೀಡಿದರು. ನೀವು ಈ ಚುನಾವಣೆಯಲ್ಲಿ ಜೆಡಿಎಸ್‌ಗೆ ಮತ ಕೊಟ್ಟರೆ ಬಿಜೆಪಿಗೆ ಮತ ಕೊಟ್ಟಂತೆ. ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್‌ಗೆ ಮತ ಕೊಡಿ ಎಂದು ವಿನಂತಿಸಿಕೊಂಡರು.

ಕೇಂದ್ರದ ಮೋದಿ ಸರ್ಕಾರದ ಖರ್ಗೆ ವಾಗ್ದಾಳಿ...
ದಲಿತರ ಪರವಾಗಿ ಕೇಂದ್ರ ಎಂದೂ ಕೆಲಸ ಮಾಡಿಲ್ಲ. ಮೀಸಲಾತಿ ತೆಗೆದು ದಲಿತರನ್ನು ತುಳಿಯುವ ಕೆಲ್ಸ ಮಾಡ್ತಿದೆ. ರಾಜ್ಯ ಸರ್ಕಾರದ ಆಡಳಿತದಲ್ಲಿ ದಲಿತರಿಗೆ ಪೂರಕ ಅಭಿವೃದ್ದಿಗೆ ವಾತಾವರಣವಿದೆ. ರೈತರ ಬಗ್ಗೆ ಕೇಂದ್ರಕ್ಕೆ ಕಿಂಚಿತ್ತು ಕಾಳಜಿ ಇಲ್ಲ.
ಇದ್ದಿದ್ರೆ ಕೇಂದ್ರ ರೈತರ ಸಾಲ ಮಾಡ್ತಿತ್ತು. ಆದ್ರೆ ರಾಜ್ಯ ಸರ್ಕಾರ ರೈತರ ಬಗೆ ಕಾಳಜಿ ಇರೋ ಕಾರಣದಿಂದ ರೈತ್ರ ಸಾಲ ಮನ್ನಾ ಮಾಡಿದೆ ಎಂದು ನುಡಿದರು.

ಪ್ರಧಾನಿ ಮೋದಿ ಸಂವಿಧಾನ, ಅಂಬೇಡ್ಕರ್ ಬಗ್ಗೆ ಹೊಗಳುತ್ತಾರೆ. ಮತ್ತೊಂದೆಡೆ ಸಂವಿಧಾನದ ಬಗ್ಗೆ ಲಘುವಾಗಿ ಕೇಂದ್ರ ಸಚಿವರು ಹಾಗೂ ಆರ್ ಎಸ್ ಎಸ್ ನವರು ತೆಗಳುತ್ತಾರೆ. ಮೋದಿ ಹಾಗೂ ಆರ್‌ಎಸ್‌ಎಸ್ ಮಾತಿನ ನಡುವೆ ವ್ಯತ್ಯಾಸ ವಿದೆ.

ಬಿಜೆಪಿ ದಲಿತರಿಗೆ ದ್ರೋಹ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರದ್ದು ಜನವಿರೋಧಿ ನೀತಿ ಜನ ವಿರೋಧಿಗಳಿಗೆ ಮತಹಾಕಬೇಡಿ. ರೈತರ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ ಎಂದು ಹೇಳಿದರು .

ತಪ್ಪನ್ನು ಒಪ್ಪಿಕೊಂಡ ಮಲ್ಲಿಕಾರ್ಜುನ ಖರ್ಗೆ...
2008 ರಲ್ಲಿ ನಾನು ತಪ್ಪು ಮಾಡಿದೆ. ಆಗ ನರೇಂದ್ರಸ್ವಾಮಿ ಅವರಿಗೆ ಟಿಕೆಟ್ ಕೊಡಲಿಲ್ಲ. ಆದರೂ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು ಬಂದ್ರು. ಈಗ ನಾವೆಲ್ಲ ಅವರ ಜೊತೆ ಇದ್ದೇವೆ. ಆಶೀರ್ವದಿಸಿ ಎಂದು ತಪ್ಪನ್ನು ಒಪ್ಪಿಕೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ