ಆ್ಯಪ್ನಗರ

ಸಂಸದೆ ಸುಮಲತಾ ಬೆಂಬಲ ಕೋರಿದ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು

ಮಂಡ್ಯ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬೂಕಹಳ್ಳಿ ಮಂಜು (ಬಿ.ಸಿ.ಮಂಜು) ಅವರು ಸಂಸದೆ ಸುಮಲತಾ ಅಂಬರೀಶ್‌ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಬೆಂಬಲ ಕೋರಿದರು.

Vijaya Karnataka 27 Nov 2021, 6:48 pm
ಮಂಡ್ಯ: ಮಂಡ್ಯ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬೂಕಹಳ್ಳಿ ಮಂಜು (ಬಿ.ಸಿ.ಮಂಜು) ಅವರು ಸಂಸದೆ ಸುಮಲತಾ ಅಂಬರೀಶ್‌ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಬೆಂಬಲ ಕೋರಿದರು.
Vijaya Karnataka Web bookahalli manju


ಬೆಂಗಳೂರಿನ ಅವರ ನಿವಾಸದಲ್ಲಿ ಸಂಸದೆ ಸುಮಲತಾ ಅವರನ್ನು ಬೂಕಹಳ್ಳಿ ಮಂಜು ಭೇಟಿಯಾಗಿ ಅಭಿನಂದಿಸಿದರು. ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚಿಸಿದರು. ವಿಧಾನ ಪರಿಷತ್‌ ಚುನಾವಣೆಯ ಪ್ರಸ್ತುತ ಪರಿಸ್ಥಿತಿ, ಬಿಜೆಪಿ ಪರವಾದ ಅಲೆ, ಸರಕಾರ ಕಾರ‍್ಯಕ್ರಮಗಳ ಬಗ್ಗೆ ಸಮಾಲೋಚಿಸಿದರು.

ವಿಧಾನ ಪರಿಷತ್‌ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಪರವಾದ ಅಲೆ ಇದೆ. ತಾವು ಹಾಗೂ ತಮ್ಮ ಬೆಂಬಲಿಗರು ಮೂರ್ನಾಲ್ಕು ಬಾರಿ ಪ್ರವಾಸ ಕೈಗೊಂಡು ಮತದಾರರನ್ನು ಮುಖಾಮುಖಿ ಭೇಟಿಯಾಗಿದ್ದೇವೆ. ಅವರ ಕಷ್ಟಸುಖಗಳನ್ನು ಆಲಿಸಿದ್ದೇವೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರವಿರುವುದರಿಂದ ಸರಕಾರದ ಕಾರ‍್ಯಕ್ರಮಗಳು ಚುನಾವಣೆಯಲ್ಲಿ ತಮಗೆ ಸಹಕಾರಿಯಾಗಲಿವೆ. ಹೀಗಾಗಿ ತಾವು ಹಾಗೂ ತಮ್ಮ ಬೆಂಬಲಿಗರು ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಬೇಕೆಂದು ಕೋರಿದರು.

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ನಾಮಪತ್ರ ಸಲ್ಲಿಕೆ!

ಈ ವೇಳೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಅವರು ಜಿಲ್ಲೆಯಲ್ಲಿ ಬಿಜೆಪಿ ಪರವಾದ ಅಂಶಗಳ ಬಗ್ಗೆ ಪ್ರಸ್ತಾಪಿಸಿದರು. ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದೆ ಸುಮಲತಾ ಅಂಬರೀಶ್‌, ಪ್ರಸ್ತುತ ನಾನು ತಟಸ್ಥ ನಿಲುವು ಘೋಷಿಸಿದ್ದೇನೆ. ಕಾರ‍್ಯಕರ್ತರು, ಅಭಿಮಾನಿಗಳೊಂದಿಗೆ ಸಮಾಲೋಚಿಸಿ ಮುಂದಿನ ತೀರ್ಮಾನ ಪ್ರಕಟಿಸುತ್ತೇನೆ. ನಿಮಗೆ ಶುಭವಾಗಲಿ ಎಂದು ಹಾರೈಸಿದರು. ಬಿಜೆಪಿ ರಾಜ್ಯ ಕಾರ‍್ಯಕಾರಿ ಸಮಿತಿ ಸದಸ್ಯ ಡಾ.ಸಿದ್ದರಾಮಯ್ಯ ಹಾಜರಿದ್ದರು.

ಪರಿಷತ್‌ ಚುನಾವಣೆ: ಹಾಸನದಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ!

ಸುರಾನ ಭೇಟಿ
ಸಂಸದೆ ಸುಮಲತಾ ಅಂಬರೀಶ್‌ ಅವರ ಭೇಟಿ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ಕುಮಾರ್‌ ಸುರಾನ ಅವರನ್ನು ಬೂಕಹಳ್ಳಿ ಮಂಜು ಅವರು ಭೇಟಿ ಮಾಡಿದರು. ಜತೆಗೆ, ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ವಿದ್ಯೆ ಕಲಿಸಿದ ಗುರುಗಳಾದ ಡಾ. ಎಚ್‌.ಆರ್‌. ತಿಮ್ಮೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ವೇಳೆ ಪ್ರೀತಿಯ ಶಿಷ್ಯ ಬೂಕಹಳ್ಳಿ ಮಂಜು ಅವರಿಗೆ ಆಶೀರ್ವಾದ ಮಾಡಿ ಗೆದ್ದು ಬಾ ಎಂದು ಡಾ.ತಿಮ್ಮೇಗೌಡರು ಹರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕಾಡೇನಹಳ್ಳಿ ನಾಗಣ್ಣಗೌಡ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ