ಆ್ಯಪ್ನಗರ

ಮಂಡ್ಯದಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಮಂಡ್ಯದಲ್ಲಿ ನಾಳೆ ಮತ್ತು ನಾಳಿದ್ದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ವಿಕ ಸುದ್ದಿಲೋಕ 6 Sep 2016, 3:20 pm
ಮಂಡ್ಯ: ಕಾವೇರಿಗಾಗಿ ಪ್ರತಿಭಟನೆಯ ಕಾವು ತೀವ್ರಗೊಂಡಿದ್ದು, ನಾಳೆ ಮತ್ತು ನಾಳಿದ್ದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಮಂಡ್ಯದಲ್ಲಿ ಸುರಿಯುತ್ತಿರುವ ಮಳೆಯ ಮಧ್ಯೆ ಪ್ರತಿಭಟನೆ ಮುಂದುವರಿದಿದೆ.
Vijaya Karnataka Web cauvery protest declare holiday schools
ಮಂಡ್ಯದಲ್ಲಿ ಶಾಲಾ ಕಾಲೇಜುಗಳಿಗೆ ರಜೆ


ಪ್ರವಾಸಿಗರ ಹಿತದೃಷ್ಟಿಯಿಂದ ಸೆ.9ರವರೆಗೆ ಕೆಆರ್ ಎಸ್ ಹಾಗೂ ಬೃಂದಾವನ ಗಾರ್ಡನ್‌ಗೆ ಪ್ರವಾಸಿಗರ ಪ್ರವೇಶ
ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ಹೇಳಿದ್ದಾರೆ. ಪರಿಸ್ಥಿತಿ ಅವಲೋಕಿಸಿ ಕೆಸ್ಸಾರ್ಟಿಸಿ ಬಸ್‌ಗಳ ಸಂಚಾರ ಆರಂಭಿಸಲು ತೀರ್ಮಾನಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಭೂತನ ಹೊಸೂರು ಗ್ರಾಮದಲ್ಲಿ ರಸ್ತೆ ತಡೆ ನಡೆಸಿರುವ ಪ್ರತಿಭಟನಾಕಾರರು ಟೈರ್ ಗಳಿಗೆ ಬೆಂಕಿ ಹಚ್ಚಿ ರಸ್ತೆಯಲ್ಲೇ ಮರದ ದಿಮ್ಮಿಗಳನ್ನಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯ-ಕೆ.ಎಂ.ದೊಡ್ಡಿ ಹೆದ್ದಾರಿ ಬಂದ್ ಬಂದ್‌ಗೊಳಿಸಿದ್ದು, ವಕೀಲ ನಾರಿಮನ್ ಭಾವಚಿತ್ರಕ್ಕೆ ಮಸಿ ಎರಚಿ ಚಪ್ಪಲಿಯೇಟು ನೀಡಿದ್ದಾರೆ. ಮಂಡ್ಯ ಯೂತ್ ಗ್ರೂಪ್ನ್ಯಾಯ ದೇವತೆಯ ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿ ಆಗಿರುವ ಅನ್ಯಾಯಕ್ಕೆ ವಿನೂತನ ಪ್ರತಿಭಟನೆ ತೋರಿದ್ದು, ಮಂಡ್ಯ ನಗರದ ನಾನಾ ಕಡೆ ಪ್ರತಿಭಟನಾ ಮೆರವಣಿಗೆ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ