ಆ್ಯಪ್ನಗರ

ಬಾಲಕಾರ್ಮಿಕ ಪದ್ಧತಿ ಆಚರಣೆ: ದಂಡ

ಪಟ್ಟಣದ ಅಂಗಡಿಯಲ್ಲಿ ಅಪ್ರಾಪ್ತ ಬಾಲಕನನ್ನು ಕೆಲಸಕ್ಕೆ ಇರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ಜೆಎಂಎಫ್‌ಸಿ ಸಿವಿಲ್‌ ನ್ಯಾಯಾಲಯ ಅಪರಾಧಿಗೆ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

Vijaya Karnataka 24 Jan 2019, 5:00 am
ಪಾಂಡವಪುರ : ಪಟ್ಟಣದ ಅಂಗಡಿಯಲ್ಲಿ ಅಪ್ರಾಪ್ತ ಬಾಲಕನನ್ನು ಕೆಲಸಕ್ಕೆ ಇರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ಜೆಎಂಎಫ್‌ಸಿ ಸಿವಿಲ್‌ ನ್ಯಾಯಾಲಯ ಅಪರಾಧಿಗೆ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
Vijaya Karnataka Web child labor fined
ಬಾಲಕಾರ್ಮಿಕ ಪದ್ಧತಿ ಆಚರಣೆ: ದಂಡ


ಪಟ್ಟಣದ ಅರವಿಂದ್‌ ಭಂಡಾರ ಜನರಲ್‌ ಸ್ಟೋರ್‌ ಅಂಗಡಿ ಮಾಲೀಕ ಎನ್‌.ಮೂರ್ತಿ ಎಂಬುವರಿಗೆ ನ್ಯಾಯಾಲಯ ದಂಡ ವಿಧಿಸಿದೆ. 2005 ಆ. 25 ರಂದು ಪಾಂಡವಪುರ ಪಟ್ಟಣದ ಬಾಲ ಕಾರ್ಮಿಕ ವಿಶೇಷ ತನಿಖಾ ತಂಡದ ಸದಸ್ಯರು ಈ ಅಂಗಡಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅಂಗಡಿ ಮಾಲೀಕರು 13 ವರ್ಷದ ಬಾಲಕನನ್ನು ಕೆಲಸಕ್ಕೆ ಇರಿಸಿಕೊಂಡು ದುಡಿಸಿಕೊಳ್ಳುತ್ತಿದ್ದುದು ಕಂಡು ಬಂತು. ತಂಡದ ಸದಸ್ಯರು ಬಾಲಕನನ್ನು ರಕ್ಷಿಸಿ, ಅಂಗಡಿ ಮಾಲೀಕನ ವಿರುದ್ಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಪಾಂಡವಪುರದ ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಬಿ.ಕೆ.ರವಿಕಾಂತ್‌ ಅವರು, ಅಂಗಡಿ ಮಾಲೀಕ ಅಪ್ರಾಪ್ತ ಬಾಲಕನನ್ನು ಕೆಲಸಕ್ಕೆ ನೇಮಿಸಿಕೊಂಡು ಕೆಲಸ ಮಾಡಿಸಿಕೊಳ್ಳುತ್ತಿದ್ದುದು ಸಾಕ್ಷ್ಯಾಧಾರಗಳಿಂದ ರುಜುವಾತಾದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರಿಗೆ 10 ಸಾವಿರ ದಂಡ ವಿಧಿಸಿದರು. ದಂಡ ಪಾವತಿಸಲು ತಪ್ಪಿದ್ದಲ್ಲಿ 6 ತಿಂಗಳು ಜೈಲು ಶಿಕ್ಷೆ ಅನುಭವಿಸುವಂತೆ ಜ.23ರಂದು ಆದೇಶಿಸಿದರು. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಎಸ್‌.ಶಿವಕುಮಾರ್‌ ವಾದ ಮಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ