ಆ್ಯಪ್ನಗರ

ನೆರೆ ಸಂತ್ರಸ್ತರ ವಿಚಾರದಲ್ಲಿಕಾಂಗ್ರೆಸ್‌ ರಾಜಕಾರಣ: ಸುರೇಶ್‌ ಅಂಗಡಿ

ನೆರೆ ಸಂತ್ರಸ್ತರ ವಿಚಾರದಲ್ಲಿಕಾಂಗ್ರೆಸ್‌ ರಾಜಕಾರಣ ಮಾಡುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

Vijaya Karnataka 30 Sep 2019, 5:00 am
ಶ್ರೀರಂಗಪಟ್ಟಣ: ನೆರೆ ಸಂತ್ರಸ್ತರ ವಿಚಾರದಲ್ಲಿಕಾಂಗ್ರೆಸ್‌ ರಾಜಕಾರಣ ಮಾಡುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.
Vijaya Karnataka Web MDY29SRP6_17


ಪಟ್ಟಣ ಹೊರವಲಯದ ಚಂದ್ರವನ ಆಶ್ರಮದಲ್ಲಿನಡೆಯುತ್ತಿರುವ ನವರಾತ್ರಿ ಉತ್ಸವಕ್ಕೆ ಆಗಮಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ''ದೇಶದಲ್ಲಿ16 ರಾಜ್ಯಗಳಲ್ಲಿನೆರೆ ಹಾವಳಿ ಸಂಭವಿಸಿದೆ. ಕಾಂಗ್ರೆಸ್‌ ಸರಕಾರ ಅಧಿಕಾರದಲ್ಲಿಇದ್ದಾಗ ನೆರೆ ಹಾವಳಿ ಸಂತ್ರಸ್ತರಿಗೆ ಈ ಹಿಂದೆ ಕೇವಲ 200 ರೂ. ಪರಿಹಾರ ಕೊಡುತ್ತಿದ್ದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೆರೆ ಸಂತ್ರಸ್ತರಿಗೆ 10 ಸಾವಿರ ರೂ. ನೀಡುತ್ತಿದ್ದಾರೆ. ಸಂಪೂರ್ಣವಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಕೊಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿನಮ್ಮದೇ ಸರಕಾರ ಇದೆ. ಜಿಲ್ಲಾಧಿಕಾರಿಗಳ ಬಳಿ ಎನ್‌ಡಿಆರ್‌ಎಫ್‌ ಹಣ ಇದೆ. ರಾಜ್ಯ ಸರಕಾರದಲ್ಲಿಯೂ ಹಣ ಇದೆ. ನೆರೆ ಸಂತ್ರಸ್ತರ ನಿಧಿಯಿಂದ ಈಗಾಗಲೇ ಪರಿಹಾರ ನೀಡಲಾಗಿದೆ'' ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ನೆರೆ ಸಂತ್ರಸ್ತರಿಗೆ ನಯಾಪೈಸೆ ನೀಡಿಲ್ಲಎಂದು ದೂರಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ''ಸರಕಾರ ಟೀಕಿಸುವ ಉದ್ದೇಶದಿಂದ ಕಾಂಗ್ರೆಸ್‌ ಸುಳ್ಳು ಆರೋಪ ಮಾಡುತ್ತಿದೆ. ಪತ್ರಿಕೆಗಳಲ್ಲಿಯೂ ತಪ್ಪು ಸುದ್ದಿ ಬಿತ್ತರವಾಗುತ್ತಿದೆ'' ಎಂದು ರಾಜ್ಯ ಸರಕಾರದ ಕ್ರಮ ಸಮರ್ಥಿಸಿಕೊಂಡರು. ಬಿಜೆಪಿ ಹೈಕಮಾಂಡ್‌, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟ್ಟಿ ಹಾಕಲು ಪ್ರಯತ್ನಿಸುತ್ತಿದೆಯಂತಲ್ಲಾಎಂಬ ಪ್ರಶ್ನೆಗೆ ''ರೈಲ್ವೆ ಬಗ್ಗೆ ಮಾತ್ರ ಪ್ರಶ್ನೆ ಕೇಳಿ'' ಎಂದರು.

ಇದೇ ವೇಳೆ ಶ್ರೀರಂಗಪಟ್ಟಣದಲ್ಲಿತೂತುಕುಡಿ, ಬಸವ ರೈಲುಗಳು ನಿಲುಗಡೆಯಾಗುವಂತೆ ಸೂಚಿಸಬೇಕು. ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಟಿ.ಶ್ರೀಧರ್‌, ಮುಖಂಡ ಕೆ.ಎಸ್‌.ನಂಜುಂಡೇಗೌಡ, ಉಮಾಶಂಕರ್‌, ಉಮೇಶ್‌ಕುಮಾರ್‌ ಇತರರು ಮನವಿ ಸಲ್ಲಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ