ಆ್ಯಪ್ನಗರ

8ನೇ ದಿನವೂ ಮುಂದುವರೆದ ಪ್ರತಿಭಟನೆ

ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಿ ವಿಸಿ ನಾಲೆಗಳ ವ್ಯಾಪ್ತಿಯ ಕೆರೆಕಟ್ಟೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ‌್ಯಕರ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿ 8ನೇ ದಿನಕ್ಕೆ ಕಾಲಿಟ್ಟಿದೆ.

ವಿಕ ಸುದ್ದಿಲೋಕ 15 Jul 2017, 5:15 am
ಮದ್ದೂರು: ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಿ ವಿಸಿ ನಾಲೆಗಳ ವ್ಯಾಪ್ತಿಯ ಕೆರೆಕಟ್ಟೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ‌್ಯಕರ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿ 8ನೇ ದಿನಕ್ಕೆ ಕಾಲಿಟ್ಟಿದೆ.
Vijaya Karnataka Web continuous protests on 8th day
8ನೇ ದಿನವೂ ಮುಂದುವರೆದ ಪ್ರತಿಭಟನೆ


ಎಪಿಎಂಸಿ ಎಳನೀರು ಮಾರುಕಟ್ಟೆ ವರ್ತಕರು ಹಾಗೂ ಹಮಾಲಿಗಳು ತಮ್ಮ ವಹಿವಾಟು ಸ್ಥಗಿತಗೊಳಿಸಿದರಲ್ಲದೇ ನೀರಾವರಿ ಸಚಿವ ಎಂ.ಬಿ. ಪಾಟೀಲ್ ಅವರ ಪ್ರತಿಕತಿಯ ಶವಯಾತ್ರೆ ಮಾಡುವ ಮೂಲಕ ಧರಣಿ ಬೆಂಬಲ ಸೂಚಿಸಿದರು.

ಮದ್ದೂರು ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಿಂದ ಬೈಕ್ ರ‌್ಯಾಲಿ ನಡೆಸಿ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಮದ್ದೂರಮ್ಮ ಕೆರೆಯಂಗಳದಲ್ಲಿ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿ, ತಮಿಳುನಾಡಿಗೆ ನೀರು ನಿಲ್ಲಿಸಿ ವಿಸಿ ನಾಲೆಗೆ ಹರಿಸುವಂತೆ ಒತ್ತಾಯಿಸಿದರು.

ವರ್ತಕರ ಸಂಘದ ಅಧ್ಯಕ್ಷ ರವಿಚನ್ನಸಂದ್ರ ಮಾತನಾಡಿ, ಜಿಲ್ಲೆಯ ರೈತರು ಮಳೆ ಬೆಳೆ ಇಲ್ಲದೆ ಆತ್ಮಹತ್ಯೆಗೆ ಮುಂದಾಗುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬಗ್ಗೆ ಕಾಳಜಿಯಿಲ್ಲದೆ ತಮಿಳುನಾಡಿನ ರೈತರ ಹಿತರಕ್ಷಣೆಗೆ ಮುಂದಾಗಿರುವ ರಾಜ್ಯ ಸರಕಾರದ ಕ್ರಮ ಸರಿಯಲ್ಲ ಎಂದರು.

ಇದೇ ವೇಳೆ ನೀರಾವರಿ ಸಚಿವ ಎಂ.ಬಿ.ಪಾಟೀಲ್ ಅವರ ಪ್ರತಿಕತಿಯ ಶವಯಾತ್ರೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿ ನೀರು ಬಿಡುವವರೆಗೂ ಪಾಟೀಲ್ ಶವಕ್ಕೆ ಸ್ನಾನಮಾಡಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.

ಶಾಸಕ ಭೇಟಿ : ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಭೇಟಿ ನೀಡಿ ಬೆಂಬಲ ಸೂಚಿಸಿ ಮಾತನಾಡಿ ಮಳೆಯ ಅಭಾವದಿಂದಾಗಿ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ತಗ್ಗಿರುವ ಕಾರಣ ನಾಲೆಗಳಿಗೆ ನೀರು ಹರಿಸುವುದು ಕಷ್ಟಕರವಾಗಿದ್ದು ಪ್ರತಿಭಟನೆಯನ್ನು ಹಿಂಪಡೆಯುವಂತೆ ಮನವಿ ಮಾಡಿದರು.

ವರ್ತಕರ ಸಂಘದ ಉಪಾಧ್ಯಕ್ಷ ಉಮೇಶ್, ಕಾರ್ಯದರ್ಶಿ ಎ. ರಾಜು, ಖಜಾಂಚಿ ಕೆ. ಕೆಂಪಿರಯ್ಯ, ನಿರ್ದೇಶಕರಾದ ಕುದರಗುಂಡಿ ಶಿವಣ್ಣ, ಮಹೇಶ್, ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ, ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ವೇದಿಕೆ ಪದಾಧಿಕಾರಿಗಳಾದ ಮಹೇಶ್, ಚೆನ್ನಪ್ಪ, ವಿನಯ್ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ