ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ರೈತ ಆತ್ಮಹತ್ಯೆ ವಿಕ ಸುದ್ದಿಲೋಕ ಮಳವಳ್ಳಿ (ಮಂಡ್ಯ ಜಿಲ್ಲೆ) ಸಾಲಬಾಧೆ ತಾಳಲಾರದೆ ತಳಗವಾದಿ ಗ್ರಾಮದಲ್ಲಿ ರೈತರೊಬ್ಬರು ನೇಣಿಗೆ ಶರಣಾಗಿದ್ದಾರೆ ಗ್ರಾಮದ ಹನುಮೇಗೌಡ(60) ಮೃತರು...

Vijaya Karnataka 5 Jan 2019, 5:00 am
ಮಳವಳ್ಳಿ (ಮಂಡ್ಯ ಜಿಲ್ಲೆ): ಸಾಲಬಾಧೆ ತಾಳಲಾರದೆ ತಳಗವಾದಿ ಗ್ರಾಮದಲ್ಲಿ ರೈತರೊಬ್ಬರು ನೇಣಿಗೆ ಶರಣಾಗಿದ್ದಾರೆ.
Vijaya Karnataka Web debt farmer suicide in malavalli taluk
ಸಾಲಬಾಧೆ: ರೈತ ಆತ್ಮಹತ್ಯೆ


ಗ್ರಾಮದ ಹನುಮೇಗೌಡ(60) ಮೃತರು. ಗ್ರಾಮದ ಹೊರವಲಯದ ಸಂಬಂಧಿಕರ ಜಮೀನಿನ ಬಳಿ ಮರಕ್ಕೆ ನೇಣು ಹಾಕಿಕೊಂಡು ಶುಕ್ರವಾರ ಮೃತಪಟ್ಟಿದ್ದಾರೆ.

''35 ಗುಂಟೆ ಜಮೀನಿದ್ದು, 2 ಎಕರೆ ಜಮೀನನ್ನು ಗುತ್ತಿಗೆಗೆ ತೆಗೆದುಕೊಂಡು ವ್ಯವಸಾಯ ಮಾಡುತ್ತಿದ್ದರು. ತಳಗವಾದಿ ಬ್ಯಾಂಕ್‌ನಲ್ಲಿ 50 ಸಾವಿರ ರೂ, ತಳಗವಾದಿ ಪ್ರಾಥಮಿಕ ಸಹಕಾರ ಸಂಘದಲ್ಲಿ 1 ಲಕ್ಷ ಹಾಗೂ 3 ಲಕ್ಷ ರೂ. ಕೈ ಸಾಲ ಮಾಡಿದ್ದರು. ಸಾಲ ಮರುಪಾವತಿಸಲು ಸಾಧ್ಯವಾಗದೇ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ,'' ಎಂದು ಮೃತರ ಪತ್ನಿ ಜಯಮ್ಮ ಮಳವಳ್ಳಿ ಗ್ರಾಮಾಂತರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮಳವಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ