ಆ್ಯಪ್ನಗರ

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್‌: ಡಿಸಿ ಸಭೆ

ಕೆಆರ್‌ಎಸ್‌ ಉದ್ಯಾನದಲ್ಲಿ ಡಿಸ್ನಿಲ್ಯಾಂಡ್‌ ಮಾದರಿ ನಿರ್ಮಾಣ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

Vijaya Karnataka 16 Nov 2018, 5:00 am
ಮಂಡ್ಯ: ಕೆಆರ್‌ಎಸ್‌ ಉದ್ಯಾನದಲ್ಲಿ ಡಿಸ್ನಿಲ್ಯಾಂಡ್‌ ಮಾದರಿ ನಿರ್ಮಾಣ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
Vijaya Karnataka Web disneyland at the krs dc meeting
ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್‌: ಡಿಸಿ ಸಭೆ


ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂದಾಯ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಜಲಾಶಯ ವ್ಯಾಪ್ತಿಯಲ್ಲಿ ಸರಕಾರಿ ಮತ್ತು ಖಾಸಗಿಯವರಿಗೆ ಸೇರಿದ ಜಾಗ, ಒತ್ತುವರಿ ಮಾಡಿಕೊಂಡಿರುವ ಸ್ಥಳ ಮತ್ತು ಯೋಜನೆ ಅಭಿವೃದ್ಧಿ ಕುರಿತು ನೀಲನಕ್ಷೆ ತಯಾರಿ ಕುರಿತು ಚರ್ಚೆ ನಡೆಸಲಾಯಿತು.

ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ, ''ಯೋಜನೆಗೆ ಬೇಕಾದ ಸ್ಥಳಾವಕಾಶದ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಕೂಡಲೇ ಪರಿಶೀಲನೆ ನಡೆಸಿ ಸರಕಾರಕ್ಕೆ ಸೇರಿದ ಜಾಗವನ್ನು ಗುರುತು ಮಾಡಿ. ಒತ್ತುವರಿಯಾಗಿದ್ದರೆ ಅದನ್ನು ತೆರವುಗೊಳಿಸುವ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ'' ಅಧಿಕಾರಿಗಳಿಗೆ ಸೂಚಿಸಿದರು.

ಕಾವೇರಿ ನಿಗಮ ಕಾರ‍್ಯಪಾಲಕ ಎಂಜಿನಿಯರ್‌ ಬಸವರಾಜೇಗೌಡ ಕೆಆರ್‌ಎಸ್‌ ವಿಸ್ತೀರ್ಣದ ಕುರಿತು ನಕ್ಷೆಯೊಂದಿಗೆ ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್‌, ಪಾಂಡವಪುರ ತಹಸೀಲ್ದಾರ್‌ ಹನುಮಂತರಾಯಪ್ಪ, ಶ್ರೀರಂಗಪಟ್ಟಣ ತಹಸೀಲ್ದಾರ್‌ ನಾಗೇಶ್‌ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ