ಆ್ಯಪ್ನಗರ

ಮಾದಕ ವ್ಯಸನದ ನಂಟು ಆತಂಕಕಾರಿ

ಪ್ರಸ್ತುತ ದಿನಗಳಲ್ಲಿ ಯುವ ಸಮುದಾಯ ಮಾದಕ ವ್ಯಸನಕ್ಕೆ ಜೋತು ಬೀಳುತ್ತಿರುವುದು ಆತಂಕಕಾರಿ ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶ ಪಿ.ಎಂ. ಬಾಲಸುಬ್ರಮಣಿ ತಿಳಿಸಿದರು.

Vijaya Karnataka 29 Jul 2018, 5:00 am
ಮದ್ದೂರು: ಪ್ರಸ್ತುತ ದಿನಗಳಲ್ಲಿ ಯುವ ಸಮುದಾಯ ಮಾದಕ ವ್ಯಸನಕ್ಕೆ ಜೋತು ಬೀಳುತ್ತಿರುವುದು ಆತಂಕಕಾರಿ ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶ ಪಿ.ಎಂ. ಬಾಲಸುಬ್ರಮಣಿ ತಿಳಿಸಿದರು.
Vijaya Karnataka Web drugs are very dangerous
ಮಾದಕ ವ್ಯಸನದ ನಂಟು ಆತಂಕಕಾರಿ


ಶಿವಪುರದ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆಯ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ವಿದ್ಯಾಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿದ್ದ 'ಮಾದಕ ವಸ್ತುಗಳ ನಿರ್ಮೂಲನೆ ಮತ್ತು ಮಕ್ಕಳ ಕಳ್ಳಸಾಗಣಿಕೆ ಜಾಗೃತಿ' ಬಗ್ಗೆ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮದ್ಯಪಾನ, ಗುಟ್ಕಾ ಹಾಗೂ ಇನ್ನಿತರ ಸೇವನೆಯಿಂದಾಗಿ ಯುವ ಸಮುದಾಯ ಅನೇಕ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಆತಂಕದ ವಿಚಾರವೆಂದ ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕಾದ ಯುವಜನತೆ ಇಂತಹ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆಂದು ವಿಷಾದನೀಯ ಎಂದರು.

ಭಿಕ್ಷೆ ಬೇಡಿಸುವುದು, ಚಿಕ್ಕ ವಯಸ್ಸಿನ ಮಕ್ಕಳನ್ನು ಹೊರ ದೇಶಕ್ಕೆ ಸಾಗಣೆ ಮಾಡುವುದು ಮತ್ತು ಹಣ ಗಳಿಸಲು ಮಕ್ಕಳನ್ನು ಬಳಸಿಕೊಳ್ಳುವುದು ಕಾನೂನು ರೀತಿಯ ಅಪರಾಧವಾಗಿದ್ದು ಇಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳುವ ವ್ಯಕ್ತಿಗಳಿಗೆ 10 ವರ್ಷ ಸಜೆ ಅಥವಾ ಜೀವಾವಧಿ ಶಿಕ್ಷೆಯನ್ನು ವಿಧಿಸಬಹುದಾಗಿದೆ ಎಂದರು.

ಇಂದಿನ ವಿದ್ಯಾರ್ಥಿಗಳು ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕಾಗಿದೆ ಎಂದ ಅವರು ತಮ್ಮ ಆರೋಗ್ಯವನ್ನು ಅನಾರೋಗ್ಯದತ್ತ ಕೊಂಡೋಯ್ಯುತ್ತಿರುವ ಇಂತಹ ಮಾದಕ ವಸ್ತುಗಳಿಂದ ದೂರವಿಡುವಂತೆ ಕಿವಿಮಾತು ಹೇಳಿದರು.

ಒಂದನೇ ಅಪರ ಸಿವಿಲ್‌ ನ್ಯಾಯಾಧೀಶ ಕೆ.ಎನ್‌. ಶಿವಕುಮಾರ್‌ ಮಾತನಾಡಿ ಎಲ್ಲಾ ವರ್ಗದ ಜನರಿಗೆ ಉಚಿತವಾಗಿ ನ್ಯಾಯ ದೊರಕಿಸಿಕೊಡುವುದು ಕಾನೂನು ಸೇವಾ ಸಮಿತಿಯ ಉದ್ದೇಶವಾಗಿದ್ದು ಸಮಾನತೆ ಹಾಗೂ ಹಕ್ಕುಗಳನ್ನು ಪಡೆಯಲು ಪ್ರತಿಯೊಬ್ಬರಿಗೂ ಹಕ್ಕಿದ್ದು ಸಮಾಜದಲ್ಲಿ ಆರೋಗ್ಯಕರವಾದ ವಾತಾವರಣ ನಿರ್ಮಾಣ ಮಾಡಲು ಕಾನೂನು ಅತ್ಯವಶ್ಯಕವೆಂದರು.

ಕಾನೂನು ಸಲಹೆಗಾರ ಎಂ. ಮಹೇಶ್‌ ಅವರು ಮಾದಕ ವಸ್ತುಗಳ ನಿರ್ಮೂಲನೆ ಮತ್ತು ಮಕ್ಕಳ ಕಳ್ಳ ಸಾಗಣಿಕೆ ಜಾಗೃತಿ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ವೇಳೆ ವಕೀಲರ ಸಂಘದ ಅಧ್ಯಕ್ಷ ಜಿ.ಎನ್‌. ಸತ್ಯ, ಕಾರ್ಯದರ್ಶಿ ಎ. ಶಿವಣ್ಣ, ವಿದ್ಯಾಸಂಸ್ಥೆ ಅಧ್ಯಕ್ಷೆ ಪಿ. ಕಸ್ತೂರಿ, ಮುಖ್ಯಶಿಕ್ಷ ಕ ಎಚ್‌.ಆರ್‌. ಅನಂತೇಗೌಡ ಸೇರಿದಂತೆ ಶಿಕ್ಷ ಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ