ಆ್ಯಪ್ನಗರ

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ: ಸಾವಿಗೂ ಮುನ್ನ ಸಿಎಂಗೆ ಬರೆದ ಪತ್ರದಲ್ಲಿ ಏನಿದೆ?

ಸಾಲಭಾದೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದಲ್ಲಿ ನಡೆದಿದೆ.

Vijaya Karnataka Web 22 Sep 2018, 6:53 pm
ಮಂಡ್ಯ: ಸಾಲಭಾದೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದಲ್ಲಿ ನಡೆದಿದೆ.
Vijaya Karnataka Web sui


ನಂದೀಶ್(40), ಕೋಮಲ(32) ಪುತ್ರಿ ಚಂದನಾ(13) ಹಾಗೂ ಪುತ್ರ ಮನೋಜ್(11) ಮೃತ ದುರ್ದೈವಿಗಳು. ಸಾಲಬಾಧೆಯಿಂದ ತತ್ತರಿಸಿರುವ ಕುಟುಂಬ, ತಮ್ಮ ಜಮೀನಿನ ಬಳಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ನಂದೀಶ್ ಅವರ ತಂದೆ ಕೆಂಪೇಗೌಡ ಹೆಸರಿನಲ್ಲಿ ಸುಮಾರು 3 ಎಕರೆ ಜಮೀನು ಇದೆ. ನಂದೀಶ್ ಕೆಂಪೇಗೌಡರ ಏಕೈಕ ಪುತ್ರನಾಗಿದ್ದ ಕಾರಣ ಜಮೀನಿನ ಎಲ್ಲಾ ಜವಾಬ್ದಾರಿಯನ್ನು ತಾನೇ ವಹಿಸಿಕೊಂಡಿದ್ದು, ಬೇಸಾಯ ಮಾಡಲು ಸುಮಾರು 10 ಲಕ್ಷ ರೂಪಾಯಿ ಸಾಲ ಮಾಡಿದ್ದರು ಎಂದು ಹೇಳಲಾಗುತ್ತಿದೆ.

ಸುಂಕಾತೊಣ್ಣೂರು ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ 4.50 ಲಕ್ಷ ರೂಪಾಯಿ ಬೆಳೆಸಾಲ, ಸುಮಾರು 6 ಲಕ್ಷ ರೂಪಾಯಿ ಕೈಸಾಲ ಹಾಗೂ ಚಿಕ್ಕಾಡೆ ವಿಜಯ ಬ್ಯಾಂಕ್ ನಲ್ಲಿ ಚಿನ್ನಾಭರಣ ಅಡಮಾನವಿಟ್ಟು ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ.


ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಸಹ ಎರಡು ಬಾರಿ ಮನವಿ ಮಾಡಿದ್ದರು ಎನ್ನಲಾಗಿದೆ.
ಇತ್ತೇಚೆಗೆ ಸಾಲಗಾರರ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ನೆನ್ನೆ ರಾತ್ರಿ ಕುಟುಂಬ ಮಕ್ಕಳ ಸಮೇತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲಗಾರರಿಂದ ಮುಕ್ತಿ ಕೊಡಿಸಿ ಎಂದು ನಂದೀಶ್, ರಾಜ್ಯ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಲ್ಲಿ ಎರಡು ಬಾರಿ ಮನವಿ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ಇತ್ತೇಚೆಗೆ ಸಾಲಗಾರರ ಒತ್ತಡ ಹೆಚ್ಚಾದ ಕಾರಣ ಶುಕ್ರವಾರ ರಾತ್ರಿ ಕುಟುಂಬ ಸಮೇತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಒಂದೇ ಕುಟುಂಬದ ನಾಲ್ವರ ಸಾವಿಗೆ ಸಿಎಂ ವಿಷಾದ

ಮಂಡ್ಯದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಶಾಸಕ ಪುಟ್ಟರಾಜು ಅವರ ಬಳಿ ಮಾಹಿತಿ ಪಡೆದಿದ್ದೇನೆ. ಅವರು ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ರೀತಿಯ ಕಠಿಣ ನಿರ್ಧಾರ ಕೈಗೊಳ್ಳಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

'ನಂದೀಶ್ ಕುಟುಂಬಸ್ಥರು ಒಮ್ಮೆ ನನ್ನ ಬಳಿ ಬಂದು ಸಮಸ್ಯೆ ಹೇಳಿಕೊಂಡಿದ್ದರು. ಈಗ ತಾನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದೇನೆ.ಏನೇ ಸಮಸ್ಯೆ ಇದ್ದರೂ, ಬಗೆಹರಿಸುತ್ತೇನೆ ಸ್ವಲ್ಪ ಸಮಯ ಕೊಡಿ ಎಂದು ಹೇಳಿ ಕಳಿಸಿದ್ದೆ. ಆದರೆ, ಅವರು ತುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನು ರಾಜ್ಯದ ಆರುವರೆ ಕೋಟಿ ಜನರ ಸಮಸ್ಯೆಯನ್ನು ನೀಗಿಸುವ ಶಕ್ತಿ ಕೊಡು ಎಂದು ಶಾರದಾಂಬೆಯ ಬಳಿ ಕೇಳಿಕೊಂಡಿದ್ದೇನೆ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಈ ರೀತಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ದಯವಿಟ್ಟು ನನ್ನ ಮನಸ್ಸಿಗೆ ನೋವು ಮಾಡಬೇಡಿ.
ಸಿಎಂ ಕುಮಾರಸ್ವಾಮಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ