ಆ್ಯಪ್ನಗರ

ಸಾಲ ಬಾಧೆ: ಮಂಡ್ಯದಲ್ಲಿ ಡೆತ್ ನೋಟ್ ಬರೆದಿಟ್ಟು ರೈತ ಆತ್ಮಹತ್ಯೆ

ಆತ್ಮಹತ್ಯೆಗೂ ಮುನ್ನ ಸಾಲಬಾಧೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ನನ್ನ ಸಾವಿಗೆ ಯಾರು ಕಾರಣರಲ್ಲ ಎಂದು ಡೆತ್‌ನೋಟ್‌ ಬರೆದಿಟ್ಟಿದ್ದಾರೆ.

Vijaya Karnataka 11 Mar 2019, 10:39 pm
ಶ್ರೀ ರಂಗಪಟ್ಟಣ: ತಾಲೂಕಿನ ಕಡತನಾಳು ಗ್ರಾಮದಲ್ಲಿ ಸಾಲಬಾಧೆಗೆ ಡೆತ್‌ನೋಟ್‌ ಬರೆದಿಟ್ಟು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web suicide


ಗ್ರಾಮದ ಶಂಕರೇಗೌಡ(50) ಆತ್ಮಹತ್ಯೆಮಾಡಿಕೊಂಡವರು.

ಶಂಕರೇಗೌಡ ಸುಮಾರು ಎರಡೂವರೆ ಎಕರೆ ನೀರಾವರಿ ಜಮೀನು ಹೊಂದಿದ್ದು ಕಬ್ಬು, ಭತ್ತ ಬೆಳೆಯುತ್ತಿದ್ದರು. ಇವರಿಗೆ ಸುಮಾರು 5 ಲಕ್ಷ ಸಾಲ ಇತ್ತು ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಸಾಲಬಾಧೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ನನ್ನ ಸಾವಿಗೆ ಯಾರು ಕಾರಣರಲ್ಲ ಎಂದು ಡೆತ್‌ನೋಟ್‌ ಬರೆದಿಟ್ಟಿದ್ದಾರೆ.

ಈ ಸಂಬಂಧ ಮೃತ ರೈತನ ಪತ್ನಿ ಪುಷ್ಪಲತಾ ಪೊಲೀಸರಿಗೆ ದೂರು ನೀಡಿದ್ದು , ದೂರಿನನ್ವಯ ಪೊಲೀಸರು ರೈತನ ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ. ಶ್ರೀರಂಗಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ